Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುವಕನಿಗೆ ಮೆಣಸಿನ ಹುಡಿ ಎರಚಿ ಹಲ್ಲೆ...

ಯುವಕನಿಗೆ ಮೆಣಸಿನ ಹುಡಿ ಎರಚಿ ಹಲ್ಲೆ ನಡೆಸಿದ ಯುವತಿ, ಯುವತಿಯ ಕುಟುಂಬವನ್ನು ಗಡಿಪಾರು ಮಾಡಲು ಗ್ರಾಮಸ್ಥರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ17 Feb 2016 7:27 PM IST
share
ಯುವಕನಿಗೆ ಮೆಣಸಿನ ಹುಡಿ ಎರಚಿ ಹಲ್ಲೆ ನಡೆಸಿದ ಯುವತಿ, ಯುವತಿಯ ಕುಟುಂಬವನ್ನು ಗಡಿಪಾರು ಮಾಡಲು ಗ್ರಾಮಸ್ಥರ ಆಗ್ರಹ

ಮೂಡುಬಿದಿರೆ: ತನ್ನ ದ್ವಿಚಕ್ರದಲ್ಲಿ ಮನೆಯಿಂದ ಆಸ್ಪತ್ರೆಗೆ ಹೋಗುತಿದ್ದ ಯುವಕನೋರ್ವನನ್ನು ಯುವತಿಯೊಬ್ಬಳು ಅಡ್ಡಕಟ್ಟಿ ಮೆಣಸಿನ ಹುಡಿ ಎರಚಿ, ಹಲ್ಲೆ ನಡೆಸಿದ ಘಟನೆ ತೆಂಕಮಿಜಾರು ಗ್ರಾ.ಪಂ ವ್ಯಾಪ್ತಿಯ ಬಡಗ ಮಿಜಾರಿನ ಕೊಪ್ಪದ ಕುಮೇರು ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.  ಕೊಪ್ಪದ ಕುಮೇರ್ ನಿವಾಸಿ ರವಿ ದೇವಾಡಿಗ ಎಂಬವರ ಪುತ್ರಿ ಅಕ್ಷತಾ ಎಂಬಾಕೆಯೇ ಹಲ್ಲೆ ನಡೆಸಿದ ಯುವತಿ. ಸೋಮವಾರ ರಾತ್ರಿ ರವಿ ದೇವಾಡಿಗ ಎಂಬವರಿಂದ ಹಲ್ಲೆಗೊಳಗಾಗಿದ್ದ ದಿನೇಶ್ ಪೂಜಾರಿ ಎಂಬವರೇ ಇದೀಗ ರವಿ ಪೂಜಾರಿಯ ಪುತ್ರಿಯಿಂದ ಹಲ್ಲೆಗೊಳಗಿರುವ ಯುವಕ. ಭಾನುವಾರ ರವಿ ದೇವಾಡಿಗ ಹಾಗೂ ಅವರ ಪುತ್ರಿಯರು ದಿನೇಶ್ ಅವರ ಮೇಲೆ ಹಲ್ಲೆ ನಡೆಸಿದ್ದು, ದಿನೇಶ್ ಹಾಗೂ ಸ್ಥಳೀಯರು ಮಂಗಳವಾರ ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಲ್ಲೆ ಪ್ರಕರಣದಲ್ಲಿ ಗಾಯಗೊಳಗಾಗಿದ್ದ ದಿನೇಶ್ ಅವರು ಬುಧವಾರದಂದು ಮೂಡುಬಿದಿರೆ ಆಸ್ಪತ್ರೆಗೆ ಹೋಗುವ ಸಂದರ್ಭದಲ್ಲಿ, ರವಿ ದೇವಾಡಿಗನ ಪುತ್ರಿಯರು ದ್ವಿಚಕ್ರ ವಾಹನ ಅಡಗಟ್ಟಿ ಮತ್ತೆ ಹಲ್ಲೆ ನಡೆಸಿದ್ದಲ್ಲದೆ, ಬಳಿಕ ಮೆಣಸಿನ ಹುಡಿ ಎರಚಿ, ಅವಾಚ್ಯ ಶಬ್ದಗಳಿಂದ ಬೈದಿದ್ದಾಳೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.  ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಅನಂತಪದ್ಮನಾಧ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದಾಗ, ರವಿ ದೇವಾಡಿಗ ಹಾಗೂ ಆತನ ಪುತ್ರಿಯರು ಅಮಾಯಕರ ಮೇಲೆ ಹಲ್ಲೆ ನಡೆಸುವುದು, ಯುವಕರ ಮೇಲೆ ಸುಳ್ಳು ಆರೋಪ ಮಾಡುತ್ತಿರುವುದು ಹೆಚ್ಚಾಗುತ್ತಿದ್ದು, ಸೂಕ್ತ ಕಾನೂನು ಕ್ರಮ ಕೈಗೊಂಡು, ಅವರನ್ನು ಬಡಗಮಿಜಾರು ಗ್ರಾಮದಿಂದ ಗಡಿಪಾರು ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.  ರವಿ ದೇವಾಡಿಗ ಕುಟುಂಬವು ಈ ಹಿಂದೆ ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕೋಟೆಬಾಗಿಲು-ಸುಭಾಸ್‌ನಗರದಲ್ಲಿ ವಾಸಿಸುತ್ತಿತ್ತು ಈ ಸಂದರ್ಭದಲ್ಲಿ ಕೂಡ ಈ ಕುಟುಂಬ ಇದೇ ರೀತಿ ಅವಾಂತರ ಮಾಡಿ, ಸ್ಥಳೀಯ ಯುವಕರ ಮೇಲೆ ಸುಳ್ಳು ಆರೋಪ ಮಾಡಿರುವ ಕೇಸು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

 ಜಾರಿಗೊಂಡ ಮಾನವ ಹಕ್ಕು ಆಯೋಗ
ಕಳೆದ ವರ್ಷ ಸುಭಾಷ್‌ನಗರದಲ್ಲಿ ಇದೇ ರೀತಿ ಯುವಕರ ಮೇಲೆ ಹಲ್ಲೆ ನಡೆಸಿದಾಗ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಅನಂತಪದ್ಮನಾಭ ಅವರು ವಿಚಾರಣೆಗೆ ತೆರಳಿದ್ದರು. ಆಗ ಪೊಲೀಸರು ತಮ್ಮ ಮೇಲೆ ಕೈ ಮಾಡಲು ಬಂದಿದ್ದಾರೆಂದು ಆರೋಪಿಸಿ ಮಾನವ ಹಕ್ಕು ಆಯೋಗಕ್ಕೆ ಮತ್ತು ಪೊಲೀಸ್ ಮೇಲಾಧಿಕಾರಿಗಳಿಗೆ ಯುವತಿಯರು ದೂರು ನೀಡಿದ್ದರು. ಯುವತಿಯರ ದೂರನ್ನು ಕೈಗೆತ್ತಿಕೊಂಡಿದ್ದ ಮಾನವ ಹಕ್ಕು ಆಯೋಗವು ಪೊಲೀಸ್ ಅಧಿಕಾರಿಗಳದ್ದೇ ತಪ್ಪೆಂದು ವಾದಿಸಿದ್ದರಲ್ಲದೆ, ಕ್ಷಮೆಯಾಚಿಸುವಂತೆ ಸೂಚಿಸಿದ್ದರು. ಆದರೆ ಇದೀಗ ಮತ್ತೆ ರವಿ ದೇವಾಡಿಗ ಕುಟುಂಬದಿಂದ ಯುವಕನಿಗೆ ಹಲ್ಲೆಯಾಗಿದ್ದು ಈ ಬಗ್ಗೆ ಮಾನವ ಹಕ್ಕು ಆಯೋಗಕ್ಕೆ ಪೋನ್ ಕರೆಯ ಮೂಲಕ ಕೆ.ಪಿ ಜಗದೀಶ ಅಧಿಕಾರಿ ಅವರು ತಿಳಿಸಿದಾಗ, ಈ ಕುಟುಂಬದ ಬಗ್ಗೆ ಈ ಹಿಂದೆ ತಮಗೆ ಸರಿಯಾಗಿ ಗೊತ್ತಿಲ್ಲದೆ ತಾವು ತಪ್ಪು ಮಾಡಿದ್ದೇವೆ. ಈ ಪ್ರಕರಣಕ್ಕೆ ತಾವು ಕೈ ಹಾಕಲ್ಲ ಎಂದು ಜಾರಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X