Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ಲಾಮ್ ಮೇಲಿನ ದಾಳಿ ಎಲ್ಲ ಧರ್ಮಗಳ...

ಇಸ್ಲಾಮ್ ಮೇಲಿನ ದಾಳಿ ಎಲ್ಲ ಧರ್ಮಗಳ ಮೇಲಿನ ದಾಳಿ: ಮಸೀದಿಗೆ ಭೇಟಿ ನೀಡಿದ ಒಬಾಮ ಪ್ರತಿಪಾದನೆ

ವಾರ್ತಾಭಾರತಿವಾರ್ತಾಭಾರತಿ4 Feb 2016 11:42 PM IST
share
ಇಸ್ಲಾಮ್ ಮೇಲಿನ ದಾಳಿ ಎಲ್ಲ ಧರ್ಮಗಳ ಮೇಲಿನ ದಾಳಿ: ಮಸೀದಿಗೆ ಭೇಟಿ ನೀಡಿದ ಒಬಾಮ ಪ್ರತಿಪಾದನೆ

ವಾಶಿಂಗ್ಟನ್, ಫೆ. 4: ಅಮೆರಿಕದ ಮಸೀದಿಯೊಂದಕ್ಕೆ ಅಧ್ಯಕ್ಷ ಬರಾಕ್ ಒಬಾಮ ಬುಧವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಸ್ಲಾಮ್ ಮೇಲೆ ನಡೆಯುವ ದಾಳಿಗಳು ಎಲ್ಲ ಧರ್ಮಗಳ ಮೇಲೆ ನಡೆಯುವ ದಾಳಿಗಳಾಗಿವೆ ಎಂದು ಘೋಷಿಸಿದರು.
ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಆಕಾಂಕ್ಷಿ ಡೊನಾಲ್ಡ್ ಟ್ರಂಪ್ ಮತ್ತು ಆ ಪಕ್ಷದ ಇತರ ಆಕಾಂಕ್ಷಿಗಳು ಹರಡುತ್ತಿರುವ ಇಸ್ಲಾಂ ವಿರೋಧಿ ಭಾವನೆಗಳನ್ನು ತಡೆಯುವ ಪ್ರಯತ್ನವಾಗಿ ಒಬಾಮ ಮಸೀದಿಗೆ ಭೇಟಿ ನೀಡಿದ್ದಾರೆ.


‘‘ಒಂದು ಧರ್ಮದ ಮೇಲೆ ನಡೆಯುವ ದಾಳಿ ನಮ್ಮ ಎಲ್ಲ ಧರ್ಮಗಳ ಮೇಲೆ ನಡೆಯುವ ದಾಳಿ ಎನ್ನುವುದನ್ನು ನಾವು ಅರ್ಥ ಮಾಡಿಕೊಳ್ಳಬೇಕು’’ ಎಂದು ಮೇರಿಲ್ಯಾಂಡ್‌ನ ಕ್ಯಾಟನ್ಸ್‌ವಿಲ್‌ನ ಮಸೀದಿಯಲ್ಲಿ ಮಾತನಾಡಿದ ಒಬಾಮ ಹೇಳಿದರು. ‘‘ಯಾವುದೇ ಧಾರ್ಮಿಕ ಗುಂಪಿನ ಮೇಲೆ ದಾಳಿ ನಡೆದಾಗ, ಅದರ ವಿರುದ್ಧ ದನಿ ಎತ್ತುವ ಜವಾಬ್ದಾರಿ ನಮ್ಮೆಲ್ಲರದ್ದು’’ ಎಂದರು.
  ಡಿಸೆಂಬರ್‌ನಲ್ಲಿ ಕ್ಯಾಲಿಫೋರ್ನಿಯದ ದಂಪತಿಯೊಂದು 14 ಮಂದಿಯನ್ನು ಕೊಂದ ಘಟನೆಯ ಬಳಿಕ, ಮುಸ್ಲಿಮರ ಅಮೆರಿಕ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ ವಿಧಿಸಬೇಕು ಎಂಬುದಾಗಿ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಆಕಾಂಕ್ಷಿ ಡೊನಾಲ್ಡ್ ಟ್ರಂಪ್ ಕರೆ ನೀಡಿರುವುದನ್ನು ಸ್ಮರಿಸಬಹುದಾಗಿದೆ.
ಅಧ್ಯಕ್ಷೀಯ ಅಭ್ಯರ್ಥಿಯಾಗಲು ರಿಪಬ್ಲಿಕನ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಇತರ ಅಭ್ಯರ್ಥಿ ಆಕಾಂಕ್ಷಿಗಳೂ ಡೊನಾಲ್ಡ್ ಟ್ರಂಪ್ ದಾರಿಯಲ್ಲೇ ಸಾಗುತ್ತಿದ್ದಾರೆ. 10,000 ಸಿರಿಯ ನಿರಾಶ್ರಿತರಿಗೆ ದೇಶದಲ್ಲಿ ಆಶ್ರಯ ನೀಡುವ ಅಧ್ಯಕ್ಷ ಒಬಾಮರ ನಿಲುವನ್ನು ಅವರು ವಿರೋಧಿಸಿದ್ದಾರೆ. ಇದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಅಪಾಯ
ಗಳನ್ನು ಹುಟ್ಟು ಹಾಕುತ್ತದೆ ಎಂದು ಅವರು ವಾದಿಸುತ್ತಾರೆ.
ಮಸೀದಿಗಳು ತಮ್ಮದೇ ಪ್ರಾರ್ಥನಾಲಯಗಳಂತೆ ಇವೆ ಎಂಬುದನ್ನು ಮನವರಿಕೆ ಮಾಡಿಕೊಳ್ಳುವಂತೆ, ಈ ವರೆಗೆ ಮಸೀದಿಗಳಿಗೆ ಹೋಗದ ಹಾಗೂ ಟಿವಿಯಲ್ಲಿ ವೀಕ್ಷಿಸುತ್ತಿರುವ ಅಮೆರಿಕನ್ನರಿಗೆ ಅಧ್ಯಕ್ಷರು ಕರೆ ನೀಡಿದರು.
 ‘‘ನಿಮ್ಮದೇ ಚರ್ಚ್ ಅಥವಾ ಸಿನಗಾಗ್ (ಯಹೂದಿಗಳ ಆರಾಧನಾಲಯ) ಅಥವಾ ದೇವಾಲಯಗಳನ್ನು ಕಲ್ಪಿಸಿಕೊಳ್ಳಿ ಹಾಗೂ ಇಂಥ ಮಸೀದಿಗಳು ಅವುಗಳಂತೆಯೇ ಇವೆ ಎಂಬುದನ್ನು ಗಮನಿಸಿ’’ ಎಂದರು.
ಒಬಾಮ ಮಾತನಾಡುವ ಮೊದಲು, ಓರ್ವ ಪುರುಷ ಮತ್ತು ಓರ್ವ ಮಹಿಳೆ ಕುರ್‌ಆನ್‌ನ
ವಚನಗಳನ್ನು ಪಠಿಸಿದರು. ಬಳಿಕ ಇಬ್ಬರು ಬಾಲಕರು ಮತ್ತು ಇಬ್ಬರು ಬಾಲಕಿಯರು ಅಮೆರಿಕ ಮತ್ತು ಮೇರಿಲ್ಯಾಂಡ್ ರಾಜ್ಯದ ಧ್ವಜಗಳನ್ನು ಎತ್ತಿಕೊಂಡು ಮಸೀದಿಯೊಳಗೆ ಹೋದರು. ಬಳಿಕ ಅಲ್ಲಿ ನೆರೆದಿದ್ದವರೆಲ್ಲರೂ ಅಮೆರಿಕದ ನಿಷ್ಠೆ ಘೋಷಣೆಯನ್ನು ಪಠಿಸಿದರು.ನೀವು ಮುಸ್ಲಿಮ್ ಮತ್ತು ಅಮೆರಿಕನ್
ಯುವ ಮುಸ್ಲಿಮರನ್ನು ಉದ್ದೇಶಿಸಿ ಮಾತನಾಡಿದ ಒಬಾಮ, ‘‘ನೀವು ಇಲ್ಲಿಗೆ ಸೇರಿದವರಾಗಿದ್ದೀರಿ ಮತ್ತು ಇಲ್ಲಿಯವರೇ’’ ಎಂದರು. ‘‘ನೀವು ‘ಒಂದೋ ಮುಸ್ಲಿಮ್ ಅಥವಾ ಅಮೆರಿಕನ್’ ಅಲ್ಲ, ನೀವು ‘ಮುಸ್ಲಿಮ್ ಮತ್ತು ಅಮೆರಿಕನ್’ ಎಂದು ಒಬಾಮ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X