2018ರ ಚುನಾವಣೆ ಮೇಲೆ ಪರಿಣಾಮ ಬೀರಲ್ಲ: ಎಚ್‌ಡಿಕೆ

ಬೆಂಗಳೂರು/ಮಂಡ್ಯ, ಫೆ.16: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ಮುಂದಿನ 2018ರ ಸಾರ್ವತ್ರಿಕ ಚುನಾವಣೆಯ ಮೇಲೆ ಯಾವುದೆ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಮಂಗಳವಾರ ಮದ್ದೂರಿನಲ್ಲಿ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಸರಕಾರ ಅವಧಿಯಲ್ಲಿ ರಾಜ್ಯದಲ್ಲಿ ಎಂಟು ಉಪ ಚುನಾವಣೆ ನಡೆದವು. ನಮ್ಮ ಪಕ್ಷಕ್ಕೆ ಭವಿಷ್ಯವೆ ಇಲ್ಲದಿದ್ದ ಗುಲ್ಬರ್ಗದಲ್ಲಿ ಒಂದು ಸ್ಥಾನವನ್ನು ಗೆದ್ದುಕೊಂಡು ಬರಲಾಗಿತ್ತು ಎಂದರು.
ಈ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ನಿಲ್ಲಿಸಲು ನನಗೆ ಆಸಕ್ತಿ ಇರಲಿಲ್ಲ. ಚುನಾವಣೆಗೆ ಖರ್ಚು ಆಗುವ ಹಣವನ್ನು ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ನೀಡಲು ಉದ್ದೇಶಿಸಿದ್ದೆ. ಆದರೆ, ಕಾರ್ಯಕರ್ತರ ಹಠದಿಂದಾಗಿ ಜೆಡಿಎಸ್ ವರಿಷ್ಠರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರು ಎಂದು ಅವರು ಹೇಳಿದರು.
Next Story





