Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್‌ಗೆ ‘ಶಾಕ್ ಟ್ರೀಟ್‌ಮೆಂಟ್’...

ಕಾಂಗ್ರೆಸ್‌ಗೆ ‘ಶಾಕ್ ಟ್ರೀಟ್‌ಮೆಂಟ್’ ನೀಡಿ: ವೆಂಕಯ್ಯನಾಯ್ಡು

ವಾರ್ತಾಭಾರತಿವಾರ್ತಾಭಾರತಿ11 Feb 2016 11:14 PM IST
share
ಕಾಂಗ್ರೆಸ್‌ಗೆ ‘ಶಾಕ್ ಟ್ರೀಟ್‌ಮೆಂಟ್’ ನೀಡಿ: ವೆಂಕಯ್ಯನಾಯ್ಡು

ಹೆಬ್ಬಾಳ ಕ್ಷೇತ್ರದ ಉಪ ಚುನಾವಣೆ
ಬೆಂಗಳೂರು, ಫೆ.11: ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕದನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಶಾಕ್ ಟ್ರೀಟ್‌ಮೆಂಟ್ ನೀಡಬೇಕಾಗಿದೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯನಾಯ್ಡು ಹೇಳಿದ್ದಾರೆ.
ಗುರುವಾರ ಹೆಬ್ಬಾಳದಲ್ಲಿ ಬಿಜೆಪಿ ಅಭ್ಯಥಿರ್1 ಎನ್.ಎ.ನಾರಾ ಯಣಸ್ವಾಮಿ ಪರವಾಗಿ ಚುನಾವಣಾ ಪ್ರಚಾರ ನಡೆಸಿದ ಅವರು, ಪ್ರಧಾನಮಂತ್ರಿ ಕರೆಯುವ ಸಭೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬರುವುದಿಲ್ಲ. ಇದು ಮುಖ್ಯಮಂತ್ರಿಯ ತಪ್ಪಲ್ಲ. ಅವರ ಮೇಲಿರೊ ಕಾಂಗ್ರೆಸ್ ಹೈಕಮಾಂಡ್ ತಪ್ಪು ಎಂದು ಟೀಕಿಸಿದರು.
ಕೇಂದ್ರ ಸರಕಾರದೊಂದಿಗೆ ಪ್ರತಿಯೊಂದು ವಿಚಾರದಲ್ಲೂ ಸಂಘರ್ಷ ಮುಂದುವರಿಸುವುದು ಕಾಂಗ್ರೆಸ್ ಪದ್ಧತಿಯಾಗಿದೆ ಎಂದ ಅವರು, ದೇಶದ ಅಭಿವೃದ್ಧಿ ಹಾಗೂ ಬೆಳವಣಿಗೆಯ ವಿಚಾರದಲ್ಲಿ ನಾವು ಯಾವುದೇ ರಾಜಕೀಯ ಮಾಡದೆ ಒಂದು ತಂಡವಾಗಿ ಮುಂದುವರಿಯಲು ಇಚ್ಛಿಸುತ್ತಿದ್ದೇವೆ ಎಂದರು.
ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ರಾಜಧಾನಿ ಬೆಂಗಳೂರಿನ ಅಭಿವೃದ್ಧಿಯಾಗಿತ್ತು. ನಂತರ ಬಂದ ಸದಾನಂದಗೌಡ ಹಾಗೂ ಜಗದೀಶ್ ಶೆಟ್ಟರ್ ಅದನ್ನು ಮುಂದುವರಿಸಿದರು. ಆದರೆ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕಡೆಗಣಿಸಲ್ಪಟ್ಟಿದೆ ಎಂದು ವೆಂಕಯ್ಯನಾಯ್ಡು ಟೀಕಿಸಿದರು.
ಕಾಂಗ್ರೆಸ್ ಪಕ್ಷ ಯಾವಾಗಲೂ ರಾಷ್ಟ್ರೀಯ ಭದ್ರತೆಯ ವಿಚಾರದೊಂದಿಗೆ ಜಾತಿ ಹಾಗೂ ವೋಟ್‌ಬ್ಯಾಂಕ್‌ನ್ನು ಬೆರೆಸುವ ಕೆಲಸ ಮಾಡುತ್ತದೆ. 2004ರಲ್ಲಿ ಗುಜರಾತ್‌ನಲ್ಲಿ ಎನ್‌ಕೌಂಟರ್‌ನಲ್ಲಿ ಬಲಿಯಾದ ಇಶ್ರತ್ ಜಹಾನ್ ಭಯೋತ್ಪಾದಕ ಸಂಘಟನೆಯ ಸದಸ್ಯೆಯಾಗಿದ್ದಳು ಎಂಬುದನ್ನು ಉಗ್ರ ಡೇವಿಡ್ ಹೆಡ್ಲಿ ಬಹಿರಂಗಗೊಳಿಸಿದ್ದಾನೆ ಎಂದು ಅವರು ಹೇಳಿದರು.
ಮುಂಬೈ ಸರಣಿ ಬಾಂಬ್ ಸ್ಫೋಟದ ಆರೋಪಿ ಯಾಕುಬ್ ಮೆಮನ್ ಪರವಾಗಿ ಹೋರಾಟ ಮಾಡುವವರಿಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತದೆ. ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ಗಲಾಟೆ ಮಾಡಿದವರ ಪರವಾಗಿ ಕಾಂಗ್ರೆಸ್ ಪಕ್ಷ ನಿಂತಿದೆ. ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಕಾಂಗ್ರೆಸ್ ಇಂತಹ ಕೀಳು ಮಟ್ಟದ ಕೆಲಸ ಮಾಡುತ್ತಿದೆ ಎಂದು ವೆಂಕಯ್ಯನಾಯ್ಡು ಆಕ್ರೋಶ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X