ಫೆ.19ಕ್ಕೆ ಬಿಸಿಸಿಐ ವಿಶೇಷ ಸಭೆ
ಮುಂಬೈ, ಫೆ.10: ಜಸ್ಟಿಸ್(ನಿವೃತ್ತ) ಆರ್.ಎಂ. ಲೋಧಾ ಸಮಿತಿಯ ಶಿಫಾರಸನ್ನು ಜಾರಿಗೆ ತರಲೇಬೇಕು ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ನೀಡಿರುವ ಮಹತ್ವದ ತೀರ್ಪಿನ ಬಗ್ಗೆ ಚರ್ಚಿಸಲು ಬಿಸಿಸಿಐ ಫೆ.19 ರಂದು ವಿಶೇಷ ಸಾಮಾನ್ಯ ಸಭೆ ನಡೆಸಲು ನಿರ್ಧರಿಸಿದೆ.
ಲೋಧಾ ಸಮಿತಿಯ ವರದಿಯನ್ನು ಜಾರಿಗೆ ತರುವ ಸಂಬಂಧ ಚರ್ಚೆ ನಡೆಸಲು ಎಸ್‌ಜಿಎಂ ಕರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ವಾರ ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್ ಕಳೆದ ರವಿವಾರ ಕಾನೂನು ಸಮಿತಿಯನ್ನು ಭೇಟಿಯಾಗಿದ್ದು, ಈ ವೇಳೆ ಲೋಧಾ ಸಮಿತಿಯ ಶಿಫಾರಸನ್ನು ಜಾರಿಗೊಳಿಸುವ ಕುರಿತು ವಿಶೇಷ ಸಾಮಾನ್ಯ ಸಭೆ ನಡೆಸಲು ನಿರ್ಧರಿಸಲಾಗಿತ್ತು.
Next Story





