Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಸಿಸ್ ಹೆಸರಲ್ಲಿ ಅಮಾಯಕರಿಗೆ ಕಿರುಕುಳ...

ಐಸಿಸ್ ಹೆಸರಲ್ಲಿ ಅಮಾಯಕರಿಗೆ ಕಿರುಕುಳ ಬೇಡ - ಮೋದಿ ಸರಕಾರಕ್ಕೆ ಮುಸ್ಲಿಮ್ ಸಂಘಟನೆಗಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ9 Feb 2016 11:43 PM IST
share
ಐಸಿಸ್ ಹೆಸರಲ್ಲಿ ಅಮಾಯಕರಿಗೆ ಕಿರುಕುಳ ಬೇಡ - ಮೋದಿ ಸರಕಾರಕ್ಕೆ ಮುಸ್ಲಿಮ್ ಸಂಘಟನೆಗಳ ಆಗ್ರಹ

ಹೊಸದಿಲ್ಲಿ,ಫೆ.9: ಐಸಿಸ್ ಬೆದರಿಕೆಯ ಹೆಸರಿನಲ್ಲಿ ಅಮಾಯಕ ಮುಸ್ಲಿಮರನ್ನು ಗುರಿಮಾಡುವುದರ ವಿರುದ್ಧ ವಿವಿಧ ಪ್ರಮುಖ ಮುಸಿಮ್ ಸಂಘಟನೆಗಳು ನರೇಂದ್ರ ಮೋದಿ ಸರಕಾರಕ್ಕೆ ಎಚ್ಚರಿಕೆಯನ್ನು ನೀಡಿವೆ.

  ಹೊಸದಿಲ್ಲಿಯಲ್ಲಿ ಸೋಮವಾರ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ವಿವಿಧ ಮುಸ್ಲಿಮ್ ಸಂಘಟನೆಗಳ ಮುಖಂಡರು ಮಾತನಾಡಿ, ಐಸಿಸ್ ಹಾಗೂ ಅಲ್‌ಖೈದಾ ಜೊತೆ ನಂಟು ಹೊಂದಿದ್ದಾರೆಂಬ ಶಂಕೆಯಲ್ಲಿ ದೇಶವ್ಯಾಪಿಯಾಗಿ ಮುಸ್ಲಿಮ್ ಯುವಕರು ಹಾಗೂ ಧರ್ಮಗುರುಗಳನ್ನು ಬಂಧಿಸಲಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ‘‘ಐಸಿಸ್ ಹೆಸರಿನಲ್ಲಿ ಮುಸ್ಲಿಮ್ ಯುವಜನರನ್ನು ಏಕಪಕ್ಷೀಯವಾಗಿ ಬಂಧಿಸುತ್ತಿರುವ ಹಿಂದೆ ಇಸ್ಲಾಮ್ ಹಾಗೂ ಮುಸ್ಲಿಮರಿಗೆ ಕಳಂಕ ತರುವ ಸಂಘಟಿತ ಸಂಚು ಅಡಗಿದೆ. ಮುಸ್ಲಿಮರ ದೇಶಭಕ್ತಿಯನ್ನು ಶಂಕಿಸಲಾಗುತ್ತಿದೆ ಹಾಗೂ ಅವರನ್ನು ಭಯಭೀತಗೊಳಿಸಲಾಗುತ್ತಿದೆ. ಹಿಂದೂಗಳು ಮತ್ತು ಮುಸ್ಲಿಮರ ನಡುವೆ ದ್ವೇಷವನ್ನು ಬಿತ್ತಿ ರಾಜಕೀಯ ಲಾಭವನ್ನು ಪಡೆಯುವ ದುರುದ್ದೇಶ ಇದಾಗಿದೆ’’ ಎಂದು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾದ ಜಂಟಿ ಪತ್ರಿಕಾಹೇಳಿಕೆ ತಿಳಿಸಿದೆ.

ಕಳೆದ ವರ್ಷ ಕೇಂದ್ರ ಗೃಹ ಸಚಿವ ರಾಜ್‌ನಾಥ್‌ಸಿಂಗ್, ಜೈಪುರದಲ್ಲಿ ನಡೆದ ಭಯೋತ್ಪಾದನಾ ವಿರೋಧಿ ಸಮಾವೇಶದಲ್ಲಿ ಭಾರತೀಯ ಮುಸ್ಲಿಮರು ದೇಶಭಕ್ತರಾಗಿದ್ದು, ಅವರನ್ನು ತನ್ನೆಡೆಗೆ ಸೆಳೆಯಲು ಐಸಿಸ್ ವಿಫಲವಾಗಿದೆಯೆಂದು ಹೇಳಿದ್ದರು. ಪ್ರಧಾನಿ ಮೋದಿ ಕೂಡಾ ತನ್ನ ಅಮೆರಿಕ ಭೇಟಿಯ ವೇಳೆ ಇದೇ ಮಾತನ್ನು ಪುನರುಚ್ಚರಿಸಿದ್ದರು.

  ‘‘ಇದಾದ ಒಂದು ವರ್ಷದ ಬಳಿಕ, ಗಣರಾಜ್ಯೋತ್ಸವಕ್ಕೆ ಸ್ವಲ್ಪ ಮುನ್ನ ತನಿಖಾ ಸಂಸ್ಥೆಗಳು,ಐಸಿಸ್ ಹಾಗೂ ಅಲ್‌ಖೈದಾ ಜೊತೆ ನಂಟು ಹೊಂದಿರುವ ಶಂಕೆಯಲ್ಲಿ ಮುಸ್ಲಿಮರನ್ನು ಬಂಧಿಸಲು ಆರಂಭಿಸಿದ್ದವು. ಇದರಿಂದಾಗಿ ಭಾರತೀಯ ಮುಸ್ಲಿಮ್ ಯುವಕರು ಐಸಿಸ್ ಜೊತೆ ಸಂಪರ್ಕದಲ್ಲಿದ್ದಾರೆ ಮಾತ್ರವಲ್ಲ ದೇಶಾದ್ಯಂತ ದಾಳಿಗೆ ಸಂಚು ನಡೆಸುತ್ತಿದ್ದಾರೆಂಬ ಭಾವನೆಯು ಮೂಡಲಾರಂಭಿಸಿತೆಂದು ಹೇಳಿಕೆ ತಿಳಿಸಿದೆ.

 ಈ ಹಿಂದೆ ಇಂತಹದೇ ಪ್ರಕರಣಗಳಲ್ಲಿ ಬಂಧಿತರಾಗಿದ್ದ ಮುಸ್ಲಿಮ್ ಯುವಕರು ನಿರಪರಾಧಿಗಳೆಂದು ಸಾಬೀತಾಗಿ ಬಿಡುಗಡೆಗೊಂಡಂತೆ, ಈಗ ಬಂಧಿಸಲ್ಪಟ್ಟವರೂ ಭಯೋತ್ಪಾದನೆಯ ಆರೋಪಗಳಿಂದ ಮುಕ್ತರಾಗಲಿದ್ದಾರೆಂಬ ವಿಶ್ವಾಸವನ್ನು ಅದು ವ್ಯಕ್ತಪಡಿಸಿದೆ.

 ದೇಶದಲ್ಲಿ ನಡೆದ ಕೆಲವು ಭಯೋತ್ಪಾದಕ ದಾಳಿ ಪ್ರಕರಣಗಳಲ್ಲಿ ಮೊದಲು ಮುಸ್ಲಿಮರ ಮೇಲೆ ದೋಷಾರೋಪ ಹೊರಿಸಲಾಗಿತ್ತಾದರೂ, ಆನಂತರ ಅದು ಹಿಂದುತ್ವವಾದಿಗಳ ಕೃತ್ಯವೆಂದು ಬಯಲಿಗೆ ಬಂದಿತ್ತು. ಹೈದರಾಬಾದ್‌ನ ಮಕ್ಕಾ ಮಸೀದಿ, ಮಾಲೆಗಾಂವ್, ಅಜ್ಮೀರ್ ದರ್ಗಾ ಹಾಗೂ ಸಂಜೋತಾ ಎಕ್ಸ್‌ಪ್ರೆಸ್ ಪ್ರಕರಣಗಳಿಗೆ ಸಂಬಂಧಿಸಿ ಗುಪ್ತಚರ ಸಂಸ್ಥೆಗಳು ನಡೆಸಿದ ತನಿಖೆಗಳು ಹಿಂದುತ್ವವಾದಿ ಭಯೋತ್ಪಾದಕರ ಜಾಲವನ್ನು ಬಯಲಿಗೆಳೆದಿತ್ತೆಂದು ಹೇಳಿಕೆಯು ತಿಳಿಸಿದೆ.

 ಐಸಿಸ್ ಒಂದು ಭಯೋತ್ಪಾದಕ ಸಂಘಟನೆಯಾಗಿದ್ದು, ಅದಕ್ಕೆ ಇಸ್ಲಾಮ್ ಹಾಗೂ ಅದರ ಬೋಧನೆಗಳ ಜೊತೆ ಯಾವ ವಿಧದಲ್ಲೂ ಸಂಬಂಧ ಹೊಂದಿಲ್ಲವೆಂಬ ನಿರ್ಣಯವನ್ನು ಇದೇ ಸಂದರ್ಭದಲ್ಲಿ ಮುಸ್ಲಿಮ್ ಸಂಘಟನೆಗಳು ಅವಿರೋಧವಾಗಿ ಕೈಗೊಂಡವು.

 ಪತ್ರಿಕಾಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್, ಜಮೀಯತೆ ಉಲೆಮಾ ಹಿಂದ್, ಜಮೀಯತೆ ಅಹ್ಲೆ ಹದೀಸ್, ಮುಸ್ಲಿಮ್ ಮಜ್ಲಿಸೆ ಮುಶಾವರತ್, ಆಲ್ ಇಂಡಿಯಾ ಮಿಲ್ಲಿ ಕೌನ್ಸಿಲ್ ಹಾಗೂ ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಗಳ ಪ್ರಮುಖರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X