Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕುಡಿದ ಚಾಲಕ ಆತ್ಮಹತ್ಯಾ ಬಾಂಬರ್...

ಕುಡಿದ ಚಾಲಕ ಆತ್ಮಹತ್ಯಾ ಬಾಂಬರ್ ಇದ್ದಂತೆ:ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ3 Feb 2016 7:14 PM IST
share
ಕುಡಿದ ಚಾಲಕ ಆತ್ಮಹತ್ಯಾ ಬಾಂಬರ್ ಇದ್ದಂತೆ:ನ್ಯಾಯಾಲಯ

ಹೊಸದಿಲ್ಲಿ,ಫೆ.3: ಪಾನಮತ್ತ ಚಾಲಕ ‘‘ಸಜೀವ ಆತ್ಮಹತ್ಯಾ ಮಾನ ಬಾಂಬ್’’ಇದ್ದಂತೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಇಲ್ಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದಕ್ಕಾಗಿ ವ್ಯಕ್ತಿಯೋರ್ವನಿಗೆ ಕೆಳ ನ್ಯಾಯಾಲಯವು ವಿಧಿಸಿರುವ ಆರು ದಿನಗಳ ಜೈಲುಶಿಕ್ಷೆಯನ್ನು ಎತ್ತಿ ಹಿಡಿದಿದೆ.

 ವಿಚಾರಣಾ ನ್ಯಾಯಾಲಯವು ತನಗೆ ವಿಧಿಸಿರುವ ಆರು ದಿನಗಳ ಜೈಲುಶಿಕ್ಷೆ ಮತ್ತು 2,000 ರೂ.ದಂಡವನ್ನು ಪ್ರಶ್ನಿಸಿ ಬದರಪುರ ನಿವಾಸಿ ಜೋಗಿ ವರ್ಗೀಸ್ ಎಂಬಾತ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ ನ್ಯಾ.ಲೋಕೇಶ ಕುಮಾರ್ ಅವರು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ವರ್ಗೀಸ್ ದ್ವಿಚಕ್ರ ವಾಹನವನ್ನು ಚಲಾಯಿಸುತ್ತಿದ್ದಾಗ ಆತನ ರಕ್ತದಲ್ಲಿ ಅನುಮತಿಸಲ್ಪಟ್ಟ ಪ್ರಮಾಣಕ್ಕಿಂತಲೂ 42 ಪಟ್ಟು ಅಧಿಕ ಮದ್ಯದ ಅಂಶ ಪತ್ತೆಯಾಗಿದ್ದು ವಿಚಾರಣಾ ನ್ಯಾಯಾಲಯವು ಆತನಿಗೆ ವಿಧಿಸಿರುವ ಶಿಕ್ಷೆ ಸರಿಯಾಗಿಯೇ ಇದೆ. ಈ ವ್ಯಕ್ತಿ ನ್ಯಾಯಾಲಯದಿಂದ ಯಾವುದೇ ಅನುಕಂಪಕ್ಕೆ ಅನರ್ಹನಾಗಿದ್ದಾನೆ ಎಂದು ನ್ಯಾಯಾಲಯವು ಹೇಳಿತು.
 ಅರ್ಜಿದಾರನು ಇಷ್ಟು ಪಾನಮತ್ತನಾಗಿ ವಾಹನವನ್ನು ಚಲಾಯಿಸುತ್ತಿದ್ದಾಗ ಆತ ಸಜೀವ ಆತ್ಮಹತ್ಯಾ ಮಾನವ ಬಾಂಬ್‌ನಂತೆ ಇದ್ದ ಎನ್ನುವುದು ನಮ್ಮ ಅಭಿಪ್ರಾಯ. ಇಂತಹ ಸ್ಥಿತಿಯಲ್ಲಿ ಚಾಲನೆ ಮಾಡುವಾಗ ಆತ ಅತ್ಯಂತ ಸಣ್ಣ ತಪ್ಪು ಮಾಡಿದರೂ ಅದು ಇತರರ ಮತ್ತು ಸ್ವತಃ ಆತನ ಜೀವಕ್ಕೇ ಮಾರಕವಾಗಿರುತ್ತಿತ್ತು ಎಂದ ನ್ಯಾಯಾಲಯವು, ವರ್ಗೀಸ್‌ನನ್ನು ಕಸ್ಟಡಿಗೆ ತೆಗೆದುಕೊಳ್ಳುವಂತೆ ಮತ್ತು ಶಿಕ್ಷೆಯನ್ನು ಅನುಭವಿಸಲು ಜೈಲಿಗೆ ಕಳುಹಿಸುವಂತೆ ಪೊಲೀಸರಿಗೆ ಆದೇಶಿಸಿತು.
   ಪಾನಮತ್ತ ಚಾಲನೆಗಾಗಿ ವಿಚಾರಣಾ ನ್ಯಾಯಾಲಯವು ವರ್ಗೀಸ್‌ನನ್ನು ಕಳೆದ ವರ್ಷದ ಡಿ.21ರಂದು ದೋಷಿಯೆಂದು ಘೋಷಿಸಿತ್ತಲ್ಲದೆ,ಆರು ತಿಂಗಳ ಅವಧಿಗೆ ಆತನ ವಾಹನ ಚಾಲನೆ ಪರವಾನಿಗೆಯನ್ನು ರದ್ದುಗೊಳಿಸಿ ಹೊಸದಾಗಿ ಚಾಲನಾ ಪರೀಕ್ಷೆಗೆ ಹಾಜರಾಗುವಂತೆ ಆದೇಶಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X