ಗಂಗೊಳ್ಳಿ: ತೌಹೀದ್ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ

ಮಂಗಳೂರು, ಫೆ.6: ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಸುರಕ್ಷತೆಯ ಬಗ್ಗೆ ಸಂವಾದ ಕಾರ್ಯಕ್ರಮವು ಗಂಗೊಳ್ಳಿ ತೌಹೀದ್ ಕಾಲೇಜು ಮೈದಾನದಲ್ಲಿ ಇತ್ತೀಚೆಗೆ ನಡೆಯಿತು.
ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಸಂವಾದದಲ್ಲಿ ಪಾಲ್ಗೊಂಡು, ವಿದ್ಯಾರ್ಥಿನಿಯರ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳ ಪರಿಹಾರದ ಭರವಸೆ ನೀಡಿದರು. ಅಂಕಣಕಾರ ಕೆ. ಶಿವಾನಂದ ಕಾರಂತ್, ನ್ಯಾಯವಾದಿ ಅಂಜಲಿ ಹುಂಡೇಕರ್, ಡಿವೈಎಸ್‌ಪಿ ಮಂಜುನಾಥ ಶೆಟ್ಟಿ, ಸರ್ಕಲ್ ಇನ್‌ಸ್ಪೆಕ್ಟರ್‌ಗಳಾದ ದಿವಾಕರ, ಸುದರ್ಶನ್, ಎಸ್ಸೈ ಸುಬ್ಬಣ್ಣ ಮಾತನಾಡಿದರು.
ತೌಹೀದ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಖಾಲಿಕ್ ಅಧ್ಯಕ್ಷತೆ ವಹಿಸಿದ್ದರು. ಅರ್ಚನಾ, ಶ್ವೇತಾ, ಆನಮ್, ನಾಹಿಲಾ ಬೇಗಂ ಅತಿಥಿಗಳನ್ನು ಪರಿಚಯಿಸಿದರು. ಸನಾ ಎಮ್.ಎಚ್. ಸ್ವಾಗತಿಸಿದರು. ರುಕ್ಸಾನಾ ಬೇಗಂ ವಂದಿಸಿದರು. ಇಫ್ರಾ ಎಮ್.ಎಚ್. ಕಾರ್ಯಕ್ರಮ ನಿರೂಪಿಸಿದರು.
Next Story





