ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ-ಪದಾಧಿಕಾರಿ ಸಭೆ
ಮಂಗಳೂರು:ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಸಭೆಯು ಇತ್ತೀಚೆಗೆ ಜೆಪ್ಪುನಲ್ಲಿರುವ ಬ್ಲಾಕ್ ಕಚೇರಿಯಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯ ವಹಿಸಿದ ಮಾತನಾಡಿದ ನೂತನ ಬ್ಲಾಕ್ ಅಧ್ಯಕ ಕೆ. ಬಾಲಕೃಷ್ಣ ಶೆಟ್ಟಿ ಪಕ್ಷವನ್ನು ಬೂತ್ ಮಟ್ಟದಲ್ಲಿ ಸಂಘಟಿಸಲು ಎಲ್ಲಾ ಪದಾಧಿಕಾರಿಗಳ ಸಹಕಾರ ಮತ್ತು ಸಲಹೆ ಅಗತ್ಯವಾಗಿದೆ. ಪ್ರತಿಯೊಬ್ಬರು ಸಂಘಟನೆ ಕೆಲಸದಲ್ಲಿ ಕೈ ಜೋಡಿಸಬೇಕು. ಮುಂದಿನ ದಿನಗಳಲ್ಲಿ ಬ್ಲಾಕ್ ವ್ಯಾಪ್ತಿಯಲ್ಲಿರುವ ಎಲ್ಲಾ ವಾರ್ಡ್‌ಗಳಲ್ಲಿ ಕಾರ್ಯಕರ್ತರ ಸಭೆ ನಡೆಸಿ, ಅವರ ಅಹವಾಲುಗಳನ್ನು ಕೇಳಲಾಗುವುದು. ಆ ನಿಟ್ಟಿನಲ್ಲಿ ಪ್ರತಿಯೊಂದು ವಾರ್ಡ್‌ಗಳಿಗೆ ಬ್ಲಾಕ್ ಪದಾಧಿಕಾರಿಗಳನ್ನು ಉಸ್ತುವಾರಿಗಳನ್ನಾಗಿ ನೇಮಿಸಲಾಗುವುದು. ಜೊತೆಯಲ್ಲಿ ಮುಂಚೂಣಿ ಘಟಕಗಳಿಗೆ ಹೆಚ್ಚಿನ ಪ್ರಾಶಸತ್ಯ ನೀಡಿ ಕಾರ್ಯಕ್ರಮಗಳನ್ನು ಆಯೋಜಿಸಲು ಪ್ರೇರೇಪಿಸಲಾಗುವುದು ಎಂದರು.
ಸಭೆಯಲ್ಲಿ ಎಐಸಿಸಿ ಸದಸ್ಯ ಪಿ.ವಿ. ಮೋಹನ, ಮಾಜಿ ಬ್ಲಾಕ್ ಅಧ್ಯಕ್ಷ ಜೆ. ಎ. ಸಲೀಮ್, ಜಿಲ್ಲಾ ಕಾರ್ಯದರ್ಶಿ ಟಿ.ಕೆ. ಸುಧೀರ್, ಬ್ಲಾಕ್ ಉಪಾಧ್ಯಕ್ಷರಾದ ಸದಾಶಿವ ಅಮೀನ್, ಶೇಖರ ಸುವರ್ಣ, ಅಹಮದ್ ಬಾವಾ, ಪ್ರಧಾನ ಕಾರ್ಯದರ್ಶಿಗಳಾದ ದುರ್ಗಾಪ್ರಸಾದ್, ಶಾಫಿ ಅಹಮದ್, ಡಿ.ಸಿ.ಸಿ. ಸದಸ್ಯರಾದ ಸುರೇಶ್ ಶೆಟ್ಟಿ, ಜಯಲಕ್ಷ್ಮಿ, ಯುವ ಕಾಂಗ್ರೆಸ್ ಉಪಾಧ್ಯಕ್ಷ ರಮಾನಂದ ಪೂಜಾರಿ ಕಾರ್ಪೊರೇಟರ್‌ಗಳಾದ ಅಪ್ಪಿ, ರತಿಕಲಾ, ಘಟಕದ ಅಧ್ಯಕ್ಷರಾದ ಅಬೂಬಕರ್ ಮೊಹಮದ್ ಹುಸೈನ್, ಪ್ರಮುಖರಾದ ಎಂ. ಫರೂಕ್, ಶೇಷಮ್ಮ, ಸರಳಾ ಕರ್ಕೇರ, ದಿನೇಶ್ ಪಿ.ಎಸ್., ಆನಂದರಾವ್ ಮೊದಲಾದವರು ಉಪಸ್ಥಿತರಿದ್ದರು.







