ಜಂತುಹುಳ ನಿವಾರಣಾ ದಿನಾಚರಣೆ
ಉಡುಪಿ, ಫೆ.9: ರಾಷ್ಟ್ರೀಯ ಜಂತುಹುಳ ನಿವಾರಣಾ ದಿನಾಚರಣೆ ಅಂಗವಾಗಿ ಫೆ.10ರಂದು ಎಲ್ಲಾ ಶಾಲೆ ಹಾಗೂ ಅಂಗನವಾಡಿಗಳಲ್ಲಿ 1ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆಯನ್ನು ಉಚಿತವಾಗಿ ನೀಡಲಾಗುವುದು.
ನಾಳೆ ಮಾತ್ರೆಯನ್ನು ಪಡೆಯದೆ ಇರುವ ಮಕ್ಕಳಿಗೆ ಫೆ.15ರಂದು ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





