Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಇನ್ವೆಸ್ಟ್ ಕರ್ನಾಟಕ’ದಿಂದ ಜನರ ತೆರಿಗೆ...

‘ಇನ್ವೆಸ್ಟ್ ಕರ್ನಾಟಕ’ದಿಂದ ಜನರ ತೆರಿಗೆ ಹಣ ಲಪಟಾಯಿಸುವ ಹುನ್ನಾರ: ಆರೋಪ

ವಾರ್ತಾಭಾರತಿವಾರ್ತಾಭಾರತಿ3 Feb 2016 11:48 PM IST
share
‘ಇನ್ವೆಸ್ಟ್ ಕರ್ನಾಟಕ’ದಿಂದ  ಜನರ ತೆರಿಗೆ ಹಣ ಲಪಟಾಯಿಸುವ ಹುನ್ನಾರ: ಆರೋಪ

ರೈತರಿಂದ ಪ್ರತಿಭಟನೆ: ಬಂಧನ-ಬಿಡುಗಡೆ
ಬೆಂಗಳೂರು, ಫೆ. 3: ‘ಇನ್ವೆಸ್ಟ್ ಕರ್ನಾಟಕ’ ಹೂಡಿಕೆದಾರರ ಸಮಾವೇಶದ ನೆಪದಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಜನರ ತೆರಿಗೆ ಹಣವನ್ನು ಲಪಟಾಯಿಸಲು ಹುನ್ನಾರ ನಡೆಸಿವೆ ಎಂದು ಆರೋಪಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ಕಾರ್ಯಕರ್ತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಬುಧವಾರ ಇಲ್ಲಿನ ಗಾಂಧಿನಗರದಿಂದ ಸ್ವಾತಂತ್ರ ಉದ್ಯಾನವನದ ವರೆಗೆ ರ್ಯಾಲಿ ನಡೆಸಿದ ನೂರಾರು ರೈತರು ಇನ್ವೆಸ್ಟ್ ಕರ್ನಾಟಕ ಹೂಡಿಕೆದಾರರ ಸಮಾವೇಶವನ್ನು ವಿರೋಧಿಸಿ ಧಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು. ಅರಮನೆ ಮೈದಾನದತ್ತ ನುಗ್ಗಲು ಮುಂದಾದ ರೈತರನ್ನು ಪೊಲೀಸರು ಬಂಧಿಸಿ, ಬಳಿಕ ಬಿಡುಗಡೆ ಮಾಡಿದರು.
ಕಳ್ಳರ ಪುಷ್ಟೀಕರಣ:  ‘ಇನ್ವೆಸ್ಟ್ ಕರ್ನಾಟಕ’ ಹೂಡಿಕೆದಾರರ ಸಮಾವೇಶ ದೇಶದ ಜನರ ತೆರಿಗೆ ಹಣವನ್ನು ಲೂಟಿ ಮಾಡುವ ಹುನ್ನಾರವಷ್ಟೇ. ಹನ್ನೊಂದು ವರ್ಷಗಳಲ್ಲಿ ದೇಶದ ತೆರಿಗೆ ಹಣವನ್ನು ಬಂಡವಾಳಿಗರಿಗೆ ಸುಮಾರು 40 ಲಕ್ಷ ಕೋಟಿ ರೂ.ಗಳಷ್ಟು ಸಹಾಯ ದನ ಮತ್ತು ತೆರಿಗೆ ವಿನಾಯಿತಿ ನೀಡುವ ಮೂಲಕ ಕಳ್ಳರನ್ನು ಪುಷ್ಟೀಕರಿಸಲಾಗಿದೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ದೂರಿದರು.
ರಾಜ್ಯ ಸರಕಾರದಲ್ಲಿರುವ ಕೆಲ ರಾಜ ಕೀಯ ನಾಯಕರು, ಕೆಲ ಅಧಿಕಾರಿಗಳು ಉದ್ಯಮಪತಿಗಳೊಂದಿಗೆ ಪಾಲುದಾರರಾಗಿದ್ದು, ಇವರೆಲ್ಲರೂ ಸೇರಿ ಸಾರ್ವಜನಿಕ ಸಂಪತ್ತನ್ನು ಲೂಟಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಟೀಕಿಸಿದ ಅವರು, ಟೋಪಿ ಕಂಪೆನಿಗಳಿಗೆ ಸಾವಿರಾರು ಕೋಟಿ ರೂ.ಬಡ್ಡಿ ರಹಿತ ಸಾಲ ನೀಡಲಾಗುತ್ತಿದೆ ಎಂದು ಆಕ್ಷೇಪಿಸಿದರು.
ಕೈಗಾರಿಕಾಭಿವೃದ್ಧಿ, ಮೂಲ ಸೌಕರ್ಯದ ಅಭಿವೃದ್ಧಿ ನೆಪದಲ್ಲಿ ರೈತರ ಕೃಷಿ ಭೂಮಿಯನ್ನು ದೋಚಲಾಗುತ್ತಿದೆ ಎಂದ ಅವರು, ಶ್ರೀಮಂತರೇ ದೇಶದ ಅಧಃಪತನಕ್ಕೆ ಕಾರಣರಾಗಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಸಮಾನತೆ, ಸಮಾನ ಹಂಚಿಕೆ, ಸಮಾನ ನಾಗರಿಕತೆಯ ನೀತಿಗಳನ್ನು ನಾಶ ಮಾಡಿ ಪ್ರಜಾಪ್ರಭುತ್ವವನ್ನು ಮತ್ತು ಸಂವಿಧಾನದ ಅಶಯಗಳನ್ನು ಧಿಕ್ಕರಿಸಿ ಬರೀ ಶ್ರೀಮಂತರನ್ನು ಉತ್ಪಾದಿಸುವ ಸಮಾವೇಶಗಳ ಅಗತ್ಯವೇನು ಎಂದು ಪ್ರಶ್ನಿಸಿದರು.
‘ಇನ್ವೆಸ್ಟ್-ಕರ್ನಾಟಕ’ ಬಂಡವಾಳ ಹೂಡಿಕೆದಾರರ ಸಮಾವೇಶ ಅಭಿವೃದ್ಧಿಯ ಬದಲಿಗೆ ಜನತೆಯ ಬದುಕಿನ ವಿನಾಶಕ್ಕಾಗಿ ನಡೆಸಲಾಗುತ್ತಿ ದ್ದು, ಇದನ್ನು ವಿರೋಧಿಸಿ ಅಸಹಕಾರ ಚಳವಳಿ ಆಗಲೇಬೇಕು. ಈ ಚಳವಳಿ ಇಲ್ಲಿಗೆ ನಿಲ್ಲಿಸುವುದಿಲ್ಲ ಎಂದು ಇದೇ ವೇಳೆ ಎಚ್ಚರಿಸಿದರು.
 ಸಂಘದ ಮುಖಂಡರಾದ ಜಡಿಯಪ್ಪದೇಸಾಯಿ, ವೆಂಕಟನಾರಾಯಣಪ್ಪ, ಅಬ್ಬಣಿ ಶಿವಪ್ಪ, ಗಂಗಾಧರ ಮೇಟಿ, ರಘು, ಶಿವಕುಮಾರ್, ಆದಿಲ್ ಅಹ್ಮದ್, ತಬ್ರೀಝ್ ಪಾಷ, ಆಂಜನೇಯರೆಡ್ಡಿ, ಪ್ರಕಾಶ್, ಸಂಪಂಗಿ ರಾಮಯ್ಯ, ಸುಶೀಲಾ, ಗೋವಿಂದ ರಾಜ್ ಮತ್ತಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X