ಮೊಡಂಕಾಪು ವಿದ್ಯಾರ್ಥಿಗೆ ಹಲ್ಲೆ ಪ್ರಕರಣ: ತರಗತಿ ಬಹಿಷ್ಕರಿಸಿ ಧರಣಿ

ಬಂಟ್ವಾಳ: ಮೊಡಂಕಾಪು ಕಾರ್ಮೆಲ್ ಕಾಲೇಜು ವಿದ್ಯಾರ್ಥಿಯೋರ್ವನಿಗೆ ಹಲ್ಲೆ ನಡೆಸಿರುವ ಆರೋಪಿಯ ವಿರುದ್ಧ ಕ್ರಮ ತೆಗೆದುಕೊಳ್ಳುವಲ್ಲಿ ಪ್ರಾಂಶುಪಾಲರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಮಂಗಳವಾರ ಧರಣಿ ನಡೆಸಿದರು.
ಸೋಮವಾರ ಮಧ್ಯಾಹ್ನ ಹೋಮ್ ಗಾರ್ಡ್ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದ ಎಂದು ದೂರಲಾಗಿತ್ತು. ಕಾಲೇಜಿಗೆ ಬಂದ ನಗರ ಠಾಣೆ ಎಸ್ಸೈ ನಂದಕುಮಾರ್ ವಿದ್ಯಾರ್ಥಿಗಳೊಂದಿಗೆ ಮಾತು ಕತೆ ನಡೆಸಿದರು. ಬಳಿಕ ವಿದ್ಯಾರ್ಥಿಗಳು ಪ್ರಾಂಶುಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

Next Story





