Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುಗ್ಗಿ
  3. ಅಡಿಗಲ್ಲು

ಅಡಿಗಲ್ಲು

ವಾರ್ತಾಭಾರತಿವಾರ್ತಾಭಾರತಿ8 Feb 2016 7:36 PM IST
share
ಅಡಿಗಲ್ಲು

ಭೂಮಿ ಆ ಅಡಿಗಲ್ಲುಗಳನ್ನು ಎಷ್ಟೋ ದಿನಗಳಿಂದ ನೋಡುತ್ತಲೇ ಇತ್ತು. ಶಾಲೆ, ಹಾಸ್ಟೆಲ್, ಆಸ್ಪತ್ರೆ, ಮಾರ್ಕೆಟ್, ಕಾಂಪ್ಲೆಕ್ಸ್, ಸಮುದಾಯ ಭವನಗಳ ನಿರ್ಮಾಣಕ್ಕೆಂದು ಶಾಸಕರು, ಸಂಸದರು, ಮಂತ್ರಿಗಳು ಸಂಭ್ರಮದಿಂದ ಅನಾವರಣ ಮಾಡಿದ ಅಡಿಗಲ್ಲುಗಳನ್ನು ಭೂಮಿ ಸಂತೋಷದಿಂದಲೇ ಗಮನಿಸಿತ್ತು. ಆಗೆಲ್ಲಾ ಅತ್ಯಂತ ಉತ್ಸಾಹದಿಂದ ಬೀಗಿಕೊಂಡಿದ್ದ ಅಡಿಗಲ್ಲುಗಳು ದಿನಗಳೆದಂತೆ ಅನಾಥ ಪ್ರಜ್ಞೆಯಿಂದ ನರಳತೊಡಗಿದ್ದವು.

ಋತುಮಾನದ ವೈಪರೀತ್ಯಗಳಿಗೆ ಸಿಕ್ಕು ಕೆಲವು ಅಡಿಗಲ್ಲುಗಳು ಸೊರಗಿದ್ದರೆ ಇನ್ನೂ ಕೆಲವು ವಿಧ್ವಂಸಕರ ದಾಳಿಗೆ ಸಿಕ್ಕು ವಿರೂಪಗೊಂಡಿದ್ದವು. ಅವುಗಳಿಗೆ ಆಧಾರವಾಗಿದ್ದ ಗೋಡೆಗಳು ಕುಸಿದು ಹೋಗಿದ್ದವು. ಅಸ್ತಿತ್ವಕ್ಕಾಗಿ ಚಡಪಡಿಸುತ್ತ ಅವಶೇಷಗಳಂತೆ ನಿಂತಿರುವ ಅಡಿಗಲ್ಲುಗಳಿಗೆ ದನಕರುಗಳು ಮೈತಿಕ್ಕಿ ತಮ್ಮ ತುರಿಕೆಯನ್ನು ಶಮನಗೊಳಿಸಿಕೊಳ್ಳುತ್ತಿದ್ದವು. ನಾಯಿಗಳು ಆರಾಮಾಗಿ ಬಂದು ಉಚ್ಚೆ ಹೊಯ್ದರೆ, ಕಾಗೆಗಳು ಮಲ ವಿಸರ್ಜಿಸುತ್ತಿದ್ದವು.

 ಅದನ್ನೆಲ್ಲವನ್ನು ವೌನವಾಗಿ ಅನುಭವಿಸುತ್ತಿರುವ ಅಡಿಗಲ್ಲುಗಳನ್ನು ಕಂಡು ಭೂಮಿ ಒಂದಿನ ‘‘ಅಡಿಗಲ್ಲುಗಳೇ, ಏನಿದು ನಿಮ್ಮ ಅವಸ್ಥೆ? ನಿಮ್ಮ ಸ್ಥಿತಿ ನೋಡಿದರೆ ನನಗೆ ಅಯ್ಯೋ ಅನಿಸುತ್ತದೆ’’ ಎಂದು ಮರುಕ ವ್ಯಕ್ತಪಡಿಸಿತು.

 ‘‘ನಮ್ಮ ಹಣೆಯ ಬರಹ ಇದು. ಏನು ಮಾಡುವುದು?’’ ಅಡಿಗಲ್ಲು ತಹತಹಿಸಿದ್ದವು.

‘‘ಬಹಳ ವರ್ಷಗಳ ಹಿಂದೆಯೇ ನೀವು ಭವ್ಯ ಕಟ್ಟಡಗಳ ಭಿತ್ತಿಗಳಲ್ಲಿ ಕಂಗೊಳಿಸಬೇಕಾಗಿತ್ತು.’’

‘‘ದೇವರು ನಮಗೆ ಅಂಥ ಭಾಗ್ಯ ನೀಡಲಿಲ್ಲ.’’

‘‘ನೀವು ಶಾಸನ ಪ್ರಭುಗಳ ಅಮೃತಹಸ್ತಗಳಿಂದ ಪ್ರತಿಪ್ಠಾಪನೆಗೊಂಡಿದ್ದೀರಿ’’ ಅಭಿಮಾನ ವ್ಯಕ್ತಪಡಿಸಿತು ಭೂಮಿ.

‘‘ಹೌದು, ನಾವು ಶಾಪಗ್ರಸ್ತರಾಗಿ ಇಲ್ಲಿ ಬಿದ್ದಿರುವುದಕ್ಕೆ ರಾಜಕಾರಣಿಗಳಲ್ಲಿ ಮೃತಹಸ್ತಗಳೇ ಕಾರಣ’’ ನಿಟ್ಟುಸಿರಿದವು ಅಡಿಗಲ್ಲು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X