ಬದುಕುಳಿದಿರುವ ಕರ್ನಾಟಕದ ಯೋಧ ಹನುಮಂತಪ್ಪ ಕೊಪ್ಪದ

ಹೊಸದಿಲ್ಲಿ, ಫೆ.9: ಜಮ್ಮು -ಕಾಶ್ಮೀರದ ಸಿಯಾಚಿನ್ ನಲ್ಲಿ ಸಂಭವಿಸಿದ ಹಿಮಪಾತದಲ್ಲಿ ಸಿಲುಕಿಕೊಂಡಿದ್ದ ಕರ್ನಾಟಕದ ಯೋಧ ಬೆಟದೂರಿನ ನಿವಾಸಿ ಹನುಮಂತಪ್ಪ ಕೊಪ್ಪದ ಜೀವಂತವಾಗಿ ಪತ್ತೆಯಾಗಿಗ್ದಾರೆ..
ಜಮ್ಮು ಮತ್ತು ಕಾಶ್ಮೀರದ ಸಿಯಾಚಿನ್ ನಲ್ಲಿ ಫೆಬ್ರವರಿ 3ರಂದು ಸಂಭವಿಸಿದ ಹಿಮಪಾತದಲ್ಲಿ ಭಾರತದ 10 ಯೋಧರು ಮೃತಪಟ್ಟಿದ್ದಾರೆ ಅವರಲ್ಲಿ ಹನುಮಂತಪ್ಪ ಕೊಪ್ಪದ ಸೇರಿದ್ದಾರೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿತ್ತು. ಆದರೆ ಇದೀಗ ಅವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ಧಾರೆ.
6 ದಿನಗಳ ಬಳಿಕ ಅಸ್ವಸ್ಥ ಸ್ಥಿತಿಯಲ್ಲಿ ಹನುಮಂತಪ್ಪ ಕೊಪ್ಪದ ಅವರನ್ನು ಭಾರತೀಯ ಸೇನೆ ರಕ್ಷಿಸಿದೆ. ಈ ಬಗ್ಗೆ ಸೇನೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ಅಸ್ವಸ್ಥ ಸೇನಾ ಯೋಧನಿಗೆ ದಿಲ್ಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Next Story





