ಸುಳ್ಯ: ಜೆಡಿಎಸ್ ಅಭ್ಯರ್ಥಿಗಳ ನಾಮಪತ್ರ
ಸುಳ್ಯ: ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣಾ ಕಣ ನಿಧಾನಕ್ಕೆ ರಂಗೇರುತ್ತಿದ್ದು, ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಚುರುಕಾಗಿವೆ. ಈಗಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಬೆಳ್ಳಾರೆ ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು ಎಣ್ಮೂರು ತಾಲೂಕು ಪಂಚಾಯತ್ ಕ್ಷೇತ್ರವನ್ನು ಹೊರತುಪಡಿಸಿ ಉಳಿದ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಬಿಜೆಪಿ ಘೋಷಿಸಿದೆ. ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಫೆ.5ರಂದು ಬಿಡುಗಡೆಗೊಳಿಸಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವೆಂಕಪ್ಪ ಗೌಡ ತಿಳಿಸಿದ್ದಾರೆ.
ನಾಮಪತ್ರ: ಜೆಡಿಎಸ್ ಕಡೆಯಿಂದ ಇಂದು ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿದೆ. ಗುತ್ತಿಗಾರು ಜಿ.ಪಂ.ಕ್ಷೇತ್ರಕ್ಕೆ ರಾಮಚಂದ್ರ ಗೌಡ ಬಳ್ಳಡ್ಕ, ಗುತ್ತಿಗಾರು ಜಿ.ಪಂ.ಕ್ಷೇತ್ರಕ್ಕೆ ಜ್ಯೋತಿ ಪ್ರೇಮಾನಂದ, ಸುಬ್ರಹ್ಮಣ್ಯ ತಾಲೂಕು ಪಂಚಾಯತ್ ಕ್ಷೇತ್ರಕ್ಕೆ ನಾರಾಯಣ ಅಗ್ರಹಾರ, ಮಡಪ್ಪಾಡಿ ತಾ.ಪಂ.ಕ್ಷೇತ್ರಕ್ಕೆ ವಿನೂಪ್ ಮಲ್ಲಾರ ನಾಮಪತ್ರ ಸಲ್ಲಿಸಿದ್ದಾರೆ. ಸುಬ್ರಹ್ಮಣ್ಯ ತಾಲೂಕು ಪಂಚಾಯತ್ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ನೆಕ್ರಾಜೆ ನಾಮಪತ್ರ ಸಲ್ಲಿಸಿದ್ದಾರೆ.





 copy.jpg.jpg)

