ವಿಂಡೀಸ್ ಆಲ್‌ರೌಂಡರ್ ಕೂಪರ್ ವಿರುದ್ಧ ಶಂಕಾಸ್ಪದ ಬೌಲಿಂಗ್ ಆರೋಪ

ಜಮೈಕಾ, ಫೆ.17: ವೆಸ್ಟ್‌ಇಂಡೀಸ್ ಆಲ್‌ರೌಂಡರ್ ಕಿವೋನ್ ಕೂಪರ್ ದುಬೈನಲ್ಲಿ ನಡೆಯುತ್ತಿರುವ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಶಂಕಾಸ್ಪದ ಬೌಲಿಂಗ್ ಆರೋಪಕ್ಕೆ ಗುರಿಯಾಗಿದ್ದಾರೆ.
27ರ ಹರೆಯದ ಕೂಪರ್ ವೆಸ್ಟ್‌ಇಂಡೀಸ್‌ನ ಪರ ಇನ್ನಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಬೇಕಾಗಿದೆ. ಇದೀಗ ಅವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಟ್ರಿನಿಡಾಡ್ ಆ್ಯಂಡ್ ಟೊಬಾಗೊ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಲಾಹೋರ್ ತಂಡದ ಬೌಲರ್ ಆಗಿರುವ ಕೂಪರ್ ಬೌಲಿಂಗ್ ಶೈಲಿಯ ಬಗ್ಗೆ ಅಂಪೈರ್‌ಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಅವರ ಹೆಸರನ್ನು ಎಚ್ಚರಿಕೆಯ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಟೂರ್ನಿಯ ಆಯೋಜಕರು ತಿಳಿಸಿದ್ದಾರೆ.
ಕೂಪರ್ ಮೇ 2014ರಲ್ಲಿ ನಡೆದ ಐಪಿಎಲ್‌ನಲ್ಲಿ ಶಂಕಾಸ್ಪದ ಬೌಲಿಂಗ್ ಶೈಲಿಯ ಆರೋಪಕ್ಕೆ ಗುರಿಯಾಗಿದ್ದರು. ಆ ನಂತರ ಅವರು ದೋಷಮುಕ್ತರಾಗಿದ್ದರು.
Next Story





