ಬೆಂಗಳೂರು : ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ
ಬೆಂಗಳೂರು.ಫೆ.6:ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಮೂರು ವಿಧಾನಸಭಾ ಕ್ಷೇತ್ರಗಳಲ್ಲೂ ಸಹ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲು ಉದ್ದೇಶಿಸಿದ್ದಾರೆ. ಜೆಡಿಎಸ್‌ನಿಂದ ದೂರವಾಗಿರುವ, ರಾಜಕೀಯವಾಗಿಯೂ ಅತಂತ್ರ ಪರಿಸ್ಥಿತಿಯಲ್ಲಿರುವ ಸಿಂಧ್ಯಾ ಅವರನ್ನು ತನ್ನತ್ತ ಸೆಳೆದುಕೊಂಡಿರುವ ಅವರ ಮಾಜಿ ಸಾಂಪ್ರದಾಯಿಕ ಎದುರಾಳಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರ ಭದ್ರಕೋಟೆ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ನುಗ್ಗಿಸಿದ್ದಾರೆ. ಸಿಂಧ್ಯಾ ಇಂದು ಕನಕಪುರ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರಗಳ ತಮ್ಮಬೆಂಬಲಿಗರ ಸಭೆ ಕರೆದು, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಸೂಚಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಸೇರುವ ತಮ್ಮ ಹಾದಿಯನ್ನು ಸುಗಮಗೊಳಿಸಿಕೊಂಡಿದ್ದಾರೆ.
ಸ್ವತಃ ಸಚಿವ ಡಿ.ಕೆ. ಶಿವಕುಮಾರ್ ಈ ವಿಚಾರ ತಿಳಿಸಿದ್ದು, ಸಿಂಧ್ಯಾ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ ಎಂದು ಅವರ ಭಾಷಣದ ದೃಷ್ಯಗಳನ್ನು ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರದರ್ಶಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿಷ್ಟಿತ ಹೆಬ್ಬಾಳ ವಿಧಾನಸಭಾ ಕ್ಷೇತ್ರವನ್ನು ಈ ಬಾರಿಯ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಕಿತ್ತುಕೊಳ್ಳುವುದಾಗಿ ಘೋಷಿಸಿದರು. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದವರು ಆ ಕ್ಷೇತ್ರದವರಲ್ಲ. ಆಂತರಿಕ ಕಚ್ಚಾಟ, ಭಿನ್ನಾಭಿಪ್ರಾಯಗಳು ಆ ಪಕ್ಷದಲ್ಲಿ ಹೆಚ್ಚಾಗಿರುವುದರಿಂದ ಆ ಕ್ಷೇತ್ರ ಕಾಂಗ್ರೆಸ್ ಪಾಲಾಗಲಿದೆ ಎಂದಿದ್ದಾರೆ.
ಬಿಜೆಪಿ ಕಳೆದ ಎರಡೂವರೆ ವರ್ಷಗಳಿಂದ ಆ ಕ್ಷೇತ್ರದಲ್ಲಿ ಅಧಿಕಾರ ಹಿಡಿದಿದ್ದರೂ ಕ್ಷೇತ್ರದ ಪರಿಚಯವೇ ಇಲ್ಲದವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಇದು ಸಹಜವಾಗಿ ಅವರಿಗೆ ಹಿನ್ನಡೆಯಾಗಲಿದೆ ಎಂದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹೆಸರನ್ನು ಹೇಳದೆ ಪರೋಕ್ಷವಾಗಿ ಚುಚ್ಚಿದ ಅವರು,ರಾಜಕೀಯ ನಿವೃತ್ತಿ ಎಂಬುದು ನಮ್ಮಲ್ಲಿಲ್ಲ. ಬದುಕಿರುವವರಿಗೆ ಹೋರಾಡುತ್ತೇನೆ ಎಂದು ನುಡಿದರು.
ಬೆಂಗಳೂರು.ಫೆ.6:
ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಜಿಲ್ಲಾ ಮತ್ತು ತಾಲ್ಲೂಕುಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದ್ದಾರೆ.