ಬೆಳ್ಳಾರೆ ಜಿ.ಪಂ. ಬಿಜೆಪಿ ಅಭ್ಯರ್ಥಿಯಾಗಿ ಮನ್ಮಥ
ಸುಳ್ಯ: ಜಿ.ಪಂ., ತಾ.ಪಂ. ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಸುಳ್ಯ ತಾಲೂಕಿನ ಎಲ್ಲ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಘೋಷಣೆಯಾದಂತಾಗಿದೆ.
ಮೊದಲ ಪಟ್ಟಿಯಲ್ಲಿ ಬಾಕಿ ಉಳಿದಿದ್ದ ಬೆಳ್ಳಾರೆ ಜಿ.ಪಂ. ಕ್ಷೇತ್ರದ ಅಭ್ಯರ್ಥಿಯಾಗಿ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಮಾಜಿ ಅದ್ಯಕ್ಷ ಎಸ್.ಎನ್.ಮನ್ಮಥ ಹಾಗೂ ಎಣ್ಮೂರು ತಾಲೂಕು ಪಂಚಾಯತ್ ಕ್ಷೇತ್ರದ ಅಭ್ಯರ್ಥಿಯಾಗಿ ಶುಭದಾ ಎಸ್.ರೈ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಪ್ರಕಟನೆ ತಿಳಿಸಿದೆ.
Next Story





