ಉ.ಪ್ರ.ದಲ್ಲಿ ಪತ್ರಕರ್ತನ ಹತ್ಯೆ

ಸುಲ್ತಾನ್‌ಪುರ, ಫೆ.13: ಇಲ್ಲಿಯ ಗೋಸಾಯಿ ಗಂಜ್ ಪ್ರದೇಶದಲ್ಲಿ ಶನಿವಾರ ಅಪರಿಚಿತ ದುಷ್ಕರ್ಮಿಗಳು ಪತ್ರಕರ್ತರೋರ್ವರನ್ನು ಗುಂಡಿಟ್ಟು ಹತ್ಯೆಗೈದಿದ್ದಾರೆ.
ಕರುಣ ಮಿಶ್ರಾ(28) ತನ್ನ ಬೈಕಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಟ್ಕಾ ಬಝಾರ್ ಬಳಿ ಮೂವರು ದುಷ್ಕರ್ಮಿಗಳು ಅವರ ಮೇಲೆ ಗುಂಡಿನ ಮಳೆಗರೆದಿದ್ದು, ತೀವ್ರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಕೊನೆಯುಸಿರೆಳೆದರು.
ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
Next Story





