Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಮತದಾರರ ಆಮಿಷದ ಬಗ್ಗೆ...

ಮಂಗಳೂರು : ಮತದಾರರ ಆಮಿಷದ ಬಗ್ಗೆ ಅಭ್ಯರ್ಥಿಗಳ ನಿಗಾಕ್ಕೆ ಅಧಿಕಾರಿಗಳಿಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ11 Feb 2016 7:35 PM IST
share

ಮಂಗಳೂರು,ಫೆ.11: ಚುನಾವಣಾ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಹಣದ ಆಮಿಷ, ಸಾಮಾಗ್ರಿಗಳ ವಿತರಣೆ ಮಾಡದಂತೆ ಜಾಗರೂಕರಾಗಿರಬೇಕು ಎಂದು ಜಿಲ್ಲಾಧಿಕಾರಿ ಚುನಾವಣಾ ಸಿಬ್ಬಂದಿಗಳಿಗೆ ಸೂಚಿಸಿದ್ದಾರೆ.  ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯ ನೇತ್ರಾವತಿ ಸಭಾಂಗಣದಲ್ಲಿ ಜಿ.ಪಂ ಮತ್ತು ತಾ.ಪಂ ಚುನಾವಣೆಯ ತಯಾರಿ ಸಂಬಂಧ ಸೆಕ್ಟರ್ ಅಧಿಕಾರಿಗಳು, ಸಂಚಾರಿ ತಂಡ, ಲೆಕ್ಕಪತ್ರ ಸಿಬ್ಬಂದಿಗಳ ಸಭೆಯಲ್ಲಿ ಅವರು ಮಾತನಾಡಿದರು.

 ಪ್ರತಿಚುನಾವಣೆಯ ಸಂದರ್ಭದಲ್ಲಿಯೂ ಕೇರಳ ರಾಜ್ಯದಿಂದ ಬಂದವರು ನಕಲಿ ಮತ ಚಲಾವಣೆ ಮಾಡುತ್ತಾರೆ ಎಂಬ ಆಪಾದನೆ ಕೇಳಿಬರುತ್ತಿರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಗಡಿ ಭಾಗದಲ್ಲಿರುವ ಚುನಾವಣಾ ಸಿಬ್ಬಂದಿಗಳು ಹೆಚ್ಚಿನ ಗಮನ ವಹಿಸಬೇಕು . ಚುನಾವಣಾ ಸಿಬ್ಬಂದಿಗಳ ಬಗ್ಗೆ ಋಣಾತ್ಮಕ ದೂರುಗಳು ಬಾರದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.

 ಚುನಾವಣಾ ಸಿಬ್ಬಂದಿಗಳು ಸೌಮ್ಯತೆ , ಸೌಜನ್ಯದಿಂದ ವರ್ತಿಸಬೇಕು. ಜಿಲ್ಲೆಯಲ್ಲಿ ಮರುಮತದಾನ ನಡೆಯುವಂತಹ ಪರಿಸ್ಥಿತಿ ಬಾರದಂತೆ ಎಚ್ಚರಿಕೆ ವಹಿಸಬೇಕು ಎಂದು ಅವರು ಸೂಚಿಸಿದರು.

 ಸಭೆಯಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಕುಮಾರ್ ಚುನಾವಣಾ ಸಂಬಂಧಪಟ್ಟು ರಾಜಕೀಯ ಪಕ್ಷಗಳಿಂದ ಹಾಕಲಾಗಿರುವ ಬ್ಯಾನರ್, ಪೋಸ್ಟರ್‌ಗಳನ್ನು ತಕ್ಷಣವೆ ತೆರವುಗೊಳಿಸಬೇಕು. ಯಾವುದೆ ಧಾರ್ಮಿಕ ಕೇಂದ್ರದ 100 ಮಿಟರ್ ಸುತ್ತದಲ್ಲಿ ಯಾವುದೆ ರಾಜಕೀಯ ಪಕ್ಷವು ಸಭೆ ನಡೆಸದಂತೆ ಎಚ್ಚರಿಕೆ ವಹಿಸಬೇಕು. ಚುನಾವಣಾ ಸಭೆಗಳನ್ನು ಚಿತ್ರೀಕರಿಸಿಕೊಳ್ಳಬೇಕು ಎಂದು ಸೂಚಿಸಿದರು. ಚುನಾವಣೆಯ ದಿನಂದು ಮತಗಟ್ಟೆಯ 200 ಮಿಟರ್ ದೂರದಲ್ಲಿ ರಾಜಕೀಯ ಪಕ್ಷಗಳಿಗೆ ಸ್ಥಳೀಯ ಗ್ರಾಮಪಂಚಾಯತ್ ನಿಂದ ಅನುಮತಿ ಪಡೆದು ತಾತ್ಕಲಿಕ ಬೂತ್ ನಿರ್ಮಿಸಲು ಅವಕಾಶವಿದೆ. ಮತದಾರರಲ್ಲಿ ಎಫಿಕ್ ಕಾರ್ಡ್ ಇರದಿದ್ದರೆ ಚುನಾವಣಾ ಆಯೋಗ ಗುರುತಿಸಿದ ಇತರ 22 ಗುರುತನ್ನು ತೋರಿಸಿ ಮತಚಲಾಯಿಸಲು ಅವಕಾಶವಿದ್ದು ಅದರ ಬಗ್ಗೆ ತಿಳಿದುಕೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಜಿ.ಪಂ , ತಾ.ಪಂ ಚುನಾವಣಾ ವೀಕ್ಷಕ ಬಸವರಾಜೇಂದ್ರ, ವೆಚ್ಚ ವೀಕ್ಷಕ ಬಿ.ಎಚ್. ಹಿರಿಯಣ್ಣ , ನೋಡಲ್ ಅಧಿಕಾರಿ ಪ್ರಮಿಳಾ ಉಪಸ್ಥಿತರಿದ್ದರು.

ಚುನಾವಣಾ ಬಹಿಷ್ಕಾರದ ಬ್ಯಾನರ್ ತೆರವುಗೊಳಿಸಿ: ಜಿಲ್ಲಾಧಿಕಾರಿ

  ಚುನಾವಣಾ ಬಹಿಷ್ಕಾರದ ಬ್ಯಾನರ್ ಹಾಕುವ ಮೂಲಕ ಕೆಲವೆಡೆ ಬ್ಲಾಕ್‌ಮೇಲ್ ತಂತ್ರವನ್ನು ಅನುಸರಿಸಲಾಗುತ್ತಿದೆ. ಮತದಾನ ಚಲಾಯಿಸುವುದು ಎಲ್ಲರ ಮೂಲಭೂತ ಹಕ್ಕು, ಯಾರೂ ಮತವನ್ನು ಬಹಿಷ್ಕರಿಸುವಂತಹ ಪರಿಸ್ಥಿತಿ ಬರಬಾರದು. ಚುನಾವಣಾ ಬಹಿಷ್ಕಾರದ ಬ್ಯಾನರ್‌ಗಳು ಇದ್ದರೆ ಅದನ್ನು ತಕ್ಷಣವೆ ತೆಗೆದುಬಿಡಬೇಕು ಎಂದು ಜಿಲ್ಲಾಧಿಕಾರಿ ಎ.ಬಿ. ಇಬಾ್ರಹೀಂ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X