ಪಾಕ್‌ಗೆ ಎಫ್-16 ಮಾರಾಟ ಭಾರತಕ್ಕೆ ಕಳವಳದ ವಿಷಯವಲ್ಲ: ಅಮೆರಿಕ
ವಾಶಿಂಗ್ಟನ್, ಫೆ. 17: ಎಂಟು ಎಫ್-16 ಯುದ್ಧ ವಿಮಾನಗಳನ್ನು ಪಾಕಿಸ್ತಾನಕ್ಕೆ ಮಾರಾಟ ಮಾಡಲು ಅಮೆರಿಕ ತೆಗೆದುಕೊಂಡಿರುವ ನಿರ್ಧಾರ ಭಾರತಕ್ಕೆ ಕಳವಳದ ಸಂಗತಿಯಾಗಬಾರದು ಎಂದು ಅಮೆರಿಕದ ರಕ್ಷಣಾ ಇಲಾಖೆ ಪೆಂಟಗಾನ್ ಇಂದು ಹೇಳಿದೆ.
ನಿರ್ಧಾರ ತೆಗೆದುಕೊಳ್ಳುವ ಸಮಯದಲ್ಲಿ ಪ್ರಾದೇಶಿಕ ಭದ್ರತಾ ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ಅದು ತಿಳಿಸಿದೆ.
‘‘ಎಫ್-16 ಯುದ್ಧ ವಿಮಾನಗಳನ್ನು ಮಾರಾಟ ಮಾಡುವ ನಿರ್ಧಾರವು ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಕ್ಕೆ ನೆರವು ನೀಡಲಿದೆ ಹಾಗೂ ಅಮೆರಿಕದ ರಾಷ್ಟ್ರೀಯ ಭದ್ರತೆ ಹಿತಾಸಕ್ತಿಗೆ ಅನುಗುಣವಾಗಿದೆ ಎಂದು ನಾವು ಭಾವಿಸುತ್ತೇವೆ’’ ಎಂದು ಪೆಂಟಗಾನ್ ಪತ್ರಿಕಾ ಕಾರ್ಯದರ್ಶಿ ಪೀಟರ್ ಕುಕ್ ಹೇಳಿದರು.
Next Story





