ಚಿಕ್ಕಬಳ್ಳಾಪುರ. ಕಾಂಗ್ರೆಸ್‌ಗೆ ದಸಂಸ ಬೆಂಬಲ
ಚಿಂತಾಮಣಿ, ಫೆ.4: ದಲಿತ ಸಂಘರ್ಷ ಸಮಿತಿಯ ಚಿಂತಾಮಣಿ ಶಾಖೆಯು ಫೆ.13 ರಂದು ನಡೆಯಲಿರುವ ಜಿಲ್ಲಾ ಹಾಗೂ ತಾಪಂ ಚುನಾವಣೆಯಲ್ಲಿ ಮಾಜಿ ಶಾಸಕ ಡಾ.ಎಂ.ಸಿ.ಸುಧಾಕರ್ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತದೆ ಎಂದು ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಘಟನಾ ಸಂಚಾಲಕ ಎ.ರಾಮಯ್ಯ ತಿಳಿಸಿದ್ದಾರೆ. ಈ ಸಂಬಂಧ ಹೇಳಿಕೆಯೊಂದನ್ನು ನೀಡಿರುವ ಅವರು, ನಗರದ ಸಾರ್ವಜನಿಕ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ತಾಲೂಕು ಸಂಚಾಲಕ ಸೀಕಲ್ಲು ಎಸ್.ಸಿ.ನಾರಾಯಣಸ್ವಾಮಿ ಅಧ್ಯಕ್ಷತೆಯಲ್ಲಿ ದಸಂಸ ನಿರ್ವಾಹಕ ಸಮಿತಿ ಹಾಗೂ ವಿಶೇಷ ಆಹ್ವಾನಿತರ ಸಭೆೆಯನ್ನ್ಲು ಆಯೋಜಿಸಿದ್ದು, ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ಬಗ್ಗೆ ತೀರ್ಮಾನಿಸಲಾಯಿತು ಎಂದರು.
Next Story





