ಪತ್ರಿಕೋದ್ಯಮ ವೃತ್ತಿ ಕೌಶಲ ತರಬೇತಿ: ಆಯ್ದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಬೆಂಗಳೂರು, ಫೆ.11: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಫೆ.22ರಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಪತ್ರಿಕೋದ್ಯಮ ಪದವೀಧರರಿಗೆ 7 ದಿನಗಳ ವೃತ್ತಿ ಕೌಶಲ್ಯ ತರಬೇತಿಯನ್ನು ಹಮ್ಮಿಕೊಂಡಿದೆ.
ತರಬೇತಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಆಯ್ಕೆ ಪಟ್ಟಿಯನ್ನು ಇಲಾಖೆಯ ವೆಬ್‌ಸೈಟ್ www.karnatakavarthe.org ನಲ್ಲಿ ಪ್ರಕಟಿಸಲಾಗಿದೆ. ಆಯ್ಕೆಯಾಗಿರುವ ಅಭ್ಯರ್ಥಿಗಳು ತರಬೇತಿಯ ಮೊದಲ ದಿನ ತಮ್ಮ ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಅರ್ಜಿಯೊಂದಿಗೆ ಸಲ್ಲಿಸಿರುವ ದಾಖಲೆಗಳ ಮೂಲ ಪ್ರತಿ ಹಾಗೂ ಒಂದು ಸೆಟ್ ನಕಲು ಪ್ರತಿಯನ್ನು ಕಡ್ಡಾಯವಾಗಿ ತರಬೇಕು. ಅಭ್ಯರ್ಥಿಗಳು ದಾಖಲೆ ಪರಿಶೀಲನೆಗೆ ಗೈರು ಹಾಜರಾದಲ್ಲಿ ಅಥವಾ ದಾಖಲೆಗಳಲ್ಲಿ ಲೋಪ ಕಂಡುಬಂದಲ್ಲಿ ಮೆರಿಟ್ ಆಧಾರದ ಮೇಲೆ ಮುಂದಿನ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ, ಸಂಪನ್ಮೂಲ ಕಿಟ್, ಲ್ಯಾಪ್ ಟಾಪ್ ಹಾಗೂ ಡಿಜಿಟಲ್ ಕ್ಯಾಮೆರಾ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ ಇಲಾಖೆಯ ದೂ. 080 22028037ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.





