ಪ್ರೆಸ್ ಕ್ಲಬ್ ಘಟನೆ: ಎಸ್‌ಎಆರ್ ಗೀಲಾನಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು
ಹೊಸದಿಲ್ಲಿ,ಫೆ.12: ಇಲ್ಲಿಯ ಪ್ರೆಸ್ ಕ್ಲಬ್ ಆಫ್ ಇಂಡಿಯಾದಲ್ಲಿ ನಡೆದಿದ್ದ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ದಿಲ್ಲಿ ವಿವಿಯ ಮಾಜಿ ಉಪನ್ಯಾಸಕ ಎಸ್‌ಎಆರ್ ಗೀಲಾನಿ ವಿರುದ್ಧ ದೇಶದ್ರೋಹ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುಂಪೊಂದು ಸಂಸತ್ ದಾಳಿಯ ರೂವಾರಿ ಅಫ್ಝಲ್ ಗುರು ಪರ ಮತ್ತು ರಾಷ್ಟ್ರವಿರೋಧಿ ಘೋಷಣೆಗಳನ್ನು ಕೂಗಿತ್ತು.
ಸಂಸತ್ ದಾಳಿ ಪ್ರಕರಣದಲ್ಲಿ ಬಿಡುಗಡೆಗೊಂಡಿರುವ ಗೀಲಾನಿ ಮತ್ತು ಇತರ ಅಪರಿಚಿತ ವ್ಯಕ್ತಿಗಳ ವಿರುದ್ಧ ದೇಶದ್ರೋಹ ಪ್ರಕರಣವನ್ನು ಸ್ವಯಂಪ್ರೇರಿತವಾಗಿ ದಾಖಲಿಸಿಕೊಳ್ಳಲಾಗಿದೆ ಎಂದು ಡಿಸಿಪಿ(ಹೊಸದಿಲ್ಲಿ) ಜತಿನ್ ನರ್ವಾಲ್ ಅವರು ಶುಕ್ರವಾರ ಇಲ್ಲಿ ತಿಳಿಸಿದರು. ಕಾರ್ಯಕ್ರಮದ ಮುಖ್ಯ ಸಂಘಟಕ ಎಂಬ ನೆಲೆಯಲ್ಲಿ ಗೀಲಾನಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದೂ ಅವರು ತಿಳಿಸಿದರು.
Next Story





