Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಳ್ಯ: ಸಂಸದರ ಟೀಕೆಗೆ ರಮಾನಾಥ ರೈ...

ಸುಳ್ಯ: ಸಂಸದರ ಟೀಕೆಗೆ ರಮಾನಾಥ ರೈ ತಿರುಗೇಟು

ಕೋಲ, ನೇಮಗಳಿಗೆ ಹೋಗುವುದನ್ನು ತಡೆಯಲು ನಳಿನ್‌ಗೆ ಸಾಧ್ಯವಿಲ್ಲ

ವಾರ್ತಾಭಾರತಿವಾರ್ತಾಭಾರತಿ16 Feb 2016 7:05 PM IST
share

ನೇಮ, ಕೋಲಗಳಿಗೆ ನಿನ್ನೆಯೂ ಹೋಗಿದ್ದೇನೆ. ಇವತ್ತು ಹೋಗುತ್ತೇನೆ, ನಾಳೆಯೂ ಹೋಗುತ್ತೇನೆ. ಇದನ್ನು ನಿಲ್ಲಿಸಲು ಕಟೀಲ್‌ರಿಂದ ಸಾಧ್ಯ ಇಲ್ಲ.

  ಹೀಗೆಂದು ಖಡಕ್ ಆಗಿ ಹೇಳಿದ್ದು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ. ಸುಳ್ಯದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, ನಾವು ಕೋಲ ನೇಮಗಳಿಗೆ ಹೋಗುವ ಬಗ್ಗೆ ಸಂಸದ ನಳಿನ್‌ಕುಮಾರ್ ಕಟೀಲ್ ಟೀಕಿಸಿದ್ದಾರೆ. ನಮ್ಮನ್ನು ಎಲ್ಲ ಜಾತಿ ಧರ್ಮದವರು ಪ್ರೀತಿಯಿಂದ ಎಲ್ಲ ಕಾರ್ಯಕ್ರಮಗಳಿಗೆ ಕರೆಯುತ್ತಾರೆ. ನಾವೂ ಹೋಗುತ್ತೇವೆ. ಯಾಕೆಂದರೆ ಅದು ನಮ್ಮ ಸಂಸ್ಕೃತಿ. ಇದನ್ನು ಟೀಕಿಸುವುದು ಸರಿಯಲ್ಲ. ಆದರೆ ಅವರು ರಾತ್ರಿ ಎಲ್ಲಿ ಹೋಗುತ್ತಾರೆ, ರಾತ್ರಿಯ ವ್ಯವಹಾರಗಳೇನು? ಎನ್ನುವುದು ಸಾರ್ವಜನಿಕವಾಗಿ ಗೊತ್ತಾಗಿದೆ, ಪತ್ರಿಕೆಗಳಲ್ಲೂ ಬಂದಿದೆ. ನಾವು ಇನ್ನೊಬ್ಬರ ಖಾಸಗಿ ವಿಷಯವನ್ನು ಮಾತನಾಡಲು ಬಯಸುವುದಿಲ್ಲ. ಸಾರ್ವಜನಿಕ ಬದುಕಿನಲ್ಲಿ ಹೇಗಿರುತ್ತೇವೆ ಎನ್ನುವುದು ಮುಖ್ಯ. ಕೇವಲ ಭಾಷಣ ಮಾಡಿ ನಂ.1 ಸಂಸದ ಎಂದು ಬೋರ್ಡ್ ಹಾಕಿಕೊಂಡರೆ ಅಭಿವೃದ್ಧಿ ಸಾಧ್ಯವಿಲ್ಲ ಎಂದವರು ಹೇಳಿದರು. ಅಂಗಾರರಿಗೂ ಟೀಕೆ:
ಸುಳ್ಯದಲ್ಲಿ 110 ಕೆವಿ ಸಬ್‌ಸ್ಟೇಶನ್ ಕುರಿತಂತೆ ಅರಣ್ಯ ಸಚಿವರ ಮೇಲೆ ಆರೋಪ ಮಾಡುತ್ತಿರುವ ಶಾಸಕ ಅಂಗಾರರಿಗೆ ಅರಣ್ಯ ಕಾನೂನಿನ ಕುರಿತಂತೆ ತಿಳುವಳಿಕೆ ಇಲ್ಲ. ಹೀಗಾಗಿ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಬಿ.ರಮಾನಾಥ ರೈ ಟೀಕಿಸಿದರು. ಅರಣ್ಯ ಜಾಗಕ್ಕೆ ತನ್ನದೇ ಆದ ಕಾನೂನಿದೆ. ಅದರಂತೆ ಮುಂದುವರಿಯಬೇಕಾಗಿದೆ. ಅಂಗಾರರ ಮನೆ ಜಾಗದಲ್ಲಿ ಮಾಡಿದಂತೆ ಅರಣ್ಯ ಪ್ರದೇಶದಲ್ಲಿ ಮಾಡಲಾಗುವುದಿಲ್ಲ. ಅವರಿಗೆ ಈ ತಿಳುವಳಿಕೆ ಇಲ್ಲ ಎಂದು ಹೇಳಿದರು. ಗ್ರಾಮ ವಿಕಾಸ ಯೋಜನೆಗೆ ಗ್ರಾಮಗಳ ಬದಲಾವಣೆ ಕುರಿತಂತೆ ಅಂಗಾರರು ತನ್ನ ಮೇಲೆ ಮಂಡಿಸಿದ ಹಕ್ಕು ಚ್ಯುತಿಯನ್ನು ಪ್ರಸ್ತಾಪಿಸಿದ ಸಚಿವರು ಸಚಿವರ ಅನುಮೋದನೆಯೊಂದಿಗೆ ಎಂಬ ನಿಯಮವನ್ನು ಜಾರಿಗೆ ತಂದದ್ದೇ ಬಿಜೆಪಿಯವರು. ಹೀಗಾಗಿ ಅವರ ವಿರುದ್ದವೇ ಅವರು ಹಕ್ಕುಚ್ಯುತಿ ಮಂಡಿಸಲಿ. ಕೃಷ್ಣ ಪಾಲೇಮಾರ್ ಉಸ್ತುವಾರಿ ಸಚಿವರಾಗಿದ್ದಾಗ ಬಂಟ್ವಾಳದ ಕೆಲವು ಯೋಜನೆಗಳಿಗೆ ಹೀಗೆಯೇ ಮಾಡಿದ್ದರು . ಸಿ.ಟಿ. ರವಿ ಕೂಡಾ ಉಸ್ತುವಾರಿ ಸಚಿವರಾಗಿದ್ದಾಗ ಈ ರೀತಿ ಮಾಡಿದ್ದರು. ಆಗೆಲ್ಲಾ ನಾನು ಹಕ್ಕುಚ್ಯುತಿ ಮಂಡಿಸಲು ಹೋಗಿಲ್ಲ. ಸಂಬಂಧಪಟ್ಟ ಸಚಿವರೊಂದಿಗೆ ಮಾತನಾಡಿ, ವಿಷಯ ತಿಳಿಸಿದ್ದೇನೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X