‘ಸಾಮಾಜಿಕ ನ್ಯಾಯಪರ ಸಮಿತಿಯಿಂದ ಚುನಾವಣೆಗೆ ಸ್ಪರ್ಧಿಸಿಲ್ಲ’
ಬಂಟ್ವಾಳ, ಫೆ.6: ಬಿ.ಸಿ.ರೋಡು ಸಾಮಾಜಿಕ ನ್ಯಾಯಪರ ಸಮಿತಿಯಿಂದ ಜಿಪಂ, ತಾಪಂ ಚುನಾವಣೆಗೆ ಯಾರೂ ಸ್ಪರ್ಧಿಸಿಲ್ಲ. ಕೆಲವೊಂದು ವ್ಯಕ್ತಿಗಳು ಗ್ರಾಮಾಂತರ ಪ್ರದೇಶದಲ್ಲಿ ನಮ್ಮ ಸಮಿತಿ ಪರವಾಗಿ ಸ್ಪರ್ಧಿಸಿದ್ದಾಗಿ ಹೇಳಿಕೊಂಡಿರುವುದು ಗಮನಕ್ಕೆ ಬಂದಿರುತ್ತದೆ ಎಂದು ಸಮಿತಿಯ ಕಾರ್ಯಕಾರಿ ಸದಸ್ಯ ಬಿ.ಎಂ.ಪ್ರಭಾಕರ ದೈವಗುಡ್ಡೆ ತಿಳಿಸಿದ್ದಾರೆ.
ಯಾವುದೇ ರಾಜಕೀಯ ಪಕ್ಷ ಅಥವಾ ವ್ಯಕ್ತಿಯನ್ನು ಸಮಿತಿಯು ಬೆಂಬಲಿಸುವುದಿಲ್ಲ. ನಮ್ಮ ಸಂಘಟನೆ ರಾಜಕೀಯ ರಹಿತ, ಪಕ್ಷಾತೀತ, ಜಾತ್ಯತೀತ ನೆಲೆಯಲ್ಲಿ ಕಾರ್ಯಾಚರಿಸುತ್ತಿದ್ದು, ಅನ್ಯಾಯ, ದೌರ್ಜನ್ಯಗಳ ವಿರುದ್ಧ ಜನಜಾಗೃತಿ ಸಮಿತಿಯ ಉದ್ದೇಶ ಎಂದವರು ತಿಳಿಸಿದ್ದಾರೆ.
ಚುನಾವಣೆ ಮುಗಿದ ಬಳಿಕ ಸಂಘಟನೆಯ ನೇತೃತ್ವದಲ್ಲಿ ಉಸ್ತುವಾರಿ ಸಚಿವರ ಬಿ.ಸಿ.ರೋಡ್ ಕಚೇರಿ ಮುಂದೆ ಧರಣಿಯನ್ನು ಹಮ್ಮಿಕೊಳ್ಳಲಾಗುವುದು. ನೇತ್ರಾವತಿ ತಿರುವು ಯೋಜನೆಯನ್ನು ವಿರೋಧಿಸಿ ಜಿಲ್ಲೆಯಾದ್ಯಂತ ಮುಂದಿನ ದಿನಗಳಲ್ಲಿ ಜನರನ್ನು ಸಂಘಟಿಸಿ ಹೋರಾಟವನ್ನು ವಿಸ್ತರಿಸಲಾಗುವುದು ಎಂದವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





