Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಗರ್ಭಿಣಿಯರ ಸ್ಕ್ಯಾನಿಂಗ್ - 5...

ಮಂಗಳೂರು : ಗರ್ಭಿಣಿಯರ ಸ್ಕ್ಯಾನಿಂಗ್ - 5 ವರ್ಷಗಳ ದಾಖಲೆ ಪರಿಶೀಲನೆಗೆ ಸಿಇಓ ಸೂಚನೆ

ವಾರ್ತಾಭಾರತಿವಾರ್ತಾಭಾರತಿ9 Feb 2016 6:08 PM IST
share
ಮಂಗಳೂರು : ಗರ್ಭಿಣಿಯರ ಸ್ಕ್ಯಾನಿಂಗ್ - 5 ವರ್ಷಗಳ ದಾಖಲೆ ಪರಿಶೀಲನೆಗೆ ಸಿಇಓ ಸೂಚನೆ

ಮಂಗಳೂರು ಫೆಬ್ರವರಿ 9 ;- ಕಳೆದ 5 ವರ್ಷಗಳಲ್ಲಿ ಜಿಲ್ಲೆಯ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ನಡೆದಿರುವ ಗರ್ಭಿಣಿಯರಿಗೆ ಸಂಬಂಧಪಟ್ಟ ಎಲ್ಲಾ ಸ್ಕ್ಯಾನಿಂಗ್‌ಗಳ ದಾಖಲೆ ಪರಿಶೀಲನೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ ಸೂಚಿಸಿದ್ದಾರೆ.
   ಜನನ ಪೂರ್ವ ಲಿಂಗ ನಿರ್ಣಯ- ನಿರ್ಬಂಧ ಮತ್ತು ದುರ್ಬಳಕೆ ತಡೆ ಕಾಯಿದೆಗೆ(ಪಿಸಿ & ಪಿಎನ್‌ಡಿಟಿ) ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಲಿಂಗಾನುಪಾತದಲ್ಲಿ ಹೆಣ್ಣುಮಕ್ಕಳ ಸಂಖ್ಯೆ ಕಡಿಮೆಯಾಗಲು ಕಾರಣ, ಬಗ್ಗೆ ಸರಿಪಡಿಸಲು ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಕುರಿತು ಚರ್ಚಿಸಲು ಜಿಲ್ಲಾ ಆರೋಗ್ಯ ಇಲಾಖೆ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಂಗಳವಾರ ಮಾತನಾಡಿದರು.
 ಸ್ಕ್ಯಾನಿಂಗ್ ದಾಖಲೆ ಆಧರಿಸಿ, ಸದರಿ ಗರ್ಭದ ಮಗುವಿನ ಜನನ ಮತ್ತು ಬೆಳವಣಿಗೆಯ ಮೇಲೆ ನಿಗಾ ಇರಿಸುವ ಕುರಿತು ಪರಿಶೀಲಿಸಬೇಕಿದೆ. ಕಳೆದ 6 ವರ್ಷಗಳಲ್ಲಿ ಜಿಲ್ಲೆಯಲ್ಲಿ ಗಂಡು ಹೆಣ್ಣಿನ ಅನುಪಾತದಲ್ಲಿ ಹೆಣ್ಣುಮಕ್ಕಳ ಸಂಖ್ಯೆ ಕುಸಿಯುತ್ತಿರುವುದು ಕಳವಳಕಾರಿಯಾಗಿದೆ. ಈ ನಿಟ್ಟಿನಲ್ಲಿ ವೈಜ್ಞಾನಿಕವಾಗಿ ಅಧ್ಯಯನ ಮಾಡಲು, ಹಿಂದಿನ ಎಲ್ಲಾ ಸ್ಕ್ಯಾನಿಂಗ್‌ಗಳನ್ನು ಪರಿಶೀಲಿಸುವಂತೆ ಅವರು ತಿಳಿಸಿದರು.
 ದ.ಕ. ಜಿಲ್ಲೆಯಲ್ಲಿ 145 ಸ್ಕ್ಯಾನಿಂಗ್ ಕೇಂದ್ರಗಳು ನೋಂದಣಿಗೊಂಡಿವೆ. ಜನನ ಪೂರ್ವ ಲಿಂಗ ನಿರ್ಣಯ (ನಿರ್ಬಂಧ ಮತ್ತು ದುರ್ಬಳಕೆ) ಕಾಯಿದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಕೂಡಲೇ ಆರೋಗ್ಯ ಇಲಾಖೆ ಕ್ರಿಯಾಯೋಜನೆ ರೂಪಿಸಬೇಕು. ಈಗಾಗಲೇ ಜಿಲ್ಲಾಧಿಕಾರಿಗಳು ಅಧಿಕಾರಿಗಳ 16 ತಂಡ ರಚಿಸಿದ್ದು, ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದರು.
  ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪಾಲಿಕೆಯ ಆರೋಗ್ಯ ವಿಭಾಗವು ಈ ನಿಟ್ಟಿನಲ್ಲಿ ಸಹಕರಿಸಬೇಕು. ಲಿಂಗಪತ್ತೆಯನ್ನು ತಡೆಗಟ್ಟಲು ಟೋಲ್‌ಫ್ರೀ ಸಂಖ್ಯೆಯ ದೂರವಾಣಿ ಆರಂಭಿಸಿದರೆ, ಸಾರ್ವಜನಿಕರು ಅಂತಹ ಸ್ಕ್ಯಾನಿಂಗ್ ಕೇಂದ್ರಗಳ ಮಾಹಿತಿ ನೀಡಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಟೋಲ್‌ಫ್ರೀ ದೂರವಾಣಿ ಆರಂಭಿಸುವಂತೆ ಸಿಇಓ ತಿಳಿಸಿದರು.
 ಸಾರ್ವಜನಿಕರಲ್ಲಿ ಜನನ ಪೂರ್ವ ಲಿಂಗ ನಿರ್ಣಯ (ನಿರ್ಬಂಧ ಮತ್ತು ದುರ್ಬಳಕೆ) ತಡೆ ಕಾಯಿದೆಯ ಅರಿವು ಮೂಡಿಸಲು ಜಾಗೃತಿ ಕಾರ್ಯಕ್ರಮ ನಡೆಸಲು ಶ್ರೀವಿದ್ಯಾ ತಿಳಿಸಿದರು.
    ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್ ಮಾತನಾಡಿ, ಸ್ಕ್ಯಾನಿಂಗ್ ಯಂತ್ರವನ್ನು ಖರೀದಿಸುವ ವೈದ್ಯರು ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆಯಬೇಕಿದೆ. ಒಂದೇ ಪರವಾನಿಗೆಯಲ್ಲಿ ಎರಡು ಸ್ಕ್ಯಾನಿಂಗ್ ಯಂತ್ರಗಳನ್ನು ಬಳಸುವಂತಿಲ್ಲ. ಹಳೆಯ ಸ್ಕ್ಯಾನಿಂಗ್ ಯಂತ್ರವನ್ನು ಹೊಸ ಯಂತ್ರಕ್ಕೆ ಬದಲಾಯಿಸಲು ಕೂಡಾ ಪ್ರತ್ಯೇಕ ಅನುಮತಿ ಪಡೆಯಬೇಕು. ಅಲ್ಲದೇ, ಸ್ಕ್ಯಾನಿಂಗ್ ಯಂತ್ರವನ್ನು ಬಳಸಲು ಅನುಮತಿ ಪಡೆದ ವೈದ್ಯರೇ ಅದನ್ನು ನಿರ್ವಹಿಸಬೇಕೇ ಹೊರತು ಬೇರೆ ವೈದ್ಯರು ಅದನ್ನು ಬಳಸುವಂತಿಲ್ಲ ಎಂದು ಅವರು ತಿಳಿಸಿದರು.
ಎಂಬಿಬಿಎಸ್ ಪದವಿ ಪಡೆದಿದ್ದರೂ, ಪ್ರತ್ಯೇಕ ನಿಗದಿತ ಪರೀಕ್ಷೆ ಪಾಸಾಗಿದ್ದರೆ ಮಾತ್ರ ಅಂತಹ ವೈದ್ಯರು ಸ್ಕ್ಯಾನಿಂಗ್ ಮಾಡಲು ಅರ್ಹತೆ ಹೊಂದಿದ್ದಾರೆ. ಹೆಚ್ಚು ಗರ್ಭಪಾತ ನಡೆಸುವ ವೈದ್ಯರ ಮೇಲೆ ನಿಗಾ ಇರಿಸಲಾಗುವುದು ಎಂದು ಅವರು ಹೇಳಿದರು.
 ಸಮಾಜಸೇವಕಿ ಹಿಲ್ಡಾ ರಾಯಪ್ಪನ್ ಮಾತನಾಡಿ, ಕಳೆದ ಹಲವು ವರ್ಷಗಳಿಂದಲೂ ಪಿಸಿ & ಪಿಎನ್‌ಡಿಟಿ ಕಾಯಿದೆಯ ಬಗ್ಗೆ ಚರ್ಚೆಗಳಾಗುತ್ತಿದೆಯೇ ಹೊರತು ಪರಿಣಾಮಕಾರಿ ಅನುಷ್ಠಾನಗೊಳ್ಳುತ್ತಿಲ್ಲ. ಈ ನಿಟ್ಟಿನಲ್ಲಿ ಕಾಯಿದೆಯ ಸಮರ್ಪಕ ಅನುಷ್ಠಾನ ತ್ವರಿತವಾಗಿ ಆರಂಭಗೊಳ್ಳಬೇಕು ಎಂದರು. ದ.ಕ. ಜಿಲ್ಲೆಯಲ್ಲಿ ಬಾಲಕಾರ್ಮಿಕರ ನಿಯಂತ್ರಣ ಕಾಯಿದೆ ಯಶಸ್ವಿಯಾಗಿದ್ದು, ಇದೇ ಮಾದರಿ ಪಿಸಿ & ಪಿಎನ್‌ಡಿಟಿ ಕಾಯಿದೆ ಕಟ್ಟುನಿಟ್ಟಾಗಿ ಜಾರಿಯಾಗಬೇಕು ಎಂದರು.
   ಸಭೆಯಲ್ಲಿ ಪಿಸಿ & ಪಿಎನ್‌ಡಿಟಿ ಕಾಯಿದೆಯ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸದಸ್ಯರಾದ ಮಹಿಳಾ ಮತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಸುಂದರಪೂಜಾರಿ, ವಾರ್ತಾಧಿಕಾರಿ ಖಾದರ್ ಶಾ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಸಿಕಂದರ್ ಪಾಶಾ, ತಾಲೂಕು ವೈದ್ಯಾಧಿಕಾರಿಗಳು, ತಜ್ಞ ವೈದ್ಯರು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X