ಮಂಗಳೂರು : ಗಾಂಜ ಸೇವನೆ, ಮೂವರ ಬಂಧನ

ಮಂಗಳೂರು, ಫೆ .8: ನಗರದ ಆಕಾಶಭವನದಲ್ಲಿ ಗಾಂಜ ಸೇವನೆಗೈದು ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಮೂವರನ್ನು ಕಾವೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಅಭಿಲಾಷ್(33), ನರೇಶ್(29), ಜಗದೀಶ್(30) ಎಂದು ಗುರುತಿಸಲಾಗಿದೆ. ಆರೋಪಿಗಳು ಗಾಂಜ ಸೇವನೆ ಮಾಡಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





