Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿ ಕಚೇರಿಗಳಲ್ಲಿನ ಭ್ರಷ್ಟಾಚಾರ...

ಬಿಬಿಎಂಪಿ ಕಚೇರಿಗಳಲ್ಲಿನ ಭ್ರಷ್ಟಾಚಾರ ತಡೆಯಲು ಸರಕಾರ ಮುಂದಾಗಲಿ: ಎಎಪಿ

ವಾರ್ತಾಭಾರತಿವಾರ್ತಾಭಾರತಿ8 Feb 2016 11:49 PM IST
share

 ಬೆಂಗಳೂರು, ಫೆ.8: ಬಿಬಿಎಂಪಿ ಕಚೇರಿಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮಗಳು ಮತ್ತು ಭ್ರಷ್ಟಾಚಾರವನ್ನು ತಡೆಗಟ್ಟಲು ರಾಜ್ಯ ಸರಕಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

  ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಸಹ ಸಂಚಾಲಕ ಶಿವಕುಮಾರ್ ಚೆಂಗಲರಾಯ ಮಾತನಾಡಿ, ಆಮ್ ಆದ್ಮಿ ಪಾರ್ಟಿ ಕೆಲ ತಿಂಗಳ ಹಿಂದೆ ಆರಂಭಿಸಿದ ಲಂಚ ಮುಕ್ತ ಅಭಿಯಾನಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಬಿಬಿಎಂಪಿ ಕಚೇರಿಗಳಲ್ಲಿ ಅಧಿಕಾರಿಗಳು ನಡೆಸುವ ಅಕ್ರಮ ಮತ್ತು ವಾಮ ಮಾರ್ಗಗಳನ್ನು ದೂರವಾಣಿ ಮುಖಾಂತರ ತಿಳಿಸುತ್ತಿದ್ದಾರೆ ಎಂದು ಹೇಳಿದರು.

 ಬಿಬಿಎಂಪಿ ಕಚೇರಿಗಳಲ್ಲಿ ಜನನ ಮತ್ತು ಮರಣ ಪ್ರಮಾಣಪತ್ರಗಳನ್ನು ನೀಡಲು ಲಂಚಕ್ಕೆ ಬೇಡಿಕೆ ಕೇಳಿಬರುತ್ತಿದೆ. ಈ ರೀತಿಯಾದ ಸಣ್ಣ ಕೆಲಸಗಳಿಗೂ ಲಂಚಕ್ಕೆ ಬೇಡಿಕೆಯಿಡುವುದು ಅಧಿಕಾರಿಗಳಿಗೆ ಸರ್ವೇ ಸಾಮಾನ್ಯವಾಗಿದೆ.ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಜನ ಪ್ರತಿನಿಧಿಗಳು ಪರೋಕ್ಷವಾಗಿ ಬೆಂಬಲ ಸೂಚಿಸುತ್ತಿರುವ ಪರಿಣಾಮ ಪರಿಸ್ಥಿತಿ ಇನ್ನು ಉಲ್ಬಣಗೊಂಡಿದೆ. ಪರಿಣಾಮ ನಾಗರಿಕರು ಹಲ್ಲಿಲ್ಲದ ಹಾವಿನಂತೆ ಜೀವನವನ್ನು ಸಾಗಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

 ಟಿ.ಡಿ.ರಂಗನಾಥ್ ವಜಾಕ್ಕೆ ಆಗ್ರಹ: ಬಿಬಿಎಂಪಿ ಕಂದಾಯ ಅಧಿಕಾರಿ ಖಾತೆ ಬದಲಿಸಲು ವಿಜ್ಞಾನನಗರದ ನಿವಾಸಿ ಜೋ ಕ್ರಾಸ್ಟಾರ ಬಳಿ ಎಂಟು ಸಾವಿರಕ್ಕೆ ಲಂಚಕ್ಕೆ ಆಮಿಷ ಒಡ್ಡ್ಡಿ ಲಂಚವನ್ನು ಸ್ವೀಕರಿಸುವಾಗ ಆಮ್ ಆದ್ಮಿ ಲಂಚಮುಕ್ತ ಅಭಿಯಾನದ ಸಂಚಾಲಕರ ಕೈಗೆ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಈ ಭ್ರಷ್ಟಾಧಿಕಾರಿಯನ್ನು ಕೂಡಲೇ ಸರಕಾರ ಸೇವೆಯಿಂದ ವಜಾಗೊಳಿಸಬೇಕು. ಈ ಮೂಲಕ ಬಿಬಿಎಂಪಿ ಕಚೇರಿಗಳಲ್ಲಿನ ಭ್ರಷ್ಟಾಧಿಕಾರಿಗಳಿಗೆ ಎಚ್ಚರಿಕೆ ಹಂಟೆ ರವಾನಿಸಬೇಕು ಎಂದು ಒತ್ತಾಯಿಸಿದ ಅವರು, ರಾಜ್ಯ ಸರಕಾರ ಮತ್ತು ಬಿಬಿಎಂಪಿ ಕಚೇರಿಗಳಲ್ಲಿ ಭ್ರಷ್ಟ ಮುಕ್ತ ವಾತಾವರಣವನ್ನು ಸೃಷ್ಟಿಸಲು ಸರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಗೋಷ್ಠಿಯಲ್ಲಿ ಅರುಣ್ ಕುಮಾರ್, ಮೋಹನ್ ದಾಸರಿ,ಬಸವಂತ್ ರಾವ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X