Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸಹಿಷ್ಣುತೆ ಕರಿನೆರಳು: ಅಮೀರ್ ಡೀಲ್‌ಗೆ...

ಅಸಹಿಷ್ಣುತೆ ಕರಿನೆರಳು: ಅಮೀರ್ ಡೀಲ್‌ಗೆ ಉರುಳು

ವಾರ್ತಾಭಾರತಿವಾರ್ತಾಭಾರತಿ7 Feb 2016 8:59 AM IST
share
ಅಸಹಿಷ್ಣುತೆ ಕರಿನೆರಳು: ಅಮೀರ್ ಡೀಲ್‌ಗೆ ಉರುಳು

ನವದೆಹಲಿ: ಅಸಹಿಷ್ಣುತೆ ಕರಿನೆರಳು ಬಾಲಿವುಡ್ ನಟ ಅಮೀರ್ ಖಾನ್ ಅವರ ಜಾಹೀರಾತು ಒಪ್ಪಂದಗಳಿಗೆ ಉರುಳಾಗಿ ಪರಿಣಮಿಸಿದೆ. ತಮ್ಮ ವೃತ್ತಿಜೀವನದಲ್ಲೇ ಮೊಟ್ಟಮೊದಲ ಬಾರಿಗೆ ಯಾವುದೇ ಕಂಪನಿಯ ಪ್ರಚಾರ ರಾಯಭಾರಿಯಾಗದೇ ಅಮೀರ್ ಹೊರಗೆ ಉಳಿದಿದ್ದಾರೆ. ಇತ್ತೀಚೆಗೆ ಸ್ನ್ಯಾಪ್‌ಡೀಲ್, ಖಾನ್ ಒಪ್ಪಂದವನ್ನು ವಿಸ್ತರಿಸಲು ನಿರಾಕರಿಸಿತ್ತು. ಅದಾಗ್ಯೂ ಅಮೀರ್ ಮುಖ ಜಾಹೀರಾತು ಉದ್ಯಮದ ಸೂಜಿಗಲ್ಲು ಎಂದು ಜಾಹೀರಾತು ಉದ್ಯಮ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
"ಅಮೀರ್ ಅತ್ಯುನ್ನತ ನಟ. ಕೇವಲ ಚಿತ್ರರಂಗಕ್ಕಷ್ಟೇ ಸೀಮಿತರಲ್ಲ. ಅಸಹಿಷ್ಣುತೆ ಬಗೆಗಿನ ಹೇಳಿಕೆಯೇ ಅವರಿಗೆ ಮಾರಕವಾದ್ದು. ಆದರೆ ವಿವಾದ ತಣ್ಣಗಾದ ಬಳಿಕ ಜಾಹೀರಾತುದಾರರು ಅವರನ್ನು ಹೊರಗಿಡುತ್ತಾರೆ ಎನಿಸುವುದಿಲ್ಲ" ಎಂದು ಜಾಗತಿಕ ಜಾಹೀರಾತು ದೈತ್ಯ ಕಂಪನಿಯಾದ ವೀಡೆಂಟ್ ಕೆನಡಿಯ ಸೃಜನಶೀಲ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕ ವಿ.ಸುನಿಲ್ ಅಭಿಪ್ರಾಯಪಡುತ್ತಾರೆ. ಈ ಕಂಪನಿ ನರೇಂದ್ರ ಮೋದಿಯವರ ಮೇಕ್ ಇನ್ ಇಂಡಿಯಾ ಅಭಿಯಾನದ ರೂವಾರಿ.
ದಾದ್ರಿಯಲ್ಲಿ ವ್ಯಕ್ತಿಯೊಬ್ಬ ಗೋಮಾಂಸ ಸೇವಿಸಿದ್ದಾನೆ ಎಂಬ ವದಂತಿ ಹಿನ್ನೆಲೆಯಲ್ಲಿ ಒಬ್ಬನನ್ನು ಉದ್ರಿಕ್ತ ಗುಂಪು ಹತ್ಯೆ ಮಾಡಿದ ಘಟನೆ ಹಾಗೂ ಮತ್ತೊಂದು ಘಟನೆಯಲ್ಲಿ ಇಬ್ಬರು ದಲಿತ ಮಕ್ಕಳನ್ನು ದಹಿಸಿದ ಘಟನೆ ಬಳಿಕ ಕಳೆದ ನವೆಂಬರ್‌ನಲ್ಲಿ ಅಮೀರ್‌ಖಾನ್, "ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆ ಹಿನ್ನೆಲೆಯಲ್ಲಿ ತಾವು ಕುಟುಂಬದ ಜತೆಗೆ ದೇಶ ತೊರೆಯುವ ಚಿಂತನೆ ಮಾಡಿದ್ದೇನೆ" ಎಂದು ಹೇಳಿಕೆ ನೀಡಿರುವುದು ಕೆಂಗಣ್ಣಿಗೆ ಕಾರಣವಾಗಿತ್ತು.
ಇದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರತಿರೋಧ ವ್ಯಕ್ತವಾಗಿತ್ತು. ಹಲವು ರಾಜಕಾರಣಿಗಳು ಈ ಹೇಳಿಕೆ ಖಂಡಿಸಿದರೆ, ಹಲವು ಮಂದಿ ತಮ್ಮ ಫೋನ್‌ಗಳಿಂದ ಸ್ನ್ಯಾಪ್‌ಡೀಲ್ ಆಪ್ ಕಿತ್ತುಹಾಕುವ ಮೂಲಕ ಪ್ರತಿಭಟನೆ ಮಾಡಿದ್ದರು. ಆ ಬಳಿಕ ಅವರ ಜಾಹೀರಾತುಗಳನ್ನು ಕಂಪನಿ ಸ್ಥಗಿತಗೊಳಿಸಿತ್ತು.
ಕಳೆದ ತಿಂಗಳು ಸರ್ಕಾರ ಅಮೀರ್‌ಖಾನ್ ಅವರ "ಇನ್‌ಕ್ರೆಡಿಬಲ್ ಇಂಡಿಯಾ" ಪ್ರವಾಸೋದ್ಯಮ ಉತ್ತೇಜನ ಜಾಹೀರಾತಿನಿಂದ ಅವರನ್ನು ಕೈಬಿಟ್ಟಿತ್ತು. ಇದೀಗ ಸ್ನ್ಯಾಪ್‌ಡೀಲ್ ಅವರನ್ನು ಕೈಬಿಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X