ಮಂಗಳೂರು : ಬೈಕ್ ಅಪಘಾತ: ಕಾರ್ಮಿಕ ಸಾವು
ಮಂಗಳೂರು, ಫೆ.4: ರಾಷ್ಟ್ರೀಯ ಹೆದ್ದಾರಿ ಬೈಕಂಪಾಡಿ ಸೇತುವೆ ಸಮೀಪ ನಿಯಂತ್ರಣ ತಪ್ಪಿದ ಬೈಕೊಂದು ಅಪಘಾತಕ್ಕೀಡಾದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಮೃತರನ್ನು ಕೃಷ್ಣಾಪುರದ ನಿವಾಸಿ ನವೀನ್ ರೈ ಎಂದು ಗುರುತಿಸಲಾಗಿದೆ. ಮರದ ಮಿಲ್‌ನಲ್ಲಿ ಉದ್ಯೋಗಿಯಾಗಿದ್ದ ಈತ ನಿನ್ನೆ ರಾತ್ರಿ ಕರ್ತವ್ಯ ಮುಗಿಸಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಬೈಕಂಪಾಡಿ ಸೇತುವೆಯಲ್ಲಿ ಬೈಕ್ ಹಠಾತ್ ಸವಾರನ ನಿಯಂತ್ರಣ ಕಳಕೊಂಡು ಪಲ್ಟಿಯಾಗಿದೆ ಎನ್ನಲಾಗಿದೆ. ಪರಿಣಾಮವಾಗಿ ಸವಾರ ನವೀನ್ ರೈ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಂಗಳೂರು ಉತ್ತರ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





