ವಿಟ್ಲ : ಅಕ್ರಮ ಜಾನುವಾರು ಸಾಗಾಟದ ಪಿಕಪ್ ವಾಹನವೊಂದು ಚಾಲಕ ನಿಯಂತ್ರಣ ಮೀರಿ ರಸ್ತೆ ಬದಿಯ ಟೆಲಿಫೋನ್ ಕಂಬಕ್ಕೆ ಡಿಕ್ಕಿ

ವಿಟ್ಲ : ಅಕ್ರಮವಾಗಿ ಜಾನುವಾರು ಸಾಗಾಟದ ಪಿಕಪ್ ವಾಹನವೊಂದು ಚಾಲಕ ನಿಯಂತ್ರಣ ಮೀರಿ ರಸ್ತೆ ಬದಿಯ ಟೆಲಿಫೋನ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಶ್ರೀ ಕಲ್ಲುರ್ಟಿ ಕಲ್ಕುಡ ದೈವಸ್ಥಾನದ ಬಳಿಕ ಶನಿವಾರ ರಾತ್ರಿ ನಡೆದಿದೆ.
ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ಶಂಕಿಸಲಾಗಿರುವ ಕೆಎ 18 ಎ 9163 ಮಹಿಷ ಮರ್ದಿನಿ ಹೆಸರಿನ ಪಿಕಪ್ ವಾಹನವು ಚಾಲಕನ ನಿಯಂತ್ರಣ ಮೀರಿ ಈ ಅವಘಡ ಸಂಭವಿಸಿದೆ. ವಾಹನದಲ್ಲಿದ್ದ ಆರೋಪಿಗಳು ಮಾತ್ರ ಸ್ಥಳದಿಂದ ಪರಾರಿಯಾಗಿದ್ದಾರೆ. ಪಿಕಪ್ ವಾಹನದಲ್ಲಿ ನಾಲ್ಕೈದು ದನಗಳು ಇತ್ತೆಂದು ಅಂದಾಜಿಸಲಾಗಿದ್ದು, ಬೆಳಗ್ಗಿನ ಜಾವ ಪೊಲೀಸರು ಸ್ಥಳಕ್ಕೆ ತೆರಳುವ ವೇಳೆ ಎರಡು ದನಗಳು ಮಾತ್ರ ಇದ್ದವು. ಉಳಿದ ದನಗಳನ್ನು ವಾಹನದಲ್ಲಿದ್ದವರು ಬೇರೆ ಸಣ್ಣ ವಾಹನದಲ್ಲಿ ಸಾಗಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ವಾಹನ ವಶಕ್ಕೆ ಪಡೆದುಕೊಂಡಿರುವ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳ ಶೋಧ ಕೈಗೊಂಡಿದ್ದಾರೆ.
Next Story





