Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜೆಎನ್‌ಯು ವಿದ್ಯಾರ್ಥಿಗಳ ವಿರುದ್ಧ...

ಜೆಎನ್‌ಯು ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಮೊಕದ್ದಮೆ - ಹಾರ್ವರ್ಡ್, ಕ್ಯಾಂಬ್ರಿಜ್ ಶಿಕ್ಷಕರ ಖಂಡನೆ

ವಾರ್ತಾಭಾರತಿವಾರ್ತಾಭಾರತಿ16 Feb 2016 10:52 PM IST
share
ಜೆಎನ್‌ಯು ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಮೊಕದ್ದಮೆ - ಹಾರ್ವರ್ಡ್, ಕ್ಯಾಂಬ್ರಿಜ್ ಶಿಕ್ಷಕರ ಖಂಡನೆ

ಲಂಡನ್, ಫೆ. 16: ಕೊಲಂಬಿಯ, ಯೇಲ್, ಹಾರ್ವರ್ಡ್ ಮತ್ತು ಕ್ಯಾಂಬ್ರಿಜ್ ಮುಂತಾದ ಅಂತಾರಾಷ್ಟ್ರೀಯ ವಿಶ್ವವಿದ್ಯಾನಿಲಯಗಳ 455 ಶಿಕ್ಷಣ ತಜ್ಞರು ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯ (ಜೆಎನ್‌ಯು) ದ ವಿದ್ಯಾರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಜಾಗತಿಕ ವಿಶ್ವವಿದ್ಯಾನಿಲಯಗಳ ಶಿಕ್ಷಣ ತಜ್ಞರು ಸಂಯುಕ್ತ ಹೇಳಿಕೆಯೊಂದನ್ನು ಹೊರಡಿಸಿದ್ದಾರೆ.

‘‘ಟೀಕಾ ಮನೋಭಾವ, ಪ್ರಜಾಸತ್ತಾತ್ಮಕ ಭಿನ್ನಾಭಿಪ್ರಾಯ, ವಿದ್ಯಾರ್ಥಿ ಚಳವಳಿ ಹಾಗೂ ವೈವಿಧ್ಯ ರಾಜಕೀಯ ವಿಚಾರಧಾರೆಗಳನ್ನು ಸ್ವೀಕರಿಸುವ ಪರಂಪರೆಯೊಂದನ್ನು ಜೆಎನ್‌ಯು ಹೊಂದಿದೆ. ಈ ಪರಂಪರೆಯನ್ನು ನಾಶಪಡಿಸುವ ಉದ್ದೇಶವನ್ನು ಹಾಲಿ ವ್ಯವಸ್ಥೆ ಹೊಂದಿದೆ. ಆದರೆ, ಇದು ಒಂದು ಭಾರತದ ಸಮಸ್ಯೆ ಮಾತ್ರವಲ್ಲ ಎನ್ನುವುದೂ ನಮಗೆ ತಿಳಿದಿದೆ’’ ಎಂದು ಹೇಳಿಕೆ ತಿಳಿಸಿದೆ.

‘‘ಟೀಕೆ, ಭಿನ್ನಮತ ಮತ್ತು ವಿಶ್ವವಿದ್ಯಾನಿಲಯಗಳ ಮೇಲಿನ ದಾಳಿಗಳು ಜಗತ್ತಿನಾದ್ಯಂತ ನಡೆಯುತ್ತಲೇ ಇವೆ ಹಾಗೂ ಅವುಗಳ ವಿರುದ್ಧ ಪ್ರತಿಭಟನೆಗಳನ್ನೂ ನಡೆಸಲಾಗುತ್ತಿದೆ. ಭಾರತ ಮತ್ತು ಜಾಗತಿಕ ವಿಶ್ವವಿದ್ಯಾನಿಲಯಗಳು ರೂಪಿಸಿದ ಟೀಕೆ ಮತ್ತು ಅಭಿವ್ಯಕ್ತಿ ಮನೋಭಾವಕ್ಕೂ ಮುಕ್ತ, ಸಹಿಷ್ಣು ಮತ್ತು ಪ್ರಜಾಸತ್ತಾತ್ಮಕ ಸಮಾಜಕ್ಕೂ ಬಿಡಿಸಲಾಗದ ನಂಟಿದೆ’’ ಎಂದಿದೆ.

‘‘ಜಗತ್ತಿನಾದ್ಯಂತದ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಸಂಶೋಧಕರಾದ ನಾವು ಜೆಎನ್‌ಯುನಲ್ಲಿ ಅನಾವರಣಗೊಳ್ಳುತ್ತಿರುವ ವಿದ್ಯಮಾನಗಳನ್ನು ಅತ್ಯಂತ ಕಳವಳದಿಂದ ಗಮನಿಸುತ್ತಿದ್ದೇವೆ ಹಾಗೂ ನಮ್ಮ ಸಹೋದ್ಯೋಗಿಗಳು (ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ಬೋಧಕ ವರ್ಗ) ಅಕ್ರಮ ಬಂಧನ ಮತ್ತು ವಿದ್ಯಾರ್ಥಿಗಳ ನಿರಂಕುಶ ಅಮಾನತುಗಳ ವಿರುದ್ಧ ಪ್ರತಿಭಟಿಸುತ್ತಿರುವಾಗ ನಾವು ಮೂಕಪ್ರೇಕ್ಷಕರಾಗಿ ಕುಳಿತುಕೊಳ್ಳುವುದಿಲ್ಲ’’.

ಸಂಯುಕ್ತ ಹೇಳಿಕೆಗೆ ಸಹಿ ಹಾಕಿದವರಲ್ಲಿ ಕೆಲವರು ಜೆಎನ್‌ಯುನ ಹಳೆ ವಿದ್ಯಾರ್ಥಿಗಳಾಗಿದ್ದಾರೆ.

 2001ರ ಸಂಸತ್ ದಾಳಿ ಪ್ರಕರಣದ ದೋಷಿ ಅಫ್ಝಲ್ ಗುರುವನ್ನು ಗಲ್ಲಿಗೇರಿಸಿದುದನ್ನು ವಿರೋಧಿಸಿ ಜೆಎನ್‌ಯುನಲ್ಲಿ ಏರ್ಪಡಿಸಲಾದ ಪ್ರತಿಭಟನಾ ಸಭೆಯೊಂದಕ್ಕೆ ಸಂಬಂಧಿಸಿ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಾಂಞಯ್ಯ ಕುಮಾರ್‌ರನ್ನು ಕಳೆದ ವಾರ ದೆಶದ್ರೋಹ ಮತ್ತು ಕ್ರಿಮಿನಲ್ ಪಿತೂರಿ ಆರೋಪದಲ್ಲಿ ಬಂಧಿಸಲಾಗಿತ್ತು. ಆ ಸಭೆಯಲ್ಲಿ ಭಾರತ ವಿರೋಧಿ ಘೋಷಣೆಗಳನ್ನು ಕೂಗಲಾಗಿತ್ತು ಎನ್ನಲಾಗಿದೆ.

ಅವರ ಬಂಧನವನ್ನು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತೀವ್ರವಾಗಿ ವಿರೋಧಿಸಿದ್ದಾರೆ ಹಾಗೂ ಬಿಜೆಪಿಯೇತರ ಪ್ರತಿಪಕ್ಷಗಳೂ ಈ ಬಂಧನವನ್ನು ಖಂಡಿಸಿವೆ.

ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾನಿಲಯದ ಶಿಕ್ಷಕರು ಬೆಂಬಲ ವ್ಯಕ್ತಪಡಿಸಿದ್ದಾರೆ ಹಾಗೂ ವಿಶ್ವವಿದ್ಯಾನಿಲಯದ ಆವರಣದಲ್ಲಿ ಪೊಲೀಸ್ ಕಾರ್ಯಾಚರಣೆಗೆ ಅವಕಾಶ ನೀಡಿದ ವಿಶ್ವವಿದ್ಯಾನಿಲಯ ಆಡಳಿತವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X