Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟಿಪ್ಪು ಜಯಂತಿ ಗಲಭೆ ಪ್ರಕರಣ; 9 ಮಂದಿ...

ಟಿಪ್ಪು ಜಯಂತಿ ಗಲಭೆ ಪ್ರಕರಣ; 9 ಮಂದಿ ವಿರುದ್ಧ ಚಾರ್ಜ್‌ಶೀಟ್

ವಾರ್ತಾಭಾರತಿವಾರ್ತಾಭಾರತಿ11 Feb 2016 11:28 PM IST
share

ಮಡಿಕೇರಿ, ಫೆ. 11: ಟಿಪ್ಪು ಜಯಂತಿ ಸಂದರ್ಭ ನಗರದಲ್ಲಿ ನಡೆದ ಗಲಭೆಯಲ್ಲಿ ಮೃತಪಟ್ಟ ವಿಶ್ವ ಹಿಂದೂ ಪರಿಷತ್‌ನ ಮುಖಂಡ ಕುಟ್ಟಪ್ಪ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣಾ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಸಲ್ಲಿಸಿದ್ದಾರೆ.
9 ಮಂದಿಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ನಾಲ್ವರು ಬಂಧನದಲ್ಲಿದ್ದಾರೆ, ಐವರು ತಲೆ ಮರೆಸಿಕೊಂಡಿದ್ದಾರೆ. ಗಲಭೆ ಪ್ರಕರಣದ ತನಿಖಾಧಿಕಾರಿಯಾಗಿರುವ ನಗರ ಠಾಣೆಯ ವೃತ್ತ ನಿರೀಕ್ಷಕ ಐ.ಪಿ. ಮೇದಪ್ಪ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದರು. ನವೆಂಬರ್ 10 ರಂದು ಕುಟ್ಟಪ್ಪ ಅವರ ಸಾವಿನ ಘಟನೆ ನಡೆದಿದ್ದು, ಸೆಕ್ಷನ್ 302ರಂತೆ ಪ್ರಕರಣ ದಾಖಲಾಗಿತ್ತು. ಆದರೆ, ಇದೀಗ ಸೆಕ್ಷನ್ 302ಕ್ಕೆ ಬದಲಾಗಿ ಸೆಕ್ಷನ್ 304ರ ಅನ್ವಯ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಒಟ್ಟು 9 ಮಂದಿಯ ವಿರುದ್ಧ ಸೆಕ್ಷನ್ 304ರಂತೆ ಮೊಕದ್ದಮೆ ದಾಖಲಾಗಿದ್ದು, ಸಿದ್ದಾಪುರದ ಅರೆಕಾಡು ನೇತಾಜಿ ನಗರದ ಟಿ.ಎ. ಖಾಲಿದ್, ನೆಲ್ಯಹುದಿಕೇರಿಯ ಜೀಪ್ ಚಾಲಕ ವಿ.ಎ. ಅಬ್ದುಲ್ ಗಫೂರ್, ವಾಲ್ನೂರು ತ್ಯಾಗತ್ತೂರಿನ ಕೆ.ವೈ. ರಝಾಕ್ ಹಾಗೂ ನಲ್ವತ್ತೆಕರೆಯ ಸಿ.ಟಿ. ಫೈಝಲ್ ಈಗಾಗಲೆ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇವರುಗಳಲ್ಲದೆ ನಲ್ವತ್ತೆಕರೆಯ ಬಿ.ಎಸ್. ಅಕ್ಬರ್ ಅಲಿ, ಬಿ.ಎ. ಸಂಶೀರ್, ತ್ಯಾಗತ್ತೂರಿನ ಪಿ.ಎಂ. ಅಶ್ರಫ್, ಪೊನ್ನತ್ ಮೊಟ್ಟೆಯ ಸೈಫುದ್ದೀನ್ ಹಾಗೂ ಗುಹ್ಯದ ಸಾಹುಲ್ ಹಮೀದ್ ಎಂಬವರು ಪ್ರಕರಣದಲ್ಲಿ ಭಾಗಿಯಾಗಿದ್ದು, ಈ ಐವರು ತಲೆ ಮರೆಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ 9 ಮಂದಿಯ ಹೆಸರನ್ನು ಚಾರ್ಜ್ ಶೀಟ್‌ನಿಂದ ಕೈಬಿಡಲಾಗಿದೆ. ಇವರು ಘಟನೆ ಸಂದರ್ಭ ಕೃತ್ಯ ನಡೆದ ಸ್ಥಳದಲ್ಲಿ ಹಾಜರಿರಲಿಲ್ಲ ಮತ್ತು ಆರೋಪ ದೃಢ ಪಡದ ಹಿನ್ನೆಲೆಯಲ್ಲಿ ಹೆಸರನ್ನು ಕೈಬಿಡಲಾಗಿದೆ. ಅರೆಕಾಡು ನೇತಾಜಿ ನಗರದ ಅಮೀರ್ ಸುಹೈಲ್, ತೊಂಬತ್ತುಮನೆ ಪೈಸಾರಿಯ ಕೆ.ಕೆ. ಲತೀಫ್, ಅಬೂಬಕರ್, ಅಮೀನ್ ಮೊಹ್ಸಿನ್, ಮನ್ಸೂರ್, ಖಲೀಲ್, ಹಫೀಝ್ ಸಾಗರ್, ಸನಾವುಲ್ಲ ಹಾಗೂ ಫಝಲುಲ್ಲಾ ಹೆಸರುಗಳನ್ನು ದೋಷಾರೋಪಣಾ ಪಟ್ಟಿಯಿಂದ ಕೈ ಬಿಡಲಾಗಿದೆ.
 ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು, ಪೊಲೀಸರು ಹಾಗೂ ಸಾರ್ವಜನಿಕರು ಸೇರಿದಂತೆ 50 ಮಂದಿಯನ್ನು ಸಾಕ್ಷಿಗಳನ್ನಾಗಿ ಪರಿಗಣಿಸಲಾಗಿದೆ. ಸುಮಾರು 30 ದಾಖಲೆಗಳನ್ನು ದೋಷಾರೋಪಣಾ ಪಟ್ಟಿಯೊಂದಿಗೆ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಆರೋಪಿಗಳಿಗೆ ಕೈಕೋಳ: ಎಸ್ಪಿ, ಡಿವೈಎಸ್ಪಿಗೆ ನೋಟಿಸ್
ಟಿಪ್ಪು ಜಯಂತಿಯಂದು ನಡೆದ ಗಲಭೆ ಸಂದರ್ಭ ಸಾವಿಗೀಡಾದ ಸಾಹುಲ್ ಹಮೀದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಮೂವರು ಆರೋಪಿಗಳನ್ನು ಕೈಕೋಳ ತೊಡಿಸಿ ನ್ಯಾಯಾಲಯಕ್ಕೆ ಕರೆ ತಂದ ಹಿನ್ನೆಲೆ, ಈ ಕುರಿತು ವಿವರಣೆ ನೀಡುವಂತೆ ನ್ಯಾಯಾಲಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಡಿವೈಎಸ್ಪಿಗೆ ನೋಟಿಸ್ ನೀಡಿದೆ.
ಆರೋಪಿಗಳಾದ ಕವನ್, ಭೀಷ್ಮ ಹಾಗೂ ರಮೇಶ್ ನಾಯಕ್‌ನನ್ನು ಕೈಕೋಳ ತೊಡಿಸಿ ಜೈಲಿನಿಂದ ಕರೆ ತಂದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಜಿಲ್ಲಾ ಅಭಿಯೋಜಕರು ಪ್ರಮುಖರು ನ್ಯಾಯಾಧೀಶರಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಪರಿಶೀಲಿಸಿದ ನ್ಯಾಯಾಧೀಶರು ವಿವರಣೆ ಕೋರಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆ ಫೆ. 24 ರಂದು ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X