ಎಸೆಸೆಲ್ಸಿ ಮಕ್ಕಳಿಗೆ ಪರೀಕ್ಷಾ ತರಬೇತಿ ಕಾರ್ಯಕ್ರಮ

ಪುತ್ತೂರು, ಫೆ.12: ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡಮಿ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಇವುಗಳ ಜಂಟಿ ಆಶ್ರಯದಲ್ಲಿ ‘ಎಸೆಸೆಲ್ಸಿ ಮಕ್ಕಳೇ ಪರೀಕ್ಷೆಗೆ ಸಿದ್ಧ್ದರಾಗಿ’ ತರಬೇತಿ ಕಾರ್ಯಕ್ರಮ ಶುಕ್ರವಾರ ಪುತ್ತೂರಿನ ಡಾ. ಶಿವರಾಮ ಕಾರಂತ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಬಾಲವಿಕಾಸ ಅಕಾಡಮಿ ಅಧ್ಯಕ್ಷೆ ದಾಕ್ಷಾಯಿಣಿ ಬಸವರಾಜ್ ಉದ್ಘಾಟಿಸಿದರು. ನಗರ ಸಭೆಯ ಅಧ್ಯಕ್ಷ ಜೀವಂಧರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ನಗರ ಸಭಾ ಪೌರಾಯುಕ್ತೆ ರೇಖಾ ಜೆ.ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ, ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಹಾಂ, ಡಾ.ಶಿವರಾಮ ಕಾರಂತ ಪ್ರೌಢಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಜಲಜಾಕ್ಷಿ ಕೆ.ಎಂ. ಉಪಸ್ಥಿತರಿದ್ದರು. ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಂತಿ ಟಿ. ಹೆಗಡೆ ಸ್ವಾಗತಿಸಿದರು. ಅಂಗನವಾಡಿ ಮೇಲ್ವಿಚಾರಕಿ ಜಲಜಾಕ್ಷಿ ವಂದಿಸಿದರು. ಶಿಕ್ಷಣ ಸಂಯೋಜಕ ಲೋಕಾನಂದ ಕಾರ್ಯಕ್ರಮ ನಿರೂಪಿಸಿದರು.





