ಫಲಿತಾಂಶ ಪ್ರಕಟ
ಬೆಂಗಳೂರು, ಫೆ. 17: ಆರೋಗ್ಯ ಇಲಾಖೆಯ ಅರೆ ವೈದ್ಯಕೀಯ ಸಿಬ್ಬಂದಿ ನೇಮಕಾತಿ ಕಡ್ಡಾಯ ಕನ್ನಡ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದೆ.
ಹಿಂದಿನ ಸಾಲಿನ ಅಕ್ಟೋಬರ್‌ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಸೂಚನೆಯನ್ವಯ ಅರೆವೈದ್ಯಕೀಯ ಸಿಬ್ಬಂದಿ ನೇಮಕಾತಿ ಕೋರಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಲ್ಲಿ ಹತ್ತನೆ ತರಗತಿಯಲ್ಲಿ ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕನ್ನಡ ವಾಸಂಗ ಮಾಡಿಲ್ಲದ ಅಭ್ಯರ್ಥಿಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ಜನವರಿ 30 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ನಡೆಸಿತ್ತು.
ಒಟ್ಟು 262 ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆ ಬರೆದಿದ್ದು, ಫಲಿತಾಂಶವನ್ನು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ನೋಡಬಹುದಾಗಿದೆ ಎಂದು ಪ್ರಕಟನೆ ಹೇಳಿದೆ.
Next Story





