ಇಂದು ರಾಜಭವನ ಚಲೋ
ಬೆಂಗಳೂರು, ಫೆ.9: ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ಸಾವಿಗೆ ಕಾರಣರಾದವರನ್ನು ಕೂಡಲೇ ಬಂಧಿಸಬೇಕು ಹಾಗೂ ವಿದ್ಯಾರ್ಥಿ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ೆ.10ರಂದು ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕ್ಯಾಂಪಸ್ ್ರಂಟ್ ಆ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ತುಫೈಲ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.30ರಂದು ದಿಲ್ಲಿಯಲ್ಲಿ ನಾನಾ ವಿದ್ಯಾರ್ಥಿ ಸಂಘಟನೆಗಳು ರೋಹಿತ್ ವೇಮುಲಾ ಅವರ ಆತ್ಮಹತ್ಯೆಗೆ ಕಾರಣರಾದವರ ಬಂಧನಕ್ಕೆ ಒತ್ತಾಯಿಸಿ ಧರಣಿ ನಡೆಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಮತ್ತು ್ಯಾಶಿಸ್ಟ್ ಶಕ್ತಿಗಳ ಗೂಂಡಾಗಳು ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದರು.
ಅದೇ ರೀತಿ ಬೆಂಗಳೂರಿನಲ್ಲಿ ವಿದ್ಯಾರ್ಥಿ ಸಂಘಟನೆಯೊಂದು ಖಾಸಗಿ ವಲಯದಲ್ಲಿ ಮೀಸಲಾತಿಗಾಗಿ ಧರಣಿ ನಡೆಸುತ್ತಿದ್ದವರ ಮೇಲೆ ಲಾಠಿ ಚಾರ್ಜ್ ಮಾಡಲಾಗಿದೆ. ಇವೆಲ್ಲವೂ ವಿದ್ಯಾರ್ಥಿ ಹಕ್ಕುಗಳನ್ನು ದಮನಿಸುವ ಕೃತ್ಯವಾಗಿದ್ದು, ಇದರ ವಿರುದ್ಧ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳನ್ನು ದೇಶದ ಭವಿಷ್ಯದ ನಾಯಕರನ್ನಾಗಿ ಮಾಡಬೇಕಾಗಿದೆ. ಕಲೆ, ಸಂಸ್ಕೃತಿ ಮತ್ತು ಸಹಬಾಳ್ವೆಯ ಮೂಲ ಪಾಠವನ್ನು ವಿದ್ಯಾರ್ಥಿಗಳ ಮಧ್ಯೆ ಬಿತ್ತರಿಸಿ ಅವರನ್ನು ದೇಶದ ಸಂಪತ್ತಾಗಿ ಮಾರ್ಪಡಿಸುವುದು ವಿವಿಗಳ ಆದ್ಯ ಕರ್ತವ್ಯ. ಇಂತಹ ವಿವಿಗಳಿಗೆ ಬಲಪಂಥೀಯ ಚಿಂತನೆಗಳನ್ನು ಮೈಗೂಡಿಸಿಕೊಂಡಂತಹ ವ್ಯಕ್ತಿಗಳನ್ನು ಕುಲಪತಿಗಳನ್ನಾಗಿ ನೇಮಿಸುತ್ತಿರುವುದು ಆತಂಕಕಾರಿ ಎಂದು ಕಳವಳ ವ್ಯಕ್ತಪಡಿಸಿದರು.
ಅಲ್ಲದೆ, ಅಲಿಗಡ ವಿವಿಯನ್ನು ಅಲ್ಪಸಂಖ್ಯಾತ ಮಾನ್ಯತೆಯನ್ನು ರದ್ದುಪ ಡಿಸುವ ಪ್ರಯತ್ನ ನಡೆಯುತ್ತಿದ್ದು, ಇದು ಕೂಡ ಅಲ್ಪಸಂಖ್ಯಾತರನ್ನು ದಮನಿಸುವ ಪ್ರವೃತ್ತಿಯ ಮುಂದುವರಿದ ಭಾಗವಾಗಿದೆ ಎಂದು ಹೇಳಿದ ಅವರು, ಈ ಎಲ್ಲ ಅಂಶಗಳನ್ನು ಮುಂದಿಟ್ಟು ಮತ್ತು ಸಂವಿಧಾನದ ಆಶಯಗಳನ್ನು ಕಾಪಾಡಬೇಕು ಎಂದು ಒತ್ತಾಯಿಸಿ ಈ ಧರಣಿ ಹಮ್ಮಿಕೊಳ್ಳಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಿಎ್ಐನ ರಾಜ್ಯ ಸಮಿತಿ ಸದಸ್ಯರಾದ ಮುಹಮ್ಮದ್ ಇರ್ಷಾದ್, ಸುಫಿಯಾನ್ ಉಪಸ್ಥಿತರಿದ್ದರು.