ಕುರ್ನಾಡು ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಯ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ವಾಹನದ ಮೂಲಕ ಪ್ರಚಾರ

ಕೊಣಾಜೆ: ಕುರ್ನಾಡು ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಯ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ವಾಹನದ ಮೂಲಕ ಪ್ರಚಾರಕ್ಕೆ ಬಂಟ್ವಾಳ ಬೂಡಾ ಅಧ್ಯಕ್ಷರಾದ ಪಿಯೂಸ್ ರಾಡ್ರಿಗಸ್ ಅವರು ಭಾನುವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಅಭ್ಯರ್ಥಿ ಮಮತಾ ಡಿ.ಎಸ್.ಗಟ್ಟಿ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ, ಇರಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಮುಡಿಪು ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷರಾದ ನಾಸೀರ್ ನಡುಪದವು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
Next Story





