ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಲಿಫ್ಟ್ ಸೌಲಭ್ಯ ಕಲ್ಪಿಸಿ
ಬೆಂಗಳೂರಿನ ಕುಮಾರ ಪಾರ್ಕ್ ರಸ್ತೆಯಲ್ಲಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಭೂ ಸ್ವಾಧೀನ ಅಧಿಕಾರಿಗಳಿರುವ ಎರಡು ಅಂತಸ್ತಿನ ಕಟ್ಟಡದಲ್ಲಿ ಬಿಡಿಎ ಅಧ್ಯಕ್ಷರ ಕಚೇರಿಯೂ ಇದೆ. ಇಲ್ಲಿ ಸಾರ್ವಜನಿಕರು ತಮ್ಮ ಅನೇಕ ಸಮಸ್ಯೆಗಳಿಗೆ ಪದೇ ಪದೇ ಬರುತ್ತಾರೆ. ಎರಡು ಅಂತಸ್ತಿನ ಈ ಕಟ್ಟಡದಲ್ಲಿ ವಯಸ್ಸಾದ ನಾಗರಿಕರಿಗೆ ಮತ್ತು ಅಂಗವಿಕಲರಿಗೆ ಮೆಟ್ಟಿಲು ಹತ್ತುವುದು ತುಂಬಾ ಕಷ್ಟವಾಗಿರುತ್ತದೆ. ಅನೇಕ ನಾಗರಿಕರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವವರು. ಈ ಕಟ್ಟಡದಲ್ಲಿ ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳಲು ಬಂದು ಹೋಗುವುದು ದೊಡ್ಡ ಸಮಸ್ಯೆಯಾಗಿದೆ. ಈ ನಿಟ್ಟಿನಲ್ಲಿ ಬಿಡಿಎ ಅಭಿಯಂತರ ಸದಸ್ಯರು ಕೂಡಲೇ ಗಮನ ಹರಿಸಿ ಈ ಕಟ್ಟಡಕ್ಕೂ ಬೇರೆ ಕಟ್ಟಡಗಳಲ್ಲಿರುವಂತೆ ಲಿಫ್ಟ್ ಸೌಲಭ್ಯವನ್ನು ಕಲ್ಪಿಸಿಕೊಡಬೇಕಾಗಿ ಕೋರುತ್ತೇನೆ.
Next Story





