Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು : ಈ ಬಾರಿ ಕುಂಭಮೇಳದಲ್ಲಿ...

ಮೈಸೂರು : ಈ ಬಾರಿ ಕುಂಭಮೇಳದಲ್ಲಿ ಗಂಗಾಪೂಜೆ : ಶ್ರೀ ಸೋಮನಾಥ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ17 Feb 2016 6:10 PM IST
share

   ಮೈಸೂರು,ಫೆ.17; ಮೈಸೂರು ಜಿಲ್ಲೆಯ ತಿ-ನರಸಿಪುರ ತಾಲ್ಲೂಕಿನ ಶ್ರೀ ಕ್ಷೇತ್ರ ತಿರುಮಕೂಡಲಿನಲ್ಲಿ ಫೆಬ್ರವರಿ 20 ರಿಂದ 22 ರವರೆಗೆ ಪುಣ್ಯಸ್ನಾನ, ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ 10 ನೇ ಕುಂಭಮೇಳ ನಡೆಯಲಿದೆ ಎಂದು ಮೈಸೂರಿನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಸ್ವಾಮೀಜಿ ಶ್ರೀ ಸೋಮನಾಥ ಸ್ವಾಮೀಜಿ ಅವರು ತಿಳಿಸಿದರು.
    ಅವರು ಮಂಗಳವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿ ವಾರಣಾಸಿಯಲ್ಲಿ ನಡೆಯುವ ಗಂಗಾಪೂಜೆ ಮಾದರಿಯಲ್ಲಿ ಫೆಬ್ರವರಿ 21 ರಂದು ಸಂಜೆ 7-30 ಗಂಟೆಗೆ ಕುಂಭಮೇಳದಲ್ಲಿ ಗಂಗಾಪೂಜೆಯೊಂದಿಗೆ ದೀಪಾರತಿ ನಡೆಯಲಿದೆ ಎಂದರು.
     
  
   ಮಹೋದಯ ಕಾಲದ ಮಹಾಮಾಘ ಪುಣ್ಯಸ್ನಾನಕ್ಕೆ ಮೀನಲಗ್ನ : ಬೆಳ್ಳಿಗೆ 9 ರಿಂದ 9-30 ರವರೆಗೆ, ವೃಷಭಲಗ್ನ: ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ ಪ್ರಶಕ್ತಕಾಲವಾಗಿರುತ್ತದೆ ಎಂದ ಅವರು ಮೂರು ದಿನಗಳ ಕಾಲ ನಡೆಯುವ ಧಾರ್ಮಿಕ ಕಾರ್ಯಕ್ರಮದ ಮಾಹಿತಿ ನೀಡಿದರು. ಧಾರ್ಮಿಕ ಕಾರ್ಯಕ್ರಮಗಳು  ಫೆಬ್ರವರಿ 20, 21 ಹಾಗೂ 22 ರಂದು ಪ್ರತಿದಿನ ಬೆಳಿಗ್ಗೆ ಸಂಕಲ್ಪ, ಹೋಮ ಅಗಸ್ತ್ಯೇಶ್ವರಸ್ವಾಮಿ ದೇವಸ್ಥಾನದಲ್ಲಿ ರುದ್ರಾಭಿಷೇಕ ಪೂಜೆ ನಡೆಯಲಿದೆ. ಫೆ. 20 ರಂದು ಬೆಳಿಗ್ಗೆ 9 ಗಂಟೆಗೆ ಶ್ರೀ ಅಗಸ್ತ್ಯೇಶ್ವರಸ್ವಾಮಿ ಸನ್ನಿಧಿಯಲ್ಲಿ ಅನುಜ್ಞೆ, ಪುಣ್ಯಾಹ, ಗಣಹೋಮ, ಪೂರ್ಣಾಹುತಿ, ಅಭಿಷೇಕ, ಮಹಾಮಂಗಳಾರತಿ ಮತ್ತು ಧ್ವಜಾರೋಹಣ ನಡೆಯಲಿದೆ. ಸಂಜೆ 5 ಗಂಟೆಗೆ ಧರ್ಮಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ.
     
     ಫೆ 21 ರಂದು ಬೆಳಿಗ್ಗೆ ಪುಣ್ಯಾಹ, ನವಗ್ರಹ ಹೋಮ, ಸುದರ್ಶನ ಹೋಮ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಧರ್ಮ ಸಭೆ, ಸಂಜೆ 4 ಗಂಟೆಗೆ ಮಹಾತ್ಮರ, ಸಂತರ ಹಾಗೂ ಮಹಾಮಂಡಲೇಶ್ವರರ ಸಂಗಮಕ್ಷೇತ್ರ ಪ್ರವೇಶ, ಗುಂಜಾನರಸಿಂಹಸ್ವಾಮಿ ದೇವಸ್ಥಾನದಿಂದ ತಿ.ನರಸಿಪುರ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ. ಸಂಜೆ 6 ಗಂಟೆಗೆ ಶ್ರೀ ರುದ್ರಹೋಮ, ಪೂರ್ಣಾಹುತಿ, ರಾತ್ರಿ 7 ಗಂಟೆಗೆ ಗಂಗಾಪೂಜೆ, ವಾರಣಾಸಿ ಮಾದರಿಯಲ್ಲಿ ದೀಪಾರತಿ ನಡೆಯಲಿದೆ.  ಫೆಬ್ರವರಿ 22 ರಂದು ಬೆಳಿಗ್ಗೆ ಚಂಡಿ ಹೋಮ, ಪೂರ್ಣಾಹುತಿ, ಕುಂಭೋದ್ವಾಸನ ಹಾಗೂ ಏಳು ಪವಿತ್ರ ನದಿಗಳಿಂದ ತಂದ ತೀರ್ಥಗಳನ್ನು ತ್ರಿವೇಣಿಸಂಗಮದಲ್ಲಿ ಸಂಯೋಜಿಸುವುದು, ಪುಣ್ಯಸ್ನಾನ ಹಾಗೂ ಧರ್ಮ ಸಭೆ ನಡೆಯಲಿದೆ ಎಂದರು.
  ಫೆ.20 ರಂದು ಸಂಜೆ 5 ಗಂಟೆಗೆ ಕಾರ್ಯಕ್ರಮವನ್ನು ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಹಾಗೂ ಲೋಕಸಭಾ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ. ವಿಧಾನಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಪುಟ್ಟರಂಗಶೆಟ್ಟಿ, ಹೆಚ್.ಪಿ.ಮಂಜುನಾಥ್, ವಿಧಾನಸಭಾ ಸದಸ್ಯ ಕೆ.ವೆಂಕಟೇಶ್, ಸಾ.ರಾ.ಮಹೇಶ್, ಚಿಕ್ಕಮಾದನಾಯಕ, ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜು, ಆರ್.ಧರ್ಮಸೇನ, ಗೋ.ಮಧುಸೂದನ್, ಮಾಜಿ ಶಾಸಕ ಕೆ.ಮಾದೇಗೌಡ, ಟಿ.ನರಸಿಪುರ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ ಲಿಂಗಣ್ಣ, ಉಪಾಧ್ಯಕ್ಷೆ ಶ್ರುತಿ ಮಣಿಕಂಠ ಅವರುಗಳು ಭಾಗವಹಿಸಲಿದ್ದಾರೆ.
  
     ಫೆ.21 ರಂದು ಬೆಳಿಗ್ಗೆ 11 ಗಂಟೆಗೆ ಧಾರ್ಮಿಕ ಸಭೆ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ವಿಧನಾ ಸಭಾ ಸದಸ್ಯ ಹೆಚ್.ಡಿ.ಕುಮಾರಸ್ವಾಮಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಲೋಕಸಭಾ ಸದಸ್ಯ ಪ್ರತಾಪಸಿಂಹ ಅವರು ಅಧ್ಯಕ್ಷತೆ ವಹಿಸುವರು. ವಿಧಾನಸಭಾ ಸದಸ್ಯ ಜಿ.ಟಿ.ದೇವೇಗೌಡ, ಎಸ್.ಜಯಣ್ಣ, ಆರ್.ನರೇಂದ್ರ, ಎಸ್.ಚಿಕ್ಕಮಾದು, ಶ್ರೀನಿವಾಸಯ್ಯ, ಮಾಜಿ ಶಾಸಕರಾದ ಸುನೀತಾ ವೀರಪ್ಪಗೌಡ, ಸಿ.ರಮೇಶ್, ಸಿದ್ಧರಾಜು ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶ್ರೀರಂಗಪಟ್ಟಣದ ನಿವೃತ್ತ ಪ್ರಾಧ್ಯಾಪಕ ಪ್ರೋ ಕರೀಮುದ್ದೀನ್, ಮಹಾರಾಜ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ: ಕೆ.ಅನಂತರಾಮು ಅವರು ಉಪನ್ಯಾಸ ನೀಡಲಿದ್ದಾರೆ. ಅಂದು ಸಂಜೆ 4 ಗಂಟೆಗೆ ಪುರಪ್ರವೇಶ, ಸಂಜೆ 6-30 ಕ್ಕೆ ಪೂರ್ಣಾಹುತಿ ಹಾಗೂ ಸಂಜೆ 7-30 ಕ್ಕೆ ಗಂಗಾ ಪೂಜೆ ನಡೆಯಲಿದೆ.  ಫೆ.22 ರಂದು ಬೆಳಿಗ್ಗೆ 10 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾರೋಪ ಭಾಷಣ ಮಾಡುವರು. ಲೋಕಪಯೋಗಿ ಸಚಿವ ಎಚ್.ಸಿ. ಮಹದೇವಪ್ಪ ಅವರು ಅಧ್ಯಕ್ಷತೆ ವಹಿಸುವರು. ಸಹಕಾರ ಮತ್ತು ಸಕ್ಕರೆ ಸಚಿವ ಹೆಚ್.ಎಸ್. ಮಹದೇವ ಪ್ರಸಾದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ, ಲೋಕಸಭಾ ಸದಸ್ಯ ಆರ್.ದ್ರುವನಾರಾಯಣ್, ಸಿ.ಎಸ್.ಪುಟ್ಟರಾಜು, ವಿಧಾನಸಭಾ ಸದಸ್ಯ ತನ್ವೀರ್ ಸೇಠ್, ಎಂ.ಕೆ.ಸೋಮಶೇಖರ್, ವಾಸು, ಮಾಜಿ ಶಾಸಕರಾದ ಕೃಷ್ಣಪ್ಪ, ಭಾರತಿಶಂಕರ್, ಎನ್ ಮಂಜುನಾಥ, ಹಾಗೂ ಡಿ.ಮಾದೇಗೌಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
       ಈ ಬಾರಿಯ ಕುಂಭಮೇಳದಲ್ಲಿ ಶ್ರೀ ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು, ಶ್ರೀ ಕೈಲಾಸಾಶ್ರಮದ ಶ್ರೀ ತಿರುಚ್ಚಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಜಯೇಂದ್ರಪುರಿ ಮಹಾಸ್ವಾಮಿಗಳು, ಶ್ರೀ ಅವಧೂತ ಧತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಮಹಾಸ್ವಾಮಿಗಳು, ತುಮಕೂರು ಶ್ರೀ ಸಿದ್ಧಗಂಗಾಮಠದ ಕಿರಿಯ ಶ್ರೀಗಳಾದ ಶ್ರೀ ಸಿದ್ಧಲಿಂಗಸ್ವಾಮಿಗಳು, ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಶ್ರೀ ಬ್ರಹ್ಮತಂತ್ರ ಸ್ವತಂತ್ರ ಪರಕಾಲಮಠದ ಪರಮಪೂಜ್ಯ ಶ್ರೀ ಅಭಿನವ ವಾಗೀಶ ಮಹಾದೇಶಿಕರ್, ಶ್ರೀ ಓಂಕಾರಾಶ್ರಮದ ಜಗದ್ಗುತು ಶ್ರೀ ಮಧುಸೂದನಾನಂದಪುರಿ ಮಹಾಸ್ವಾಮಿಗಳು, ಕಾಗಿನೆಲೆ ಮಹಾಸಂಸ್ಥಾನಮಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು, ಶಿವಮೊಗ್ಗೆ ಜಿಲ್ಲೆ ಶ್ರೀ ನಾರಾಯಣಗುರು ಮಹಸಂಸ್ಥಾನದ ಶ್ರೀ ರೇಣುಕಾನಂದ ಮಹಾಸ್ವಾಮಿಗಳು ಸೇರಿದಂತೆ ವಿವಿಧ ಮಹಾಸಂಸ್ಥಾನಗಳ ಮಹಾಸ್ವಾಮೀಜಿಗಳು ದಿವ್ಯಸಾನಿಧ್ಯ ವಹಿಸಲಿದ್ದಾರೆ.
        ಕುಂಭ ಮೇಳದಲ್ಲಿ ಭಾಗವಹಿಸುವ ಪರಮಪೂಜ್ಯ ಗುರುಗಳನ್ನು ಶ್ರೀ ಗುಂಜಾನರಸಿಂಹಸ್ವಾಮಿ ದೇವಸ್ಥಾನ, ವಿಶ್ವಕರ್ಮ ಬೀದಿ, ಭಗವಾನ್ ಟಾಕೀಸ್ ವೃತ್ತ, ಲಿಂಕ್ ರಸ್ತೆ, ಬಸ್ ನಿಲ್ದಾಣದ ಮೂಲಕ ತ್ರಿವೇಣಿ ಸಂಗಮಕ್ಕೆ ಮಂಗಳವಾದ್ಯ, ವೀರಗಾಸೆ, ಭಜನಾ ತಂಡಗಳು, ಕೊಂಬು-ಕಹಳೆ-ಕಳಶ ಹೊತ್ತ ಸುಮಂಗಲಿಯರು, ಕಂಸಾಳೆ, ಪೂಜಾಕುಣಿತ, ವೀರಭದ್ರಕುಣಿತ, ಗಾರುಡಿಕುಣಿತ, ಕೋಲಾಟ, ವೀರಮಕ್ಕಳ ಕುಣಿತ, ಕೀಲುಕುದುರೆ, ಪಟಕುಣಿತ, ತಮಟೆ, ಬ್ಯಾಂಡ್ ಸೆಟ್, ಸೇವಾದಳ ಮತ್ತು ಸ್ತಬ್ಧಚಿತ್ರಗಳೊಂದಿಗೆ ಮೆರವಣಿಗೆಯಲ್ಲಿ ಕರೆದೊಯ್ಯಲಾಗುವುದು ಎಂದರು
      
       ರಾಷ್ಟ್ರದ ಪವಿತ್ರ ನದಿಗಳ ತ್ರಿವೇಣಿ ಸಂಗಮಕ್ಷೇತ್ರಗಳಲ್ಲಿ ಕುಂಭಮೇಳದಂತಹ ಉತ್ಸವಗಳನ್ನಾಚರಿಸಿ ಪರ್ವಕಾಲದಲ್ಲಿ ಪುಣ್ಯಸ್ನಾನಮಾಡುವ ಪದ್ಧತಿ ಪ್ರಾಚೀನಕಾಲದಿಂದಲೂ ಜಾರಿಯಲ್ಲಿದೆ. ಉತ್ತರಭಾರತದ ಪ್ರಯಾಗ, ಹರಿದ್ವಾರ, ನಾಸಿಕ, ಉಜ್ಜಯಿನಿಗಳಂತಹ ನದಿಸಂಗಮ ಕ್ಷೇತ್ರಗಳಲ್ಲಿ ಆಚರಣೆಯಲ್ಲಿರುವ ಮಹಾಕುಂಭಮೇಳಗಳಲ್ಲಿ ಕೋಟ್ಯಾಂತರ ಮಂದಿ ಶ್ರದ್ಧಾಭಕ್ತಿಗಳಿಂದ ಭಾಗವಹಸಿಸಿ ಪುಣ್ಯಸ್ನಾನ ಮಾಡಿ ಧನ್ಯರಾಗುತ್ತಿದ್ದಾರೆ. ಪುಣ್ಯಾರ್ಜನೆಯ ಈ ಸೌಭಾಗ್ಯದಿಂದ ದಕ್ಷಿಣ ಭಾರತದ ಭಕ್ತರು ವಂಚಿತರಗುತ್ತಿದ್ದುದನ್ನು ಮನಗಂಡ ಕನ್ನಡ ನಾಡಿನ ಪೂಜ್ಯ ಪೀಠಾಧಿಪತಿಗಳಾದ ಶ್ರೀ ಕೈಲಾಸಾಶ್ರಮದ ಶ್ರೀ ತಿರುಚ್ಚಿ ಮಹಾಸ್ವಾಮಿಗಳು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಮಠದ ಜಗದ್ಗುರು ಪರಮಪೂಜ್ಯ ಪದ್ಮಭೂಷಣ ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಗಳು, ಶ್ರೀ ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಮೈಸೂರಿನ ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಮಹಾಸ್ವಾಮಿಗಳು ಹಾಗೂ ಶ್ರೀ ಓಂಕಾರಾಶ್ರಮ ಮಹಾಸಂಸ್ಥಾನದ ಶ್ರೀ ಶಿವಪುರಿಮಹಾಸ್ವಾಮಿಗಳು ತಿ ನರಸಿಪುರದ ತ್ರಿವೇಣಿ ಸಂಗಮದಲ್ಲಿ ಪ್ರತಿ ಮೂರು ವರ್ಷಕೊಮ್ಮ ಕುಂಭಮೇಳ ಆಚರಿಸಲು ನಿರ್ಧಾರ ಕೈಗೊಂಡು 1989 ರಲ್ಲಿ ಪ್ರಥಮ ಬಾರಿಗೆ ಕುಂಭಮೇಳವನ್ನು ಪ್ರಾರಂಭಿಸಿದರು. ಇದುವರೆಗೂ 9 ಕುಂಭಮೇಳವನ್ನು ವಿಜೃಂಭಣೆಯಿಂದ ನಡೆದಿವೆ ಎಂದರು  3 ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮಠಗಳು ಹಾಗೂ ಅನೇಕ ಸಂಘ-ಸಂಸ್ಥೆಗಳು ಅನ್ನದಾಸೋಹ ಸಹ ಏರ್ಪಡಿಸಲಿದೆ. ಈ ಪವಿತ್ರ ಉತ್ಸವವು ಯಾವುದೇ ಜಾತಿ-ಮತ-ಪಂಥಗಳ, ವರ್ಣ-ವರ್ಗಗಳ ಭೇದಬಾವರಹಿತವಾಗಿ ಅತ್ಯಂತ ಸಡಗರ-ಸಂಭ್ರಮಗಳಿಂದ ಸರ್ವಜನಾಂದ ಸಾಂತಿ-ಸೌಹಾರ್ದಗಳ, ಸಂತೋಷ-ಸಾಮರಸ್ಯಗಳ ಸಂಗಮವಾಗಿವೆ. ಇಲ್ಲಿನ ಪುಣ್ಯಸ್ನಾನದ ಸುಸಂದರ್ಭದಲ್ಲಿ ವಿಶ್ವಶಾಂತಿಗಾಗಿ ನದಿ ಸಂಗಮದ ನೆಲೆಯಲ್ಲಿ ಹೋಮ, ಹವನ, ಜಪ-ತಪ ಅಭಿಷೇಕ, ಪೂರ್ಣಾಹುತಿ ಮುಂತದ ಧಾರ್ಮಿಕ ಆಚರಣೆಗಳು ನಡೆಯತ್ತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ತಿಳಿಸಿದರು.
       ಕುಂಭಮೇಳದ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದರು ಮೈಸೂರಿನ ಹೆಚ್ಚುವರಿ ಜಿಲ್ಲಾಧಿಕಾರಿ ವೆಂಕಟೇಶ್ ಅವರು ಮೂರು ವರ್ಷಗಳಿಗೊಮ್ಮೆ ತ್ರಿವೇಣಿ ಸಂಗಮದಲ್ಲಿ ನಡೆಯುವ ಕುಂಭಮೇಳಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತಾಧಿಗಳು ಆಗಮಿಸಿ ಪುಣ್ಯಸ್ನಾನ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಭಕ್ತಾಧಿಗಳಿಗೆ ಬೇಕಾಗುವ ಮೂಲಭೂತ ವ್ಯವಸ್ಥಯಲ್ಲಿ ಯಾವುದೇ ಲೋಪ ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X