Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಾಗತಿಕ ಬಂಡವಾಳ ಹೂಡಿಕೆಗೆ ತೆರೆ

ಜಾಗತಿಕ ಬಂಡವಾಳ ಹೂಡಿಕೆಗೆ ತೆರೆ

ವಾರ್ತಾಭಾರತಿವಾರ್ತಾಭಾರತಿ5 Feb 2016 11:58 PM IST
share
ಜಾಗತಿಕ ಬಂಡವಾಳ ಹೂಡಿಕೆಗೆ ತೆರೆ

ಬಂಡವಾಳ ಹೂಡಿಕೆ ಸಮಾವೇಶದಲ್ಲಿ ವಿಭಿನ್ನ ಆಲೋಚನೆಗಳ ಸಂಗಮ
ಬೆಂಗಳೂರು, ಫೆ.5: ನಗರದ ಅರಮನೆ ಮೈದಾನದಲ್ಲಿ ಫೆ.3ರಿಂದ ನಡೆಯುತ್ತಿರುವ ಬಂಡವಾಳ ಹೂಡಿಕೆ ಸಮಾವೇಶಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿತ್ತು. ಹೀಗಾಗಿ ಸಮಾವೇಶದ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿದ್ದ ‘ಪ್ರದರ್ಶನ ಮಳಿಗೆ’ಗಳನ್ನು ವೀಕ್ಷಿಸಲು ಸಾವಿರಾರು ಮಂದಿ ಆಗಮಿಸಿದ್ದರು.
 ನಗರದ ಹೊರವಲಯ ದೊಡ್ಡಬಳ್ಳಾಪುರ, ದೇವನಹಳ್ಳಿ, ಕೋಲಾರ, ಆನೇಕಲ್ ಸೇರಿದಂತೆ ನಗರದ ಜನತೆ ತಂಡೋಪಾದಿಯಾಗಿ ಬಂದು ಪ್ರದರ್ಶನ ಮಳಿಗೆಗಳನ್ನು ಕುತೂಹಲದಿಂದ ವೀಕ್ಷಿಸಿದರು. ಒಟ್ಟು 500 ಮಳಿಗೆಗಳನ್ನು ತೆರೆಯಲಾಗಿತ್ತು. ಕೈಯಿಂದಲೇ ಮಾಡುವ ಚಾಕ್‌ಲೆಟ್, ಕೈಮಗ್ಗದ ಬ್ಯಾಗ್‌ಗಳ ಮಳಿಗೆಗಳು ಸಾಮಾನ್ಯ ಜನತೆಯನ್ನು ಸೆಳೆಯುತ್ತಿದ್ದವು.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಸ್ಥಾಪಿಸಿದ್ದ ಮಳಿಗೆಯಲ್ಲಿ ಕಲ್ಪನಾ ರಾಘವೇಂದ್ರರವರು ಚಾಕ್‌ಲೆಟ್‌ನ್ನು ಮಾರಾಟ ಮಾಡುತ್ತಿದ್ದರು. ಅವರೊಂದಿಗೆ ಬಂಡವಾಳ ಹೂಡಿಕೆ ಸಮಾವೇಶದ ಕುರಿತು ವಿಚಾರಿಸಿದಾಗ ‘ನಾನು ಮನೆಯಲ್ಲಿಯೇ ಕುಳಿತು ಚಾಕ್‌ಲೆಟ್ ತಯಾರಿಸಿ ಮಾರಾಟ ಮಾಡುತ್ತಿದ್ದೇನೆ. ಫೆ.3ರಿಂದ ಇಲ್ಲಿ ನಡೆಯುತ್ತಿರುವ ಬಂಡವಾಳ ಹೂಡಿಕೆ ಸಮಾವೇಶದಿಂದ ಹಲವು ಉದ್ದಿಮೆದಾರರು ಹಾಗೂ ನೂರಾರು ಮಂದಿ ಗ್ರಾಹಕರು ಸಂಪರ್ಕಕ್ಕೆ ಸಿಕ್ಕಿದ್ದಾರೆ. ಇವರ ಸಂಪರ್ಕದಿಂದ ಭವಿಷ್ಯದಲ್ಲಿ ನನಗೆ ಸಾಕಷ್ಟು ಅನುಕೂಲಕರವಾಗಲಿದೆ’ ಎಂದು ಆಶಯ ವ್ಯಕ್ತಪಡಿಸಿದರು.
ಸೀರೆ, ಚೂಡಿದಾರ್‌ಗಳನ್ನು ಮಾರಾಟ ಮಾಡುತ್ತಿದ್ದ ಶಾಂತಲಾ ಅವರನ್ನು ಮಾತನಾಡಿಸಿದಾಗ, ‘ನಾನು ಸಂಯುಕ್ತ ಎಂಬ ಹೆಸರಿನಲ್ಲಿ ಗುಡಿ ಕೈಗಾರಿಕೆಯನ್ನು ನಡೆಸುತ್ತಿದ್ದೇನೆ. ಇಲ್ಲಿ ನಡೆಯುತ್ತಿರುವ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಭಾಗವಹಿಸಿರುವುದು ತುಂಬಾ ಅನುಕೂಲವಾಗಿದೆ. ಹಲವು ಮಂದಿ ಉದ್ಯಮಿಗಳು ನನಗೆ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ’ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.
 ಪ್ರದರ್ಶನ ಮಳಿಗೆಯನ್ನು ನೋಡಲು ಬಂದ ಕೋಲಾರದ ರಮೇಶ್ ಎಂಬವರನ್ನು ಮಾತನಾಡಿಸಿದಾಗ, ಕೋಲಾರ ಭಾಗದಲ್ಲಿ ಮಳೆಯಿಲ್ಲದೆ ಕೃಷಿ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಏನಾದರು ಸ್ವಂತ ಉದ್ಯೋಗ ಮಾಡಲು ಸಾಧ್ಯವಾಗಬಹುದೆ ಎಂದು ವೀಕ್ಷಿಸಲು ಬಂದಿದ್ದೇನೆ ಎಂದು ತಿಳಿಸಿದರು. ಹೀಗೆ ಹಲವು ಮಂದಿ ವಿಭಿನ್ನ ಅಭಿಪ್ರಾಯ, ಆಲೋಚನೆಗಳೊಂದಿಗೆ ಬಂಡವಾಳ ಹೂಡಿಕೆ ಸಮಾವೇಶಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X