ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ :ಕ್ಯಾಂಪಸ್ ಫ್ರಂಟ್ ಖಂಡನೆ.

ಹೈದ್ರಾಬಾದ್ ವಿವಿ ಸಂಶೋಧನಾ ವಿದ್ಯಾರ್ಥಿ ರೋಹಿತ್‌ನನ್ನು ವೇಮುಲಾ ಆತ್ಮಹತ್ಯೆ ಪ್ರಕರಣದ ವಿರುದ್ಧ ಹೊಸದಿಲ್ಲಿಯ ಆರೆಸ್ಸೆಸ್ ಕಾರ್ಯಲಯದ ಮುಂದೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದಿಲ್ಲಿ ಪೋಲೀಸರು ಮತ್ತು ಜೊತೆಗೆ ಕೆಲವು ಆರೆಸ್ಸೆಸ್ ಬೆಂಬಲಿಗರು ಸೇರಿ ದೌರ್ಜನ್ಯವೆಸಗಿರುವುದು ಖಂಡನೀಯವಾಗಿದೆ.
ಇದು ಸಂವಿಧಾನಾತ್ಮಕ ರೀತಿಯಲ್ಲಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸಿ ಅವರ ಪ್ರತಿಭಟನಾ ಹಕ್ಕನ್ನು ಕಸಿಯುವಂತಹ ನೀಚ ಕೃತ್ಯಕ್ಕೆ ಮತ್ತು ಸಂವಿಧಾನದ ಹಕ್ಕಿನ ಕಗ್ಗೊಲೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ದೃಶ್ಯಗಳು ಸಾಕ್ಷಿಯಾಗಿದೆ.
ಅದೇರೀತಿ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೇಲೆಯು ಹಿಗ್ಗಾ ಮುಗ್ಗ ಥಳಿಸಿ ಅವರ ಕೂದಲನ್ನು ಎಳೆಯುವಂತಹ ದೃಶ್ಯಗಳು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ ಮಾತ್ರವಲ್ಲದೆ ಮಹಿಳೆಯರ ಮೇಲೆ ದೌರ್ಜನ್ಯ ನಡೆಸುವಂತಹ ಅಮಾನುಷ ಕೃತ್ಯಕ್ಕೆ ಪೊಲೀಸ್ ಇಲಾಖೆ ಸಾಕ್ಷಿಯಾಯಿತು.
ವಿದ್ಯಾರ್ಥಿಗಳ ಮೇಲೆ ದೌರ್ಜನ್ಯವೆಸಗಿದ ಪೋಲೀಸರನ್ನು ಅಮಾನತುಗೊಳಿಸಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಪೊಲೀಸರೊಂದಿಗೆ ಕೈಜೋಡಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೆಸ್ಸೆಸ್ ಗೊಂಡಾಗಳ ಮೇಲೆಯು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಬ್ದುಲ್ ರಹೀಂ ಬೆಂಗಳೂರು ಪತ್ರಿಕಾ ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.







