Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಹುಜನ ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

ಬಹುಜನ ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ5 Feb 2016 12:07 AM IST
share

ಮಂಗಳೂರು, ಫೆ.4: ಖಾಸಗಿ ಕ್ಷೇತ್ರದಲ್ಲಿ ಒಬಿಸಿ, ಎಸ್ಸಿ-ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಬಹುಜನ ವಿದ್ಯಾರ್ಥಿ ಸಂಘ-ಕರ್ನಾಟಕದ ವತಿಯಿಂದ ಬುಧವಾರ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಿರುವುದನ್ನು ಖಂಡಿಸಿ ಗುರುವಾರ ಸಂಘದ ದ.ಕ. ಜಿಲ್ಲಾ ಘಟಕದಿಂದ ದ.ಕ. ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಯಿತು.

ಬೆಂಗಳೂರಿನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಿದ ಕಾರಣ ನೂರಾರು ಮಂದಿಗೆ ಗಾಯಗಳಾಗಿವೆ ಮತ್ತು ಹಲವು ಮಂದಿ ಅಸ್ವಸ್ಥರಾಗಿದ್ದಾರೆ. ಅಲ್ಲದೆ, 100ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ. ಬಿವಿಎಸ್‌ನ ಹೋರಾಟವನ್ನು ಹತ್ತಿಕ್ಕುವುದಕ್ಕಾಗಿ ರಾಜ್ಯ ಸರಕಾರ ನಡೆಸಿದ ಈ ದಾಳಿಯನ್ನು ಖಂಡಿಸುವುದಾಗಿ ಪ್ರತಿಭಟನಕಾರರು ಹೇಳಿದರು. ಸರಕಾರಿ ವಲಯದಲ್ಲಿ ಉದ್ಯೋಗ ಸೃಷ್ಟಿ ಅವಕಾಶ ಕಡಿಮೆಯಾಗಿದೆ. ಆದರೆ ಖಾಸಗಿ ವಲಯದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದೆ.

ಖಾಸಗಿ ವಲಯದಲ್ಲಿ ಜಾತಿವಾದಿ ಮನಸ್ಸುಗಳು ಉನ್ನತ ಸ್ಥಾನದಲ್ಲಿರುವುದರಿಂದ ವಿದ್ಯಾವಂತ ಎಸ್ಸಿ-ಎಸ್ಟಿ, ಒಬಿಸಿ ಹಾಗೂ ಧಾರ್ಮಿಕ ಅಲ್ಪಸಂಖ್ಯಾತರಿ ಉದ್ಯೋಗ ಪಡೆಯುವುದು ಹರಸಾಹಸವಾಗಿದೆ. ಹೀಗಾಗಿ ವಿದ್ಯಾವಂತ ಎಸ್ಸಿ-ಎಸ್ಟಿ, ಒಬಿಸಿ ಯುವಕರು ನಿರುದ್ಯೋಗಿಗಳಾಗುತ್ತಿದ್ದಾರೆ. ಇದರಿಂದಾಗಿ ಈ ಸಮುದಾಯಗಳ ಯುವಕರ ಬದುಕು ಆತಂಕಮಯವಾಗಿದೆ. ಹೀಗಾಗಿ ತಕ್ಷಣವೇ ಖಾಸಗಿ ವಲಯದಲ್ಲಿ ಎಸ್ಸಿ-ಎಸ್ಟಿ, ಒಬಿಸಿ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ಮತ್ತು ಮೇಲ್ಜಾತಿಯ ಬಡವರಿಗೂ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಸೂಕ್ತ ಕಾನೂನು ರೂಪಿಸಬೇಕು ಎಂದು ಬಿವಿಎಸ್ ಜಿಲ್ಲಾ ಘಟಕ ಆಗ್ರಹಿಸಿದೆ. ಅಹಿಂದ ಜಿಲ್ಲಾಧ್ಯಕ್ಷ ವಾಸುದೇವ ಬೋಳೂರು, ಬಳಕೆದಾರರ ವೇದಿಕೆಯ ಜಿಲ್ಲಾಧ್ಯಕ್ಷ ಯು. ಪದ್ಮನಾಭ ಶೆಟ್ಟಿ, ಸಮಾಜ ಪರಿವರ್ತನಾ ವೇದಿಕೆಯ ಮುಖಂಡರಾದ ಪಿ. ಡೀಕಯ್ಯ, ಅಚ್ಯುತ್ ಎಸ್. ಭಾಗವಹಿಸಿ ಬಿವಿಎಸ್ ಹೋರಾಟಕ್ಕೆ ತಮ್ಮ ಬೆಂಬಲ ಸೂಚಿಸಿದರು.

ಪ್ರತಿಭಟನೆಯಲ್ಲಿ ಬಿವಿಎಸ್ ಜಿಲ್ಲಾ ಮುಖಂಡರಾದ ಸುರೇಶ್ ಪಿ.ಬಿ., ಉದಯ್ ಗೋಳಿಯಂಗಡಿ, ಆದರ್ಶ್, ಚೆನ್ನಪ್ಪ, ರಘು ಧರ್ಮಸೇನ್, ಸೌಮ್ಯಾ, ಮಂಗಳೂರು ಘಟಕದ ಅರುಣ್ ಕುಮಾರ್, ಪುತ್ತೂರಿನ ಕೃಷ್ಣಪ್ಪ ಬಂಬಿಲ, ಸಿಎಫ್‌ಐ ಜಿಲ್ಲಾ ಕಾರ್ಯದರ್ಶಿ ನಿಝಾಮುದ್ದೀನ್, ಸಾಮಾಜಿಕ ಮುಖಂಡ ದಮ್ಮಾನಂದ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X