Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಿದ್ದಾ ಕಾನ್ಸುಲ್ ಜನರಲ್ ಆಗಿ ನೂರ್...

ಜಿದ್ದಾ ಕಾನ್ಸುಲ್ ಜನರಲ್ ಆಗಿ ನೂರ್ ರಹ್ಮಾನ್ ಶೇಖ್

ವಾರ್ತಾಭಾರತಿವಾರ್ತಾಭಾರತಿ1 Feb 2016 11:55 PM IST
share
ಜಿದ್ದಾ ಕಾನ್ಸುಲ್ ಜನರಲ್ ಆಗಿ ನೂರ್ ರಹ್ಮಾನ್ ಶೇಖ್

ಜಿದ್ದಾ, ಫೆ. 1: ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ಭಾರತೀಯ ಖಾಯಂ ಮಿಶನ್‌ನ ಪ್ರಥಮ ಕಾರ್ಯದರ್ಶಿಯಾಗಿರುವ ಮುಹಮ್ಮದ್ ನೂರ್ ರಹ್ಮಾನ್ ಶೇಖ್‌ರನ್ನು ಜಿದ್ದಾದ ಭಾರತೀಯ ಕಾನ್ಸುಲ್ ಜನರಲ್ ಆಗಿ ನೇಮಿಸಲಾಗಿದೆ.
ಹಾಲಿ ಕಾನ್ಸುಲರ್ ಜನರಲ್ ಬಿ.ಎಸ್. ಮುಬಾರಕ್ ಜಿದ್ದಾದಲ್ಲಿನ ತನ್ನ ಮೂರು ವರ್ಷಗಳ ಅವಧಿಯ ಪೈಕಿ ಎರಡು ವರ್ಷಗಳನ್ನು ಪೂರೈಸಿ ಭಾರತಕ್ಕೆ ವಾಪಸಾಗುತ್ತಿದ್ದಾರೆ.
ತನ್ನ ನೂತನ ನೇಮಕಾತಿಯ ಬಗ್ಗೆ ಶೇಖ್ ಹರ್ಷ ವ್ಯಕ್ತಪಡಿಸಿದ್ದಾರೆ. ‘‘ಜಿದ್ದಾದಲ್ಲಿ ಭಾರತೀಯ ಕಾನ್ಸುಲರ್ ಜನರಲ್ ಆಗಿ ನನ್ನನ್ನು ನೇಮಕ ಮಾಡಿರುವ ಸುದ್ದಿ ನನ್ನ ಹುಟ್ಟಿದ ದಿನದಂದು ನನಗೆ ತಲುಪಿತು. ಅದು ನನ್ನ ಹುಟ್ಟಿದ ದಿನದ ಸಂತೋಷವನ್ನು ಇಮ್ಮಡಿಗೊಳಿಸಿತು’’ ಎಂದು ಶೇಖ್ ಶನಿವಾರ ತನ್ನ ಫೇಸ್‌ಬುಕ್ ಪುಟದಲ್ಲಿ ಬರೆದಿದ್ದಾರೆ.
ಶೇಖ್ ಇತ್ತೀಚಿನವರೆಗೂ ಜಿದ್ದಾದಲ್ಲಿ ಉಪ ಕಾನ್ಸುಲ್ ಜನರಲ್ ಹಾಗೂ ಹಜ್ ಕಾನ್ಸುಲ್ ಆಗಿ ಕಾರ್ಯನಿರ್ವಹಿಸಿದ್ದರು. ಅವರು ಮೂರು ತಿಂಗಳ ಹಿಂದೆಯಷ್ಟೇ ನ್ಯೂಯಾರ್ಕ್‌ಗೆ ತೆರಳಿದ್ದರು.
ತಾನು ಅನುಬಂಧ ಹೊಂದಿರುವ ನಗರಕ್ಕೆ ಶೇಖ್ ವಾಪಸಾಗುತ್ತಿದ್ದಾರೆ. ಅವರು ಜಿದ್ದಾ ಮತ್ತು ಸುತ್ತಮುತ್ತಲಿನ ಭಾರತೀಯ ನಿವಾಸಿಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ.
ಮಣಿಪುರದ ಇಂಫಾಲ ನಿವಾಸಿಯಾಗಿರುವ ಶೇಖ್, ಭಾರತೀಯ ವಿದೇಶ ಸೇವೆ (ಐಎಫ್‌ಎಸ್) ಅಧಿಕಾರಿ. ಅವರ ಮೊದಲ ಆದ್ಯತೆ ರಾಷ್ಟ್ರೀಯ ರಕ್ಷಣಾ ಅಕಾಡಮಿ (ಎನ್‌ಡಿಎ) ಹಾಗೂ ಎರಡನೆಯದು ರಾಜತಾಂತ್ರಿಕತೆ.
ಭಾರತೀಯ ವಿದೇಶ ವ್ಯವಹಾರಗಳ ಸಚಿವಾಲಯಕ್ಕೆ ಜಿದ್ದಾ ಕಾನ್ಸುಲ್ ಜನರಲ್ ಅತ್ಯಂತ ಮಹತ್ವದ ಹುದ್ದೆಯಾಗಿದೆ. ಯಾಕೆಂದರೆ, ಪ್ರತಿ ವರ್ಷ ಹಜ್‌ಗೆ ತೆರಳುವ ಸುಮಾರು 1,70,000 ಭಾರತೀಯರಿಗೆ ವ್ಯವಸ್ಥೆಗಳನ್ನು ಮಾಡಿಕೊಡುವ ಜವಾಬ್ದಾರಿಯನ್ನು ಅದು ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X