ಫೆ.5ರಂದು ಚಲನಚಿತ್ರೋತ್ಸವ ಸಮಾರೋಪ
ಬೆಂಗಳೂರು, ಫೆ. 1: ಮೈಸೂರಿನ ಅರಮನೆ ಮುಂಭಾಗದಲ್ಲಿ ಫೆ.5 ಸಂಜೆ ಗಂಟೆ 5ಕ್ಕೆ 8ನೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಚಲನ ಚಿತ್ರೋತ್ಸವ ಸಂಘಟನಾ ಸಮಿತಿಯ ಸದಸ್ಯ ಕಾರ್ಯದಶಿ ಎಚ್.ಬಿ.ದಿನೇಶ್ ತಿಳಿಸಿದ್ದಾರೆ.
ಕನ್ನಡ ಚಿತ್ರರಂಗದ ಖ್ಯಾತ ನಟ ನಟಿಯರು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದು, ಅಂದು ಕನ್ನಡ ಚಿತ್ರೋದ್ಯಮಕ್ಕೆ ರಜೆಯನ್ನು ಘೋಷಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಿಕೊಳ್ಳಲಿದ್ದು, ಪ್ರಶಸ್ತಿ ವಿತರಣೆಯನ್ನು ರಾಜ್ಯದ ರಾಜ್ಯಪಾಲ ವಜುಭಾಯಿ ವಾಲಾ ಪ್ರದಾನ ಮಾಡಲಿದ್ದಾರೆಂದು ತಿಳಿಸಿದ್ದಾರೆ.
Next Story





