Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಎತ್ತಿನಹೊಳೆ- ಕುಮ್ಮಿ ಹಕ್ಕು...

ಮಂಗಳೂರು: ಎತ್ತಿನಹೊಳೆ- ಕುಮ್ಮಿ ಹಕ್ಕು ಸಮಸ್ಯೆ ಬಗ್ಗೆ ಕಾಂಗ್ರೆಸ್‌ನಿಂದ ಸುಳ್ಳು ಆರೋಪ: ಪಾಲೆಮಾರ್

ವಾರ್ತಾಭಾರತಿವಾರ್ತಾಭಾರತಿ4 Feb 2016 7:23 PM IST
share

ಮಂಗಳೂರು, ಫೆ. 4: ಎತ್ತಿನಹೊಳೆ ಹಾಗೂ ಕುಮ್ಕಿ ಹಕ್ಕು ಸಮಸ್ಯೆ ಸೃಷ್ಟಿಸಿದ್ದು ಬಿಜೆಪಿಯವರು ಎಂಬುದಾಗಿ ಸಚಿವ ವಿನಯಕುಮಾರ್ ಸೊರಕೆ ನೀಡಿರುವ ಹೇಳಿಕೆ ಶುದ್ಧ ಸುಳ್ಳು. ಕಾಂಗ್ರೆಸ್‌ನವರು ಜನರ ಹಾದಿ ತಪ್ಪಿಸಲಷ್ಟೇ ಹೇಳಿಕೆ ನೀಡುತ್ತಿದ್ದಾರೆ ಎಂದು ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಪ್ರತಿಕ್ರಿಯಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಆಡಳಿತ ಕಾಲದಲ್ಲಿ ಡಿಪಿಆರ್ ಮೂಲಕ ಯೋಜನೆ ಮಾಡಲು ನಿರ್ಧಾರ ತೆಗೆದುಕೊಂಡಿದ್ದಷ್ಟೇ, ಆದರೆ ಯೋಜನೆಯನ್ನು ತೆಗೆದುಕೊಂಡು ಅನುಷ್ಠಾನಿಸಿದ್ದು ಕಾಂಗ್ರೆಸ್ ಸರ್ಕಾರ. ಇಂದು ಯೋಜನೆಗೂ ಸರ್ಕಾರ ಹಣ ಮಂಜೂರು ಮಾಡಿದೆ. ಅದನ್ನು ನಿಲ್ಲಿಸಬಹುದಾಗಿತ್ತು ಯೋಜನೆ ರದ್ದು ಮಾಡುವ ಅಧಿಕಾರ ಕಾಂಗ್ರೆಸ್ ಜನಪ್ರತಿನಿಧಿಗಳಿಗಿಲ್ಲವೇ ಎಂದವರು ಪ್ರಶ್ನಿಸಿದರು.
ಎತ್ತಿನಹೊಳೆ ಡಿಪಿಆರ್ ( ಯೋಜನಾ ವಿಸ್ತೃತ ವರದಿ) ತಯಾರಿಸುವಾಗ ತಾನು ಸಚಿವನಾಗಿದ್ದೆ. ಬಿಜೆಪಿ ಸರ್ಕಾರ ಎತ್ತಿನಹೊಳೆ ಯೋಜನೆ ಡಿಪಿಆರ್ ಮಾತ್ರ ತಯಾರಾಗಿತ್ತು. ಸರ್ಕಾರ ಕೇವಲ 2 ಕೋಟಿ ರೂ. ನೀಡಿತ್ತು ಅದನ್ನು ಅನುಷ್ಠಾನಿಸಿದ್ದು ಕಾಂಗ್ರೆಸ್ ಸರ್ಕಾರ. ಆದರೆ ಇಂದು ಬಿಜೆಪಿ ಮೇಲೆ ಗೂಬೆ ಕೂರಿಸಲಾಗುತ್ತಿದೆ ಎಂದರು.
ಬಿಜೆಪಿಯವರೇ ಕುಮ್ಕಿ ಸಮಸ್ಯೆ ಸೃಷ್ಟಿಸಿದ್ದು ಎಂದಿದ್ದಾರೆ. ಸಚಿವರು- ಜನಪ್ರತಿನಿಧಿಗಳಾಗಿ ಈ ಮಾತು ಹೇಳಬಾರದಿತ್ತು. ಬಿಜೆಪಿ ಆಡಳಿತ ಕಾಲದಲ್ಲಿ ಇದೇ ಕಾಂಗ್ರೆಸ್‌ನವರು ಕುಮ್ಕಿ ಹಕ್ಕು ಸಮಸ್ಯೆ ಸೃಷ್ಟಿಸಿದ್ದರು. ಬಿಜೆಪಿ ಆಡಳಿತ ಕಾಲದಲ್ಲಿ ಕುಮ್ಮಿ ಸಮಸ್ಯೆ ನಿವಾರಿಸಲು ಮುಂದಾದಾಗ ಕೃಷಿಕರೊಬ್ಬರು ಕೋರ್ಟ್ ಮೊರೆ ಹೋಗಿದ್ದರು. ಅವರ ಹೆಸರಿನೊಂದಿಗೆ ಭಟ್ ಎಂಬುದಾಗಿ ಇದ್ದ ಮಾತ್ರಕ್ಕೆ ಅವರು ಬಿಜೆಪಿಯವರು ಎಂದೇ ಬಾವಿಸಿದ್ದಾರೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕುಮ್ಕಿ ಹಕ್ಕಿನ ಸಮಸ್ಯೆ ನೀಗಿಸುವ ಭರವಸೆ ನೀಡಿತ್ತು. ಹೀಗಾಗಿ ಕಾಂಗ್ರೆಸ್ ಈಗ ನ್ಯಾಯಾಲಯದಲ್ಲಿ ಅಫಿದವಿತ್ ಸಲ್ಲಿಸಿ ಸಮಸ್ಯೆ ನೀಗಿಸಲು ಮುಂದಾಗುತ್ತಿಲ್ಲವೇಕೆ ಎಂದು ಪ್ರಶ್ನಿಸಿದರು.
9/11 ಹಾಗೂ 11/ ಛಿ ಇವುಗಳನ್ನು ಅರಿವಿದ್ದೋ ಇಲ್ಲದೋ ದಾರಿ ತಪ್ಪಿಸುವ ಕೆಲಸ ಮಾಡುತಿತಿರುವುದು ಶುದ್ದ ತಪ್ಪು. ಈ ಬಗ್ಗೆ ಸರ್ಕಾರ ಕೇವಲ ಕಾಟಾಚಾರಕ್ಕೆ ಆದೇಶ ಮಾಡಿದೆ. ಆದರೆ ಜನತೆ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿಗೆ ಮುಂದಾದಾಗ ಅಧಿಕಾರಿಗಳು ಸ್ವೀಕರಿಸುತ್ತಿಲ್ಲ ಎಂದರು.
ಜಿಲ್ಲೆಯಲ್ಲಿ ಪೊಲೀಸ್ ವ್ಯವಸ್ಥೆ ಸಮರ್ಪಕವಾಗಿಲ್ಲ. ಇದಕ್ಕೆ ಗಮನಕೊಡುವುದು ಉಸ್ತುವಾರಿ ಮಂತ್ರಿಗಳ ಕರ್ತವ್ಯ. ಆದರೆ ಅವಿಭಜಿತ ಜಿಲ್ಲೆಯ ಮಂತ್ರಿಗಳಿಬ್ಬರು ಒಂದೊಂದು ತರ ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಾದ ಅಭಿವೃದ್ಧಿ ಕಾರ್ಯಗಳಿಗೆ ತೆಂಗಿನಕಾಯಿ ಒಡೆಯುವ ಮೂಲಕ ತಮ್ಮ ಸರ್ಕಾರದ ಸಾಧನೆ ಎನ್ನುತ್ತಿದ್ದಾರೆ ಎಂದು ಎಂದು ಟೀಕಿಸಿದರು.
ಮಾಜಿ ಮೇಯರ್ ಶಂಕರ್ ಭಟ್, ಮನಪಾ ಮಾಜಿ ಸದಸ್ಯ ಭಾಸ್ಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X