ಮುಂಡಾಜೆಯಲ್ಲಿ ರಸ್ತೆ ದುರಸ್ತಿಗೆ ಆಗ್ರಹಿಸಿ ಧರಣಿ

ಬೆಳ್ತಂಗಡಿ, ಫೆ.14: ಸಂಪೂರ್ಣ ಹದಗೆಟ್ಟಿರುವ ಮುಂಡಾಜೆ-ಧರ್ಮಸ್ಥಳ ರಸ್ತೆಯನ್ನು ಕೂಡಲೇ ದುರಸ್ತಿಗೊಳಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ರವಿವಾರ ಧರಣಿ ಜಾಥಾ ನಡೆಸಿದರು. ಬಳಿಕ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸ್ಥಳೀಯ ಶಾಸಕ ಕೆ.ವಸಂತ ಬಂಗೇರ ಅವರು ಧರಣಿನಿರತರೊಂದಿಗೆ ಮಾತುಕತೆ ನಡೆಸಿದರು. ಚುನಾವಣೆಯ ಬಳಿಕ ರಸ್ತೆ ದುರಸ್ತಿಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.


Next Story





