ಸುನಂದಾ ಪುಷ್ಕರ‍್ ಸಾವು ಪ್ರಕರಣ; ಮಾಜಿ ಸಚಿವ ತರೂರ್ ವಿಚಾರಣೆ

ದಿಲ್ಲಿ, ಫೆ.14: ಸುನಂದಾ ಪುಷ್ಕರ‍್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಅವರ ಪತಿ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರನ್ನು ದಿಲ್ಲಿ ಪೊಲೀಸರು ಶನಿವಾರ ಐದು ಘಂಟೆಗಳ ಕಾಲ ವಿಚಾರಣೆಗೊಳಪಡಿಸಿದ್ದಾರೆ.ಸುನಂದಾ ಪುಷ್ಕರ್ ಅವರು ವಿಷ ಸೇವಿಸಿ ಸಾವಿಗೀಡಾಗಿದ್ದಾರೆ ದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಡಿ.29ರಂದು ನೀಡಿರುವ ಬಳಿಕ ಶಶಿ ತರೂರ್‌ನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.
ಜನವರಿ 17, 2014ರಂದು ಹೋಟೆಲ್ ಕೊಠಡಿಯಲ್ಲಿ ಸುನಂದಾ ಪುಷ್ಕರ್ ಶವ ಪತ್ತೆಯಾಗಿತ್ತು. ಆಗ ಶಶಿ ತರೂರ್ ಅವರು ಮನಮೋಹನ್ ಸಿಂಗ್ ಅವರ ಯುಪಿಎ ಸರ್ಕಾರದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರಾಗಿದ್ದರು.
Next Story





