Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೇಕ್ ಇನ್ ಇಂಡಿಯಾ-ಹೇಟ್ ಇನ್ ಇಂಡಿಯಾ...

ಮೇಕ್ ಇನ್ ಇಂಡಿಯಾ-ಹೇಟ್ ಇನ್ ಇಂಡಿಯಾ ಜತೆಯಾಗಿ ಸಾಗದು: ಶಶಿ ತರೂರ್

ವಾರ್ತಾಭಾರತಿವಾರ್ತಾಭಾರತಿ8 Feb 2016 11:57 PM IST
share
ಮೇಕ್ ಇನ್ ಇಂಡಿಯಾ-ಹೇಟ್ ಇನ್ ಇಂಡಿಯಾ ಜತೆಯಾಗಿ ಸಾಗದು: ಶಶಿ ತರೂರ್

ಬಾಸ್ಟನ್,ಫೆ.8: 'ಮೇಕ್ ಇನ್ ಇಂಡಿಯಾ' ದಂತಹ ನೀತಿಗಳು ಮತ್ತು ದ್ವೇಷ ಜೊತೆಜೊತೆಯಾಗಿ ಸಾಗಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಮೋದಿ ಸರಕಾರವನ್ನು ಕುಟುಕಿರುವ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು,ಆಡಳಿತ ಪಕ್ಷದ ಸದಸ್ಯರಿಂದ ಅಲ್ಪಸಂಖ್ಯಾತರ ವಿರುದ್ಧ ಅವಮಾನಕಾರಿ ಹೇಳಿಕೆಗಳು ತನ್ನ ಅನುನಯದ ಮೂಲಕ ಇತರ ರಾಷ್ಟ್ರಗಳ ಮೇಲೆ ಪ್ರಭಾವ ಬೀರುವ ದೇಶದ ಸಾಮರ್ಥ್ಯವನ್ನು ಕುಂದಿಸುತ್ತವೆ ಅಷ್ಟೇ ಎಂದು ಹೇಳಿದರು. ಮೂಲಸೌಕರ್ಯ ಮತ್ತು ತಯಾರಿಕೆ ಕ್ಷೇತ್ರಗಳ ನಿರ್ಮಾಣ ಮತ್ತು ಆಧುನೀಕರಣದಲ್ಲಿ ಮುಖ್ಯ ಪಾತ್ರ ವಹಿಸುವ ವಿದೇಶಿ ನೇರ ಹೂಡಿಕೆಯನ್ನು ಆಕರ್ಷಿಸಲು ದೇಶದ ಬಹುತ್ವವಾದ ಗುಣವನ್ನು ಕಾಯ್ದುಕೊಳ್ಳುವುದು ಅಗತ್ಯವಾಗಿದೆ ಎಂದು ಅವರು ಹೇಳಿದರು.

ಹಾರ್ವರ್ಡ್ ವಿವಿಯ ವಾರ್ಷಿಕ ಭಾರತೀಯ ಸಮ್ಮೇಳನದಲ್ಲಿ ಮುಖ್ಯಭಾಷಣವನ್ನು ಮಾಡುತ್ತಿದ್ದ ಅವರು,ಭಾರತವು ವಿಶ್ವದಲ್ಲಿ ತನ್ನ ಸ್ಥಾನವನ್ನು ಹೆಚ್ಚಿಸಿಕೊಳ್ಳಲು ತನ್ನ ಅನುನಯ ಶಕ್ತಿಯ ಪ್ರಭಾವ ಬೀರಲು ಯತ್ನಿಸುವ ಮುನ್ನ ಆಂತರಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದರು.
ಪ್ರಗತಿಯೇನೋ ಆಗುತ್ತಿದೆ,ಆದರೆ ಅದು ಪ್ರತಿಯೊಬ್ಬರನ್ನೂ ತಲುಪುತ್ತಿಲ್ಲ ಎಂದ ಅವರು,ಒಂದೆಡೆ ನಾವು ಮೇಕ್ ಇನ್‌ಇಂಡಿಯಾ, ಸ್ಟಾರ್ಟ್‌ಪ್ ಇಂಡಿಯಾ ಮತ್ತು ಡಿಜಿಟಲ್ ಇಂಡಿಯಾ ಎಂದು ಹೇಳಿಕೊಂಡು ವಿದೇಶಿ ಹೂಡಿಕೆದಾರರನ್ನು ಸೆಳೆಯಲು ಬಯಸುತ್ತಿದ್ದೇವೆ. ಆದರೆ ಇದೇ ವೇಳೆ ಭಾರತದಲ್ಲಿ ಹೆಡೆಯೆತ್ತುತ್ತಿರುವ ದ್ವೇಷಭಾವನೆಗಳನ್ನು ಕಡೆಗಣಿಸುತ್ತಿದ್ದರೆ ನಾವು ವಿದೇಶಿ ಹೂಡಿಕೆದಾರರನ್ನು ಸೆಳೆಯಲು ಸಾಧ್ಯವಿಲ್ಲ ಎಂದು ನರೇಂದ್ರ ಮೋದಿ ಸರಕಾರದ ಮುಂಚೂಣಿ ಯೋಜನೆಗಳನ್ನು ಪ್ರಸ್ತಾಪಿಸುತ್ತ ಹೇಳಿದರು.
ಆಡಳಿತ ಪಕ್ಷದ ಸದಸ್ಯರು ಅಲ್ಪಸಂಖ್ಯಾತರ ವಿರುದ್ಧ ಅವಮಾನಕಾರಿ ಹೇಳಿಕೆಗಳನ್ನು ನೀಡುವುದು ಒಳ್ಳೆಯದಲ್ಲ. ಅವು ವಿದೇಶಿ ಹೂಡಿಕೆದಾರರನ್ನು ಆಕರ್ಷಿಸುವ ದೇಶದ ಸಾಮರ್ಥ್ಯವನ್ನು ಕುಂದಿಸುತ್ತವೆ ಎಂದರು.
 ಪ್ರತಿಯೊಬ್ಬ ವ್ಯಕ್ತಿಯನ್ನೂ ಸಮಾನವಾಗಿ ಕಾಣುವ ಭಾರತವು ಆತ ಮುಸ್ಲಿಮ್ ಅಥವಾ ಕಾಯಸ್ಥ ಬ್ರಾಹ್ಮಣ ಅಥವಾ ಬೇರೆ ಇನ್ಯಾರೇ ಆಗಿರಲಿ. ಪ್ರತಿಯೊಬ್ಬರಿಗೂ ಸುರಕ್ಷಿತವಾಗಿರುತ್ತದೆ ಎಂದು ಅವರು ಹೇಳಿದರು.
ಭಾರತವು ವಿಶ್ವಕ್ಕೆ ಆಕರ್ಷಕ ತಾಣವಾಗಿ ಉಳಿಯಬೇಕಾದರೆ ಅದು ತನ್ನ ಬಹುಮೂಲ್ಯವಾದ ಅನೇಕತ್ವವನ್ನು ಸಾಮಾಜಿಕ ಆಸ್ತಿಯಂತೆ ರಕ್ಷಿಸಬೇಕಾಗುತ್ತದೆ ಎಂದರು.
ದಿಲ್ಲಿಯ ರಸ್ತೆಗಳಲ್ಲಿ ಮಹಿಳೆಯರ ಮೇಲೆ ದಾಳಿಗಳು ನಡೆಯುವುದು ಒಳ್ಳೆಯದಲ್ಲ. ತಾವು ಇಂದು ಭಾರತದಲ್ಲಿ ಮುಸ್ಲಿಮರಾಗಿರುವ ಬದಲು ಗೋವುಗಳಾಗಿದ್ದರೆ ಸುರಕ್ಷಿತವಿರುತ್ತಿದ್ದೆವು ಎಂದು ಕೆಲವರು ಭಯಪಡತೊಡಗಿದರೆ ಅದು ಒಳ್ಳೆಯ ಲಕ್ಷಣವಲ್ಲ ಎಂದು ತರೂರ್ ನುಡಿದರು.
ದೇಶದಲ್ಲಿಯ ಅಸಹಿಷ್ಣುತೆಯ ಕೃತ್ಯಗಳಿಂದಾಗಿ ತನ್ನ ಹೂಡಿಕೆದಾರ ಸ್ನೇಹಿತರೋರ್ವರು ಭಾರತದಲ್ಲಿ ಹೂಡಿಕೆ ಮಾಡದಿರಲು ನಿರ್ಧರಿಸಿದರು ಎಂದು ಭಾರತೀಯ ವಿದ್ಯಾರ್ಥಿಗಳಿಗೆ ಅವರು ತಿಳಿಸಿದರು.


ಕಾಂಗ್ರೆಸ್ ನಾಯಕ ಶಶಿ ತರೂರ್ ಮೂಲಸೌಕರ್ಯ ಮತ್ತು ತಯಾರಿಕೆ ಕ್ಷೇತ್ರಗಳ ನಿರ್ಮಾಣ ಮತ್ತು ಆಧುನೀಕರಣದಲ್ಲಿ ಮುಖ್ಯ ಪಾತ್ರ ವಹಿಸುವ ವಿದೇಶಿ ನೇರ ಹೂಡಿಕೆಯನ್ನು ಆಕರ್ಷಿಸಲು ದೇಶದ ಬಹುತ್ವವಾದ ಗುಣವನ್ನು ಕಾಯ್ದುಕೊಳ್ಳುವುದು ಅಗತ್ಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X