ಪ್ರತ್ಯೇಕ ಪ್ರಕರಣ: ಸಮುದ್ರಕ್ಕೆ ಬಿದ್ದು ಮೀನುಗಾರರಿಬ್ಬರು ಮೃತ್ಯು
ಮಲ್ಪೆ,/ಪಡುಬಿದ್ರೆ: ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಇಬ್ಬರು ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಮಲ್ಪೆ ಹಾಗೂ ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೀನುಗಾರಿಕೆ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ನಾಗರಾಜ್ ಅಮೀನ್ (48) ಎಂಬವರು ‘ಅರಮನೆ’ ಎಂಬ ಬೋಟ್‌ನಲ್ಲಿ ಇತರ ಮೀನುಗಾರರೊಂದಿಗೆ ಫೆ.5ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದರು. ಮಧ್ಯರಾತ್ರಿ ಮೀನುಗಾರಿಕೆ ನಡೆಸುತ್ತಿದ್ದಾಗ ನಾಗರಾಜ್ ಅಮೀನ್ ಆಕಸ್ಮಿಕವಾಗಿ ಬೋಟ್‌ನಿಂದ ನೀರಿಗೆ ಬಿದ್ದರೆನ್ನಲಾಗಿದೆ.
ಕೂಡಲೇ ಅವರನ್ನು ಮೇಲಕ್ಕೆತ್ತಿದ್ದ ಇತರರು ಬೆಳಗ್ಗೆ ಮಲ್ಪೆ ಬಂದರಿಗೆ ಕರೆತಂದು ಉಡುಪಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯುವಾಗ ಮೃತಪಟ್ಟಿದ್ದಾರೆ. ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೀನುಗಾರಿಕೆಗೆ ತೆರಳಿದ್ದೆ ಎರ್ಮಾಳು ಬಗ್ಗತೋಟ ನಿವಾಸಿ ಸದಾಶಿವ ಪುತ್ರನ್ (62) ಎಂಬವರು ಶನಿವಾರ ಬೆಳಗ್ಗೆ 11 ಗಂಟೆಗೆ ಮರಳುತ್ತಿದ್ದ ವೇಳೆ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೀನುಗಾರಿಕೆ ನಡೆಸಿ ವಾಪಸ್ ಬರುತ್ತಿದ್ದಾಗ ನಿಶ್ಶಕ್ತಿಯಿಂದ ಸಮುದ್ರಕ್ಕೆ ಬಿದ್ದು ಮೃತಟ್ಟಿದ್ದಾರೆ ಎನ್ನಲಾಗಿದೆ. ಪಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





